ಬೆಂಗಳೂರು ನವ ಭಾರತದ ಸಂಕೇತ, 'ಆಪರೇಷನ್ ಸಿಂದೂರ್' ಯಶಸ್ಸಿನ ಹಿಂದೆ ಕರ್ನಾಟಕದ ಯುವ ತಂತ್ರಜ್ಞರ ಶ್ರಮವಿದೆ: ಪ್ರಧಾನಿ ಮೋದಿ ಮೆಚ್ಚುಗೆ

Published : Aug 10, 2025, 05:58 PM IST
pm modi

ಸಾರಾಂಶ

ಬೆಂಗಳೂರಿನ ಯುವ ತಂತ್ರಜ್ಞರ ಆವಿಷ್ಕಾರಗಳು ಆಪರೇಷನ್ ಸಿಂದೂರ್‌ನ ಯಶಸ್ಸಿಗೆ ಪ್ರಮುಖ ಕಾರಣವಾಗಿದ್ದು, ಪಾಕಿಸ್ತಾನದ ಭಯೋತ್ಪಾದಕ ಶಿಬಿರಗಳನ್ನು ನಾಶಪಡಿಸುವಲ್ಲಿ ಭಾರತೀಯ ಸೇನೆಗೆ ಸಹಾಯ ಮಾಡಿದೆ. ಪ್ರಧಾನಿ ಮೋದಿ ಈ ಸಾಧನೆಗಾಗಿ ಬೆಂಗಳೂರಿನ ಯುವಜನರನ್ನು ಶ್ಲಾಘಿಸಿದ್ದಾರೆ.

ಬೆಂಗಳೂರು (ಆಗಸ್ಟ್ 10): ಬೆಂಗಳೂರು ನವ ಭಾರತದ ಸಂಕೇತವಾಗಿ ಮಿಂಚಿದ್ದು, ಇಲ್ಲಿನ ಯುವ ತಂತ್ರಜ್ಞರ ಆವಿಷ್ಕಾರಗಳು ಭಾರತೀಯ ಸಶಸ್ತ್ರ ಪಡೆಗಳಿಗೆ ಅತ್ಯಾಧುನಿಕ ತಂತ್ರಜ್ಞಾನವನ್ನು ಒದಗಿಸಿ, ಆಪರೇಷನ್ ಸಿಂದೂರ್ ಮೂಲಕ ಪಾಕಿಸ್ತಾನದ ಭಯೋತ್ಪಾದಕ ಶಿಬಿರಗಳನ್ನು ನಾಶಪಡಿಸಿ ಯಶಸ್ಸು ಕಂಡಿದೆ. ಈ ಸಾಧನೆಗಾಗಿ ಬೆಂಗಳೂರಿನ ಯುವಜನರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.

ಇಂದು ಬೆಂಗಳೂರಿನಲ್ಲಿ ಮೆಟ್ರೋದ ಹಳದಿ ಮಾರ್ಗವನ್ನು ಉದ್ಘಾಟಿಸಿದ ಪ್ರಧಾನಿ, ನಂತರ ಎಲೆಕ್ಟ್ರಾನಿಕ್ಸ್ ಸಿಟಿಯ ಐಐಐಟಿ ಆಡಿಟೋರಿಯಂನಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು.

ಆಪರೇಷನ್ ಸಿಂದೂರ್‌ನ ಯಶಸ್ಸು ಭಾರತದ ಹೊಸ ಮುಖವನ್ನು ಜಗತ್ತಿಗೆ ತೋರಿಸಿದೆ. ಭಯೋತ್ಪಾದಕರ ಅಡಗುತಾಣಗಳನ್ನು ನಾಶಪಡಿಸಿ, ಪಾಕಿಸ್ತಾನವನ್ನು ಕೆಲವೇ ಗಂಟೆಗಳಲ್ಲಿ ಮಂಡಿಯೂರಿಸಿದ ಶಕ್ತಿ ನಮ್ಮ ತಂತ್ರಜ್ಞಾನದಿಂದ ಸಾಧ್ಯವಾಯಿತು. ಈ ತಾಂತ್ರಿಕ ಪರಾಕ್ರಮದಲ್ಲಿ ಬೆಂಗಳೂರು ಮತ್ತು ಕರ್ನಾಟಕದ ಯುವಕರು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಅವರು ಹೇಳಿದರು.

PM Modi said that Bengaluru Shines in Operation Sindoor Metro Yellow Line Launch & Tech Triumph

ಆಪರೇಷನ್ ಸಿಂದೂರ್‌ನ ಯಶಸ್ಸಿನ ಹಿಂದೆ ಬೆಂಗಳೂರಿನ ಯುವ ತಂತ್ರಜ್ಞರ ಶ್ರಮವಿದೆ. ಇದಕ್ಕಾಗಿ ನಾನು ನಿಮ್ಮೆಲ್ಲರನ್ನು ಅಭಿನಂದಿಸುತ್ತೇನೆ ಎಂದು ಮೋದಿ ಕನ್ನಡಿಗರನ್ನು ಕೊಂಡಾಡಿದರು. ಬೆಂಗಳೂರನ್ನು ಶ್ರೇಷ್ಠ ಜಾಗತಿಕ ನಗರವೆಂದು ಬಣ್ಣಿಸಿದ ಅವರು, ನಾವು ಜಾಗತಿಕ ವೇದಿಕೆಯಲ್ಲಿ ಸ್ಪರ್ಧಿಸಬೇಕು, ಮುನ್ನಡೆಯಬೇಕು. ನಮ್ಮ ನಗರಗಳು ಪರಿಣಾಮಕಾರಿಯಾಗಿ ಮತ್ತು ವೇಗವಾಗಿ ಕಾರ್ಯನಿರ್ವಹಿಸಬೇಕು ಎಂದರು. ಈ ಐತಿಹಾಸಿಕ ಕಾರ್ಯಾಚರಣೆಯ ಯಶಸ್ಸು ಮತ್ತು ಬೆಂಗಳೂರಿನ ಕೊಡುಗೆಯಿಂದ ಭಾರತದ ತಾಂತ್ರಿಕ ಸಾಮರ್ಥ್ಯ ಜಗತ್ತಿನಾದ್ಯಂತ ಗಮನ ಸೆಳೆದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸ್ತ್ರಿರೋಗ ತಜ್ಞೆ, ಪುತ್ರನ ದುರಂತ ಅಂತ್ಯ, ರಾತ್ರಿ ಜಗಳವಾಡಿದ ಇಬ್ಬರು ಬೆಳಗ್ಗೆ ಶವವಾಗಿ ಪತ್ತೆ
ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!