
ನೆಲಮಂಗಲ (ಅ.22): ಬೆಂಗಳೂರು ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಇಂದು ಭಾರೀ ಮಳೆಯಾಗುತ್ತಿದೆ. ಧಾರಾಕಾರ ಸುರಿದ ಮಳೆಗೆ ಸೇತುವೆ ಕುಸಿದು ಬಿದ್ದ ಘಟನೆ ನೆಲಮಂಗಲ ರಸ್ತೆಯ ಚಿಕ್ಕಿಬಿದರಕಲ್ಲು ಗ್ರಾಮದ ಬಳಿ ನಡೆದಿದೆ.
ಗ್ರಾಮದ ರಾಮನ ದೇವಾಲಯಕ್ಕೆ ನಿರ್ಮಾಣ ಮಾಡಿದ್ದ ಸೇತುವೆ. ಇದು ನೆಲಮಂಗಲ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿದ್ದ ಸೇತುವೆಯಾಗಿತ್ತು. ಕುಸಿದು ಬಿದ್ದ ಪರಿಣಾಮ ರಾಷ್ಟ್ರೀಯ ಹೆದ್ದಾರಿ ಸರ್ವಿಸ್ ರಸ್ತೆಯಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿ ನೆಲಮಂಗಲ ಸಂಚಾರಿ ಪೊಲೀಸರಿಂದ ಟ್ರಾಫಿಕ್ ನಿಯಂತ್ರಣಕ್ಕೆ ಹರಸಾಹಸ ಪಡಬೇಕಾಯಿತು.
Viral Video: ಬ್ರ್ಯಾಂಡ್ ಬೆಂಗಳೂರು ಅಂತಾ ಎದೆ ಬಡಿದುಕೊಳ್ಳೋ ಡಿಸಿಎಂ ಡಿಕೆಶಿ ನೋಡ್ಲೇಬೇಕಾದ ರಿಪೋರ್ಟ್!
ಕಳೆದ ನಾಲ್ಕೈದು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಅವಘಡ ಸಂಭವಿಸಿದೆ. ಮಳೆ ಬರುವಾಗ ವಾಹನ ಸವಾರರು ದೇವಾಲಯದ ಬಳಿ ಆಸರೆ ಪಡೆದಿದ್ರು. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ಘಟನೆ ಮಾಹಿತಿ ತಿಳಿದು ಸ್ಥಳಕ್ಕೆ ಮಾದನಾಯಕಹಳ್ಳಿ ನಗರಸಭೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ದುರಸ್ತಿ ಕಾರ್ಯಕ್ಕೆ ಮುಂದಾದರು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ