ಬೆಂಗಳೂರು ಗಲಭೆ: ಉತ್ತರ ಪ್ರದೇಶ ಮಾದರಿಯ ಕ್ರಮಕ್ಕೆ ಮುಂದಾದ ರಾಜ್ಯ ಸರ್ಕಾರ

By Suvarna News  |  First Published Aug 12, 2020, 5:46 PM IST

ಬೆಂಗಳೂರು ಗಲಭೆ ಪ್ರಕರಣದಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಅಪಾರ ಹಾನಿಯಾಗಿದ್ದು, ಇದಕ್ಕೆ ಉತ್ತರ ಪ್ರದೇಶದ ಮಾದರಿಯಲ್ಲಿ ಕ್ರಮಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ.


ಬೆಂಗಳೂರು, (ಆ.12): ಸಾರ್ವಜನಿಕ ಆಸ್ತಿಪಾಸ್ತಿಗೆ ನಷ್ಟ ಉಂಟುಮಾಡಿದ್ರೇ, ನಷ್ಟ ಉಂಟು ಮಾಡಿದವರಿಂದಲೇ ವಸೂಲಿ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಆದೇಶವಿದೆ. ಈ ಆದೇಶದಂತೆಯೇ ಡಿಜೆ ಹಳ್ಳಿ, ಕೆಜಿ ಹಳ್ಳಿ ಘಟನೆಯಲ್ಲಿ ಹಾನಿಯಾದ ನಷ್ಟವನ್ನು ಗಲಭೆಕೋರರಿಂದಲೇ ವಸೂಲಿ ಮಾಡಲು ನಿರ್ಧಾರ ಮಾಡಿರುವುದಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಈ ಕುರಿತಂತೆ ಇಂದು (ಬುಧವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ, ಈ ಗಲಭೆಯಿಂದ ಅಪಾರ ಸಾರ್ವಜನಿಕ ಆಸ್ತಿಪಾಸ್ತಿಗಳು ಹಾನಿಯಾಗಿವೆ. ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಹೀಗೆ ನಷ್ಟ ಉಂಟು ಮಾಡಿದಂತವರಿದಂಲೇ ನಷ್ಟವನ್ನು ವಸೂಲಿ ಮಾಡಲು ನಿರ್ಧರಿಸಲಾಗಿದೆ. ಹೀಗಾಗಿ ಗಲಭೆಗೆ ಕಾರಣರಾಗಿ ಹಾನಿ ಮಾಡಿದಂತವರಿಂದಲೇ ನಷ್ಟವನ್ನು ವಸೂಲಿ ಮಾಡಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.

Tap to resize

Latest Videos

ಬೆಂಗಳೂರು ಗಲಭೆ: ಉತ್ತರ ಪ್ರದೇಶ ಮಾದರಿಯ ಕಾನೂನು ಜಾರಿ ತರುವಂತೆ ಸಿಎಂಗೊಂದು ಪತ್ರ 

ನಿನ್ನೆ (ಮಂಗಳವಾರ) ನಡೆದಂತ ಕೆಜಿ ಹಳ್ಳಿ, ಡಿಜೆ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿನ ಉದ್ವಿಗ್ನತೆ ಈಗಾಗಲೇ ನಿಯಂತ್ರಣಕ್ಕೆ ಬಂದಿದೆ.  ಈ ಸಂಬಂಧ 145 ಜನರನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಕುರಿತಂತೆ ಘಟನೆಯಲ್ಲಿ ಭಾಗಿಯಾದವರ ಪತ್ತೆ ಕಾರ್ಯ ನಡೆದಿದೆ ಎಂದರು.

ಸಿಬಿಐ ತನಿಖೆ ಇಲ್ಲ
ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆನ್ನುವ ಮಾತುಗಳಿಗೆ ಪ್ರತಿಕ್ರಿಯಿಸಿದ ಅವರು, ಸಿಬಿಐಗೆ ವಹಿಸುವ ಪ್ರಶ್ನೆಯೇ ಇಲ್ಲ. ನಮ್ಮ ಪೊಲೀಸರು ಪ್ರಕರಣ ನಿಭಾಯಿಸ್ತಾರೆ. ಪ್ರಕರಣದ ತನಿಖೆ ನಡೆಯುತ್ತಿರುವುದರಿಂದ ಕೆಲವು ವಿಚಾರಗಳನ್ನು ಬಹಿರಂಗಪಡಿಸಲ್ಲ. ಸಿಎಂ ಬಳಿ ಈಗ ಚರ್ಚೆ ನಡೆಸಿ ನಂತರ ಮುಂದಿನ‌ ಕ್ರಮದ ಬಗ್ಗೆ ಬಹಿರಂಗಪಡಿಸುತ್ತೇವೆ ಎಂದು ಹೇಳಿದರು.

click me!