ಬೆಂಗಳೂರಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಹಲವು ರಸ್ತೆಗಳು ಜಲಾವೃತಗೊಂಡಿದೆ. ಇದರ ಬೆನ್ನಲ್ಲೇ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮುಂದಿನ 5 ದಿನ ರಾಜ್ಯಕ್ಕೆ ಭಾರಿ ಮಳೆ ಮುನ್ಸೂಚನೆ ನೀಡಿದೆ.
ಬೆಂಗಳೂರು(ಅ.05) ಕಳೆದ ಕೆಲ ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರಿ ಮಳೆಯಾಗುತ್ತಿದೆ. ಇಂದು ಕೂಡ ಬೆಂಗಳೂರಿನಲ್ಲಿ ಭರ್ಜರಿ ಮಳೆಯಾಗಿದೆ. ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣದಲ್ಲಿದ್ದ ಬೆಂಗಳೂರು ಸಂಜೆಯಾಗುತ್ತಿದ್ದಂತೆ ಭಾರಿ ಮಳೆಗೆ ಸಾಕ್ಷಿಯಾಗಿದೆ. ಸತತ ಮಳೆಯಿಂದ ಬೆಂಗಳೂರಿನ ಹಲವು ರಸ್ತೆಗಳು ಜಲಾವೃತಗೊಂಡಿದೆ. ಇದರಿಂದ ವಾಹನ ಸವಾರರು ಪರದಾಡಿದ್ದಾರೆ. ಶನಿವಾರದ ಕಾರಣ ದೂರದ ಊರಿಗೆ ತೆರಳುವ ಜನರು ಕೂಡ ಪರಾಡಿದ್ದಾರೆ.ಇದರ ಜೊತೆಗೆ ಹವಾಮಾನ ಇಲಾಖೆ ಎಚ್ಚರಿಕೆಯೊಂದನ್ನು ನೀಡಿದೆ. ಮುಂದಿನ 5 ದಿನ ಕರ್ನಾಟಕದ ಹಲೆವೆಡೆ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ.
ಬೆಂಗಳೂರಿನ ಟೌನ್ ಹಾಲ್, ಕಾರ್ಪೋರೇಷನ್ ಸರ್ಕಲ್ ,ಕೆ.ಆರ್ ಮಾರ್ಕೆಟ್,ಮೆಜೆಸ್ಟಿಕ್ ಸುತ್ತಮುತ್ತ ಭಾರೀ ಮಳೆಯಾಗಿದೆ. ಇಲ್ಲಿನ ರಸ್ತೆಗಳು ಕೆರೆಯಂತಾಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಮಳೆಯಿಂದಾಗಿ ಟ್ರಾಫಿಕ್ ಜಾಮ್ ಕೂಡ ಹೆಚ್ಚಾಗಿದೆ. ಅಕ್ಟೋಬರ್ 8ರ ವರೆಗೆ ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಜಿಲ್ಲೆಗಳಿಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ.
ಬೆಂಗಳೂರಿಗೆ ನೀರು ಸರಬರಾಜಿನಲ್ಲಿ ವ್ಯತ್ಯಯ: ಮಳೆಯಿಂದ ಟಿಕೆ ಹಳ್ಳಿ ಟ್ರಾನ್ಸ್‌ಫಾರ್ಮರ್ ಹಾನಿ
ಕರ್ನಾಟಕದಲ್ಲಿ ಮುಂದಿನ 5 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಈ ಪೈಕಿ ದಕ್ಷಿಣ, ಉತ್ತರ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗಲಿದೆ ಎಂದು ಎಚ್ಚರಿಸಿದೆ. ಇಂದಿನಿಂದ ಅಕ್ಟೋಬರ್ 9ರ ವರೆಗೆ ಮಳೆ ವ್ಯಾಪಕವಾಗಿ ಸುರಿಯಲಿದೆ ಎಂದಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಬೆಂಗಳೂರು, ದಾವಣಗೆರೆ ಜಿಲ್ಲೆ, ಚಿಕ್ಕಮಂಗಳೂರು, ಹಾಸನ, ಚಿತ್ರದುರ್ಗ, ಬಳ್ಳಾರಿ, ಕೋಲಾರ, ರಾಮನಗರ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆಯನ್ನು ಹವಾಮಾನ ಇಲಾಖೆ ಸೂಚಿಸಿದೆ. ಈ ಭಾಗದಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ.
ಮೈಸೂರು ದಸರಾ ಉತ್ಸವ ಅದ್ಧೂರಿಯಾಗಿ ಆರಂಭಗೊಂಡು ಪ್ರತಿ ದಿನ ಹಲವು ಸಾಂಸ್ಕೃತಿ ಕಾರ್ಯಕ್ರಮಗಳು ನಡೆಯುತ್ತಿದೆ. ಆದರೆ ಇಂದು ಜಿಟಿ ಜಿಟಿ ಮಳೆ ಮೈಸೂರು ದಸರಾ ಹಬ್ಬಕ್ಕೆ ಅಡ್ಡಿಯಾಗಿತ್ತು. ಅರಮನೆ ಆವರಣದ ವೇದಿಕೆಯಲ್ಲಿ ನಡೆಯುತ್ತಿರುವ ಸಾಂಸ್ಕೃತಿ ಕಾರ್ಯಕ್ರಮದ ವೇಳೆ ಜಿಟಿ ಜಿಟಿ ಮಳೆ ಆರಂಭಗೊಂಡಿದೆ. ಜಿಟಿಜಿಟಿ ಮಳೆಯ ನಡುವೆಯೂ ಕೊಡೆ ಹಿಡಿದು ಆಸಕ್ತರು ಸಂಗೀತ ಆಲಿಸಿದ್ದಾರೆ. ಮೈಸೂರಿನಲ್ಲಿ ಸಂಜೆಯಿಂದಲೂ ಬಿಟ್ಟುಬಿಡದೆ ಮಳೆ ಸುರಿಯುತ್ತಿದೆ.
ನವರಾತ್ರಿ ಹಬ್ಬ ಆಚರಣೆ ನಡೆಯುತ್ತಿರುವ ನಡುವೆ ಭಾರಿ ಮಳೆಯಾಗುತ್ತಿದೆ. ಇದರಿಂದ ನವರಾತ್ರಿ ಹಬ್ಬದ ಆಚರಣೆಗಳಿಗೂ ಅಡ್ಡಿಯಾಗಿದೆ. ಈ ಬಾರಿಯ ನವರಾತ್ರಿ ಮೇಲೆ ಸಂಪೂರ್ಣವಾಗಿ ಮಳೆಯ ಕಾರ್ಮೋಡ ಇರಲಿದೆ ಅನ್ನೋದು ಹವಾಮಾನ ಇಲಾಖೆಯ ಸೂಚನೆಯಾಗಿದೆ.
ಲಕ್ಷದ್ವೀಪದಿಂದ ಬೀಸುತ್ತಿದೆ ಚಂಡಮಾರುತದ ಗಾಳಿ: ಬೆಂಗಳೂರಿನಲ್ಲಿ ಅ.7ರವರೆಗೆ ಭಾರಿ ಮಳೆ