ಬೆಂಗಳೂರಿನ ಎಲ್ಲ ನಿವಾಸಿಗಳ ಮನೆ ಬಾಗಿಲಿಗೆ ಉಚಿತ ಆಸ್ತಿ ಪತ್ರ ವಿತರಣೆ: ಡಿ.ಕೆ. ಶಿವಕುಮಾರ್

Published : Mar 24, 2025, 08:07 PM ISTUpdated : Mar 24, 2025, 08:27 PM IST
ಬೆಂಗಳೂರಿನ ಎಲ್ಲ ನಿವಾಸಿಗಳ ಮನೆ ಬಾಗಿಲಿಗೆ ಉಚಿತ ಆಸ್ತಿ ಪತ್ರ ವಿತರಣೆ: ಡಿ.ಕೆ. ಶಿವಕುಮಾರ್

ಸಾರಾಂಶ

ಬೆಂಗಳೂರಿನಲ್ಲಿ ಏಪ್ರಿಲ್‌ನಿಂದ ಮನೆ ಬಾಗಿಲಿಗೆ ಉಚಿತ ಖಾತೆ ನೀಡುವ ವ್ಯವಸ್ಥೆ ಜಾರಿಗೆ ಬರಲಿದೆ ಎಂದು ಡಿಸಿಎಂ ತಿಳಿಸಿದ್ದಾರೆ. ತೆರಿಗೆ ವ್ಯಾಪ್ತಿಗೆ ಬಾರದ ಮನೆಗಳನ್ನು ಗುರುತಿಸಲು ಎಐ ತಂತ್ರಜ್ಞಾನ ಬಳಸಲಾಗುವುದು. ಅಕ್ರಮ ನಿರ್ಮಾಣಗಳನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳಲಾಗುವುದು. ಕಂದಾಯ ಬಡಾವಣೆಗಳ ಖಾಸಗಿ ರಸ್ತೆಗಳನ್ನು ಸರ್ಕಾರಿ ರಸ್ತೆಗಳೆಂದು ಘೋಷಿಸಲಾಗುವುದು. ತೆರಿಗೆ ಸಂಗ್ರಹ ಹೆಚ್ಚಿಸಲು ಒತ್ತು ನೀಡಲಾಗುವುದು.

ಬೆಂಗಳೂರು (ಮಾ.24): ಮನೆ ಬಾಗಿಲಿಗೆ ತೆರಳಿ ಉಚಿತವಾಗಿ ಖಾತೆ ನೀಡುವ ವಿನೂತನ ವ್ಯವಸ್ಥೆಯನ್ನು ಇಡೀ ದೇಶದಲ್ಲಿಯೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಜಾರಿಗೆ ತರಲಾಗಿದೆ. ಈ ಕಾರ್ಯಕ್ರಮಕ್ಕೆ ಏಪ್ರಿಲ್ ತಿಂಗಳಿನಿಂದ ಚಾಲನೆ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

2025- 26 ನೇ ಸಾಲಿನ ಬಿಬಿಎಂಪಿ ಬಜೆಟ್ ಕುರಿತು ಬೆಂಗಳೂರು ನಗರದ ಶಾಸಕರ ಜತೆ ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಗರದ ಸುಮಾರು 7 ಲಕ್ಷ ಮನೆಗಳು ತೆರಿಗೆ ಕಟ್ಟಿರಲಿಲ್ಲ. ಇವುಗಳಲ್ಲಿ 1 ಲಕ್ಷ ಮನೆಗಳು ತೆರಿಗೆ ವ್ಯಾಪ್ತಿಗೆ ಬಂದಿದ್ದು, ಇನ್ನೂ 6 ಲಕ್ಷ ಮನೆಗಳನ್ನು ತೆರಿಗೆ ವ್ಯಾಪ್ತಿಗೆ ತರಬೇಕಿದೆ.  ಆದ ಕಾರಣ ಒಂದು ಬಾರಿ ಪಾವತಿಗೆ ಅವಕಾಶ (ಓ.ಟಿ.ಎಸ್) ಮಾಡಿಕೊಡಲಾಯಿತು. ಅಕ್ರಮ ನಿರ್ಮಾಣಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಅವಕಾಶ ಪಾಲಿಕೆಗೆ ಇರಲಿಲ್ಲ. ಕಳೆದ ವಾರ ಸದನದಲ್ಲಿ ಈ ಬಗ್ಗೆ ವಿಧೇಯಕ ಅಂಗೀಕಾರ ವಾಗಿದೆ. ಜೊತೆಗೆ ಕಂದಾಯ ಬಡಾವಣೆಗಳಲ್ಲಿ ಇರುವ ಖಾಸಗಿ ರಸ್ತೆಗಳನ್ನೂ ಸಹ ಸರ್ಕಾರಿ ರಸ್ತೆಗಳು ಎಂದು ಘೋಷಣೆ ಮಾಡಲಾಗುವುದು ಎಂದರು. 

ಎಐ ಮೂಲಕ ಅಕ್ರಮ ನಿರ್ಮಾಣಗಳ ಪತ್ತೆ: ನಗರದಲ್ಲಿ ಉತ್ತಮ ತೆರಿಗೆ ಸಂಗ್ರಹವಾಗಬೇಕು.  ನೀರು, ರಸ್ತೆ ಸೇರಿದಂತೆ ಅನೇಕ ಮೂಲಸೌಕರ್ಯಗಳನ್ನು ನೀಡಿದ್ದೇವೆ. ಆದರೆ ಅನೇಕರು ಇದಕ್ಕೆ ತಕ್ಕಂತೆ ತೆರಿಗೆ ಪಾವತಿ ಮಾಡುತ್ತಿಲ್ಲ.  ಅನುಮತಿ ನೀಡಿದ್ದಕ್ಕಿಂತ ಹೆಚ್ಚು ವಿಸ್ತೀರ್ಣದ ಹಾಗೂ ಮಹಡಿಗಳನ್ನು ಅಕ್ರಮವಾಗಿ ಕಟ್ಟಿಕೊಂಡಿದ್ದಾರೆ.  ಇಂತಹ ಅಕ್ರಮಗಳನ್ನು 'ಎ.ಐ' ತಂತ್ರಜ್ಞಾನದ ಮೂಲಕ ಪತ್ತೆ ಮಾಡುವ ವ್ಯವಸ್ಥೆ ಜಾರಿಗೆ ತರಲಾಗುವುದು.  ಇದರಿಂದ ಕಟ್ಟಡವನ್ನು ಎಷ್ಟು ವಿಸ್ತೀರ್ಣ, ಎತ್ತರ ಕಟ್ಟಿದ್ದಾರೆ ಎಂಬುದು ತಿಳಿಯುತ್ತದೆ. ಜತೆಗೆ ಪ್ರತಿಯೊಂದು ಮನೆಯ ದಾಖಲೆಯೂ ಸಿಗುತ್ತದೆ ಎಂದು ವಿವರಿಸಿದರು.

ಇದನ್ನೂ ಓದಿ: ಬೆಂಗಳೂರು: ಒಂದೇ ದಿನದ ಮಳೆಗೆ 65 ಮರಗಳ ಬುಡಮೇಲು!

ಮನೆ, ನಿವೇಶನ ಮಾಲೀಕರ ಜೊತೆ ಒಳ ಒಪ್ಪಂದ ಮಾಡಿಕೊಂಡು ಕಂದಾಯ ಬಡಾವಣೆ ಅಕ್ರಮಗಳಲ್ಲಿ ಅಧಿಕಾರಿಗಳು ಭಾಗಿಯಾಗಿದ್ದರೆ ಅಂತಹವರನ್ನು ನನ್ನ ಗಮನಕ್ಕೆ ತರದೆಯೂ ಕೂಡಲೇ ಅಮಾನತು ಮಾಡಿ ಎಂದು ಉನ್ನತ ಅಧಿಕಾರಿಗಳಿಗೆ ತಿಳಿಸಿದ್ದೇನೆ.  ಇತ್ತೀಚೆಗೆ ಅನೇಕ ದಂಡ ಶುಲ್ಕಗಳ ಮೊತ್ತವನ್ನು ಕೂಡ ಕಡಿಮೆ ಮಾಡಲಾಗಿದೆ. ನಗರದ ವ್ಯಾಪ್ತಿಯ ಎಲ್ಲಾ ಮನೆಗಳು ತೆರಿಗೆ ವ್ಯಾಪ್ತಿಗೆ ಬರಲೇಬೇಕು, ಅವರು ತೆರಿಗೆ ಕಟ್ಟಲೇಬೇಕು. ಇದರಲ್ಲಿ ರಾಜಿಯಾಗುವುದಿಲ್ಲ. ಮನೆ ನಿರ್ಮಾಣ ವಿಚಾರದಲ್ಲಿ ಶೇ. 50 ರಷ್ಟು ಗುಂಪು ಮನೆಗಳು, ಶೇ. 50 ರಷ್ಟು ಒಂಟಿ ಮನೆಗಳು ಮಾಡಬೇಕು ಎನ್ನುವ ಸಲಹೆಯನ್ನು ಸಚಿವರು/ಶಾಸಕರು ನೀಡಿದ್ದಾರೆ ಎಂದು ಹೇಳಿದರು.

ಮನೆ ಬಾಗಿಲಿಗೆ ಉಚಿತ ಖಾತೆ: ಮನೆ ಬಾಗಿಲಿಗೆ ತೆರಳಿ ಉಚಿತವಾಗಿ ಖಾತೆ ನೀಡುವ ವಿನೂತನ ವ್ಯವಸ್ಥೆಯನ್ನು ಇಡೀ ದೇಶದಲ್ಲಿಯೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಜಾರಿಗೆ ತರಲಾಗಿದೆ. ಈ ಕಾರ್ಯಕ್ರಮಕ್ಕೆ ಏಪ್ರಿಲ್ ತಿಂಗಳಿನಿಂದ ಚಾಲನೆ ದೊರೆಯಲಿದೆ. ಪ್ರತಿಯೊಂದು ಆಸ್ತಿ ದಾಖಲೆಗಳನ್ನು ಡಿಜಿಟಲೀಕರಣ ಮಾಡಲಾಗಿದೆ. ಅಕಸ್ಮಾತ್ ತಪ್ಪಿಹೋಗಿದ್ದಲ್ಲಿ ಅಂತವರು ತಮ್ಮ ದಾಖಲೆಗಳನ್ನು ಮತ್ತೆ ನೀಡಬಹುದು. ಬೆಂಗಳೂರು ನಗರದ ಪ್ರತಿ ಕ್ಷೇತ್ರದ ಶಾಸಕರ ಬಳಿ ಮಾತನಾಡಿ, ಕ್ಷೇತ್ರವಾರು ಕಾರ್ಯಕ್ರಮ ನಡೆಸಿ ಈ ಬಗ್ಗೆ ಅರಿವು ಮೂಡಿಸಲಾಗುವುದು ಎಂದರು.

ಇದನ್ನೂ ಓದಿ: ಗೋಲ್ಡ್ ಲೋನ್ vs ಪರ್ಸನಲ್ ಲೋನ್: ತುರ್ತು ಕಿರುಸಾಲ ಪಡೆಯಲು ಯಾವುದು ಉತ್ತಮ?

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಮಾಜ ಕಲ್ಯಾಣ ಸಚಿವರೇ ಇಲ್ಲಿ ನೋಡಿ, ಅಂಬೇಡ್ಕರ್ ವಸತಿ ಶಾಲೆಯಲ್ಲಿ ಮಕ್ಕಳಿಗೆ ನಿತ್ಯ ಟಾರ್ಚರ್!, ಪೆನ್ನು ಪುಸ್ತಕ ಕೇಳಿದ್ರೆ ಏಟು!
ನನಗೂ ಸಿಎಂ ಆಗುವ ಆಸೆ ಇದೆ, ಹೈಕಮಾಂಡ್ ನಿರ್ಧಾರ ಅಂತಿಮ: ದಿನೇಶ್‌ ಗುಂಡೂರಾವ್