
ಬೆಂಗಳೂರು, (ಆ.12): ಫೇಸ್‌ಬುಕ್‌ನಲ್ಲಿ ಹಾಕಲಾದ ವಿವಾದಿತ ಪೋಸ್ಟ್‌ಗೆ ಸಂಬಂಧಪಟ್ಟಂತೆ ಪುಲಿಕೇಶಿ ನಗರ ರಣರಂಗವಾಗಿದೆ. ಡಿ.ಜಿ.ಹಳ್ಳಿ ಪೊಲೀಸ್ ಠಾಣೆ ಸುತ್ತಮುತ್ತ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ದುಷ್ಕರ್ಮಿಗಳು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸುತ್ತಿದ್ದು, ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ.
ಈ ಸಂಬಂಧ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದು, ಉತ್ತರ ಪ್ರದೇಶದ ಮಾದರಿಯಲ್ಲಿ ಕಾನೂನು ತನ್ನಿ ಎಂದು ಮನವಿ ಮಾಡಿಕೊಂಡಿದ್ದಾರೆ.
ಕರ್ನಾಟಕದಲ್ಲಿ ಉತ್ತರ ಪ್ರದೇಶ, ಕೇರಳ ಮಾದರಿಯ ಕಠಿಣ ರೂಲ್ಸ್...!
ಸರ್ಕಾರದ ಆಸ್ತಿ ದ್ವಂಸ ಮಾಡಿದವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಕಾನೂನು ಉತ್ತರ ಪ್ರದೇಶದಲ್ಲಿದೆ. ಇಂತಹ ಕಾನೂನು ರಾಜ್ಯದಲ್ಲೂ ಜಾರಿಗೆ ತರಬೇಕು ಎಂದು ಸಂಸದ ತೇಜಸ್ವಿ ಸೂರ್ಯ ಆಗ್ರಹಿಸಿದ್ದಾರೆ.
ಸರ್ಕಾರದ ಆಸ್ತಿ ದ್ವಂಸ ಮಾಡಿದವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಕಾನೂನು ಉತ್ತರ ಪ್ರದೇಶದಲ್ಲಿದೆ. ಇಂತಹ ಕಾನೂನು ರಾಜ್ಯದಲ್ಲೂ ಜಾರಿಗೆ ತರಬೇಕು ಎಂದು ತೇಜಸ್ವಿ ಸೂರ್ಯ, ಸಿಎಂಗೆ ಪತ್ರದ ಮೂಲಕ ಒತ್ತಾಯಿಸಿದ್ದಾರೆ.
ಈ ಹಿಂದೆ ಪಾದರಾಯನಪುರ ಗಲಭೆ ವೇಳೆಯಲ್ಲೂ ಉತ್ತರ ಪ್ರದೇಶದ ಕಾನೂನು ರಾಜ್ಯದಲ್ಲಿ ಅಗತ್ಯವಿದೆ ಎನ್ನುವ ಕೂಗು ಕೇಳಿಬಂದಿದ್ದವು. ಈ ಬಗ್ಗೆ ರಾಜ್ಯ ಸರ್ಕಾರ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ಕೊನೆಗೆ ಅದನ್ನು ಅಲ್ಲಿಗೆ ಕೈಬಿಟ್ಟಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ