ಸಾಮಾಜಿಕ ಜಾಲತಾಣದ ಮೇಲೆ ಬೆಂಗಳೂರು ಪೊಲೀಸರು ನಿಗಾ : 18 ಮಂದಿ ಸೆರೆ, 37 ಕೇಸು!

Kannadaprabha News, Ravi Janekal |   | Kannada Prabha
Published : Oct 10, 2025, 09:46 AM IST
Bengaluru police 18 arrested for provocative posts in social media

ಸಾರಾಂಶ

ಕಳೆದ ಒಂದು ವರ್ಷದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷ ಸುಳ್ಳು ಸುದ್ದಿ ಹರಡಿದ ಆರೋಪದ ಮೇಲೆ ಬೆಂಗಳೂರು ಪೊಲೀಸರು 37 ಪ್ರಕರಣಗಳನ್ನು ದಾಖಲಿಸಿ 18 ಜನರ ಬಂಧಿಸಿದ್ದಾರೆ. ಸಮಾಜದ ಸ್ವಾಸ್ಥ್ಯ ಕೆಡಿಸುವವರ ಮೇಲೆ ನಿಗಾ, ಪ್ರಚೋದನಕಾರಿ ಪೋಸ್ಟ್‌ ಹಂಚಿಕೊಳ್ಳದಂತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ.

ಬೆಂಗಳೂರು (ಅ.10) : ಕಳೆದ ಒಂದು ವರ್ಷದ ಅವಧಿಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಕೋಮು ದ್ವೇಷ, ಸುಳ್ಳು ಸುದ್ದಿ ಹಾಗೂ ಪ್ರಚೋದನಕಾರಿ ಬರಹ ಪ್ರಕಟಿಸಿದ ಸಂಬಂಧ 37 ಪ್ರಕರಣಗಳನ್ನು ದಾಖಲಿಸಿ 18 ಆರೋಪಿಗಳನ್ನು ನಗರ ಪೊಲೀಸರು ಬಂಧಿಸಿದ್ದಾರೆ.

ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು, ನಗರದ ಎಲ್ಲಾ ಠಾಣೆಗಳಲ್ಲಿ ಸಾಮಾಜಿಕ ಜಾಲತಾಣಗಳ ನಿರ್ವಹಣಾ ಘಟಕಗಳ (ಐಒಒಎ) ಸಭೆ ನಡೆಸಿ ಗುರುವಾರ ಮಾಹಿತಿ ಪಡೆದರು.

ಸಾಮಾಜಿಕ ಜಾಲತಾಣಗಳಲ್ಲಿ ಕೋಮು ದ್ವೇಷ, ಸುಳ್ಳು ಸುದ್ದಿ, ಅವಹೇಳನಕಾರಿ. ಪ್ರಚೋದನಾಕಾರಿ ಪೋಸ್ಟ್‌ಗಳನ್ನು ಬಿತ್ತರಿಸಿ ಸಮಾಜದ ಸ್ವಾಸ್ಥ್ಯವನ್ನು ಹದಗೆಡಿಸುವ ವ್ಯಕ್ತಿಗಳ ಮೇಲೆ ನಿಗಾವಹಿಸಲಾಗಿದೆ. ಈ ರೀತಿ ಕಣ್ಗಾವಲು ವೇಳೆ ಕೆಲವು ಪ್ರಚೋದನಕಾರಿ ಪೋಸ್ಟ್‌ಗಳು ಪತ್ತೆ ಹಚ್ಚಿ ಕಾನೂನು ಕ್ರಮ ಜರುಗಿಸಲಾಗಿದೆ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: Sahyog Portal: ಸಾಮಾಜಿಕ ಜಾಲತಾಣಗಳಿಗೆ ಅನಿಯಂತ್ರಿತ ಸ್ವಾತಂತ್ರ್ಯ ಕೊಟ್ಟರೆ ಅರಾಜಕತೆ- ಹೈಕೋರ್ಟ್‌

ಕಳೆದೊಂದು ವರ್ಷದಲ್ಲಿ ಒಟ್ಟು 37 ಪ್ರಕರಣಗಳನ್ನು ದಾಖಲಿಸಲಾಗಿದ್ದು, 18 ಆರೋಪಿಗಳನ್ನು ಬಂಧಿಸಲಾಗಿದೆ. ಅಲ್ಲದೆ ಈ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಸಾಮಾಜಿಕ ಮಾಧ್ಯಮಗಳಲ್ಲಿನ 41 ಖಾತೆಗಳು ಹಾಗೂ ಆರೋಪಿತರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದ 19 ಪೋಸ್ಟ್‌ಗಳನ್ನು ತೆಗೆದು ಹಾಕಿಲಾಗಿದೆ. ಸಮಾಜದ ಸ್ವಾಸ್ಥ್ಯವನ್ನು ಕಾಪಾಡಬೇಕು ಹಾಗೂ ಈ ರೀತಿಯ ಪೋಸ್ಟ್‌ಗಳಿಗೆ ಕಮೆಂಟ್ ಮಾಡುವುದಾಗಲಿ ಅಥವಾ ಆ ಮಾಹಿತಿಯನ್ನು ಹಂಚಿಕೊಳ್ಳುವ ಮುನ್ನ ಸತ್ಯಾಸತ್ಯತೆ ಪರಿಶೀಲಿಸಬೇಕು. ಇಲ್ಲದೆ ಹೋದರೆ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಸಾರ್ವಜನಿಕರಿಗೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌