
ಬೆಂಗಳೂರು (ಅ.3):ಸಂಜೆ ಸುರಿದ ಧಾರಾಕಾರ ಮಳೆಗೆ ಎಲೆಕ್ಟ್ರಾನಿಕ್ ಸಿಟಿಯ ಸಮೀಪದ ವೀರಸಂದ್ರ ಸಿಗ್ನಲ್ ಬಳಿಯ ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಜಲಾವೃತಗೊಂಡು ಕೆರೆಯಂತಾಗಿದೆ.
ಭಾರೀ ಪ್ರಮಾಣದ ಮಳೆ ನೀರು ರಸ್ತೆಯಲ್ಲಿ ನಿಂತಿದ್ದು, ವಾಹನ ಸವಾರರು ಸಂಚಾರಕ್ಕೆ ಪರದಾಡುವಂತಾಯ್ತು. ಪ್ರತಿ ಮಳೆಗೆ ಈ ರಸ್ತೆ ಜಲಾವೃತಗೊಳ್ಳುತ್ತಿದ್ದರೂ, ಹೆದ್ದಾರಿ ಪ್ರಾಧಿಕಾರದಿಂದ ಸೂಕ್ತ ಒಳಚರಂಡಿ ವ್ಯವಸ್ಥೆಯಿಲ್ಲದಿರುವುದರಿಂದ ಸಮಸ್ಯೆ ವರ್ಷಗಟ್ಟಲೇ ಬಗೆಹರಿಯದೇ ಉಳಿದಿದೆ. ಇದರಿಂದ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ತೀವ್ರ ತೊಂದರೆ ಎದುರಿಸುತ್ತಿದ್ದಾರೆ.
ಮಳೆಗೆ ಫಾಲ್ಸ್ ಆದ ಫ್ಲೈಓವರ್!
ಇದೇ ವೇಳೆ, ಎಲೆಕ್ಟ್ರಾನಿಕ್ ಸಿಟಿಯಿಂದ ಸಿಲ್ಕ್ ಬೋರ್ಡ್‌ಗೆ ತೆರಳುವ ಎಲಿವೇಟೆಡ್ ಫ್ಲೈಓವರ್‌ನಲ್ಲಿ ಮಳೆ ನೀರು ಸಂಗ್ರಹವಾಗಿ, ಗಾರ್ವೇಬಾವಿಪಾಳ್ಯದ ಬಳಿ 'ಮಿನಿ ಫಾಲ್ಸ್' ರೀತಿಯಲ್ಲಿ ಧುಮ್ಮಿಕ್ಕುತ್ತಿದೆ. ಫ್ಲೈಓವರ್‌ನಿಂದ ಮಳೆ ನೀರು ಹೊರಹೋಗಲು ಸೂಕ್ತ ವ್ಯವಸ್ಥೆ ಇಲ್ಲದಿರುವುದರಿಂದ ಈ ಅವ್ಯವಸ್ಥೆ ಸೃಷ್ಟಿಯಾಗಿದ್ದು, ಬಿಇಟಿಪಿಎಲ್ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರು ಕಿಡಿಕಾರುತ್ತಿದ್ದಾರೆ.
ಈ ಘಟನೆಗಳಿಂದ ಎಲೆಕ್ಟ್ರಾನಿಕ್ ಸಿಟಿಯ ಸಂಚಾರ ವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಅಧಿಕಾರಿಗಳಿಂದ ತಕ್ಷಣದ ಕ್ರಮಕ್ಕೆ ವಾಹನ ಸವಾರರು ಒತ್ತಾಯಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ