ತುಮಕೂರು-ಚಿತ್ರದುರ್ಗ ನಡುವೆ ಏರ್ಪೋರ್ಟ್ ಇಲ್ಲ; ತಮಿಳುನಾಡಿಗೆ ಕೌಂಟರ್ ಕೊಡಲು ಬೆಂಗಳೂರಲ್ಲೇ 2ನೇ ಏರ್ಪೋರ್ಟ್ ನಿರ್ಮಾಣ

Published : Jul 16, 2024, 12:36 PM IST
ತುಮಕೂರು-ಚಿತ್ರದುರ್ಗ ನಡುವೆ ಏರ್ಪೋರ್ಟ್ ಇಲ್ಲ; ತಮಿಳುನಾಡಿಗೆ ಕೌಂಟರ್ ಕೊಡಲು ಬೆಂಗಳೂರಲ್ಲೇ 2ನೇ ಏರ್ಪೋರ್ಟ್ ನಿರ್ಮಾಣ

ಸಾರಾಂಶ

ತುಮಕೂರು - ಚಿತ್ರದುರ್ಗ ನಡುವೆ ಹೊಸ ವಿಮಾನ ನಿಲ್ದಾಣ ಮಾಡುವ ಪ್ರಸ್ತಾವನೆ ಇಲ್ಲ. ಬೆಂಗಳೂರಿನಲ್ಲಿಯೇ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲಾಗುವುದು.

ಬೆಂಗಳೂರು (ಜು.16): ರಾಜ್ಯದಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೊರೆಯನ್ನು ತಗ್ಗಿಸಲು ತುಮಕೂರು - ಚಿತ್ರದುರ್ಗ ಮದ್ಯದಲ್ಲಿ ಹೊಸ ವಿಮಾನ ನಿಲ್ದಾಣ ಮಾಡುವ ಪ್ರಸ್ತಾವನೆ ಇಲ್ಲ. ಬೆಂಗಳೂರಿನಲ್ಲಿಯೇ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ 7 ಲೊಕೇಶನ್ ಗುರುತಿಸಲಾಗಿದ್ದು, ಅದನ್ನು ಕೇಂದ್ರದ ಅನುಮತಿ ಪಡೆದು ಅಂತಿಮಗೊಳಿಸಲಾಗುವುದು ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ತಿಳಿಸಿದರು. 

ವಿಧಾನ ಮಂಡಲ ಅಧಿವೇಶನದಲ್ಲಿ ಮಂಗಳವಾರ ಬಿಜೆಪಿ ಸದಸ್ಯ ನವೀನ್ ಅವರು ತುಮಕೂರು ಹಾಗೂ ಚಿತ್ರದುರ್ಗದ ಮಧ್ಯ ವಿಮಾನ ನಿಲ್ದಾಣ ಪ್ರಸ್ತಾವನೆ ಇದೆಯೇ ಎಂದು ಪ್ರಶ್ನೆ ಮಾಡಿದರು. ಇದಕ್ಕೆ ಉತ್ತರಿಸಿದ ಬೃಹತ್ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ಅವರು, ತುಮಕೂರು ಹಾಗೂ ಚಿತ್ರದುರ್ಗದ ಮಧ್ಯೆ ವಿಮಾನ ನಿಲ್ದಾಣ ನಿರ್ಮಾಣ ಮಾಡುವ ಪ್ರಸ್ತಾಪ ಇಲ್ಲ. ಆದರೆ ಬೆಂಗಳೂರಿನಲ್ಲಿ 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಮಾಡುವ ಪ್ರಸ್ತಾಪ ಇದೆ. ಈಗಾಗಲೇ 7 ರಿಂದ 8 ಲೊಕೇಶನ್‌ಗಳನ್ನ ಗುರುತಿಸಲಾಗಿದೆ. ಈಗ ಇರೋ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅನುಕೂಲ ಅಗುವಂತೆ, ರಾಜ್ಯದ ಜನರಿಗೆ ಅನುಕೂಲ ಆಗುವಂತೆ ಹೊಸ ಏರ್ಪೋರ್ಟ್ ನಿರ್ಮಾಣ ಮಾಡ್ತೀವಿ ಎಂದು ಹೇಳಿದರು.

ಬೆಂಗಳೂರು 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 2033ಕ್ಕೆ ವಿಮಾನ ಸಂಚಾರ ಆರಂಭ: ಸಚಿವ ಎಂ.ಬಿ. ಪಾಟೀಲ್

ಬೆಂಗಳೂರಿನ 50-60 ಕಿಲೋಮೀಟರ್ ಸುತ್ತಲೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡುವ ಚಿಂತನೆ ಇದೆ. 7 ರಿಂದ 8 ಲೊಕೇಶನ್‌ಗಳಲ್ಲಿ ಮೆರಿಟ್ ಆಧಾರದಲ್ಲಿ ಜಾಗ ಫೈನಲ್ ಮಾಡಿ ಏರ್ಪೋರ್ಟ್ ಮಾಡ್ತೀವಿ‌. ತುಮಕೂರು, ಚಿತ್ರದುರ್ಗ ಸೇರಿ ಹಲವು ಜಿಲ್ಲೆಗಳಲ್ಲಿ ಏರ್ಪೋರ್ಟ್ ಮಾಡೊಕೆ ಒತ್ತಡ ಬರ್ತಿದೆ. ಬೆಂಗಳೂರು ಮತ್ತು ರಾಜ್ಯಕ್ಕೆ ಅನುಕೂಲ ಆಗೋ ರೀತಿ ಜಾಗದ ಬಗ್ಗೆ ನಿರ್ಧಾರ ನಾವು ತೆಗೆದುಕೊಳ್ಳಬೇಕು. ಈಗ ಇರುವ ಏರ್ಪೋರ್ಟ್ 2035ನೇ ಇಸವಿಗೆ ತನ್ನ ಸಾಮರ್ಥ್ಯದ ಪೀಕ್ ಗೆ ಹೋಗುತ್ತದೆ‌. ಹೀಗಾಗಿ ಅಷ್ಟರಲ್ಲಿ ಹೊಸ ವಿಮಾನ ನಿಲ್ದಾಣ ಮಾಡುವ ಪ್ಲ್ಯಾನ್ ನಾವು ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಈ ಹಿನ್ನೆಲೆಯಲ್ಲಿ ಬೆಂಗಳೂರಿನ ವ್ಯಾಪ್ತಿಯಲ್ಲಿ ಹೊಸ ಅಂತಾರಾಷ್ಟ್ರೀಯ ವಿಮಾನ ನಿರ್ಮಾಣ ಪ್ರಾರಂಭ ಮಾಡೋ ಬಗ್ಗೆ ಪ್ರಕ್ರಿಯೆ ಶುರು ಮಾಡಲಾಗಿದೆ. ಏರ್ಪೋರ್ಟ್ ನಿರ್ಮಾಣ ಮಾಡುವ ಏಜೆನ್ಸಿ (ಹೈಡಕ್) ಜೊತೆಗೂ ಚರ್ಚೆ ಆಗಿದೆ. ಎಲ್ಲಿ ಮಾಡಬೇಕು ಅಂತ ಮೆರಿಟ್ ಆಧಾರದಲ್ಲಿ ಚರ್ಚೆ, ಕೇಂದ್ರದ ಜೊತೆಗೂ ಮಾತಾಡಿ ಅಂತಿಮ ನಿರ್ಧಾರ ಮಾಡ್ತೀವಿ‌ ಎಂದು ಬೃಹತ್ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಸದನಕ್ಕೆ ಉತ್ತರ ನೀಡಿದರು.

ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣ ತುಮಕೂರು ಬಳಿ ನಿರ್ಮಾಣ

ತಮಿಳುನಾಡು ಸರ್ಕಾರದ ಹೊಸೂರು ವಿಮಾನ ನಿಲ್ದಾಣ ಪ್ರಸ್ತಾವನೆಗೆ ಕರ್ನಾಟಕ ಠಕ್ಕರ್: ಬೆಂಗಳೂರಿನ ಜನತೆಗೆ ಅನುಕೂಲ ಆಗುವಂತೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡಿರುವುದರಿಂದ ಕರ್ನಾಟಕದ ಬೆಂಗಳೂರು ಮಾತ್ರವಲ್ಲದೇ ಆಂಧ್ರಪ್ರದೇಶ, ತಮಿಳುನಾಡು ರಾಜ್ಯಗಳ ಕೆಲವು ಪ್ರಯಾಣಿಕರಿಗೂ ಭಾರೀ ಅನುಕೂಲವಾಗಿದೆ. ಆದರೆ, ಈ ವಿಮಾನ ನಿಲ್ದಾಣಕ್ಕೆ ಪೈಪೋಟಿ ನೀಡುವುದಕ್ಕೆ ತಮಿಳುನಾಡು ಸರ್ಕಾರದಿಂದ ಹೊಸೂರು ಬಳಿ ವಿಮಾನ ನಿಲ್ದಾಣ ಮಾಡಲು ಯೋಜನೆ ರೂಪಿಸಿತ್ತು. ಈ ಹಿನ್ನೆಲೆಯಲ್ಲಿ ಕಳೆದ ಬಿಜೆಪಿ ಸರ್ಕಾರ ತುಮಕೂರು- ಚಿತ್ರದುರ್ಗ ಹೆದ್ದಾರಿ ಬಳಿಯಲ್ಲಿ ವಿಮಾನ ನಿಲ್ದಾಣ ಮಾಡುವುದಾಗಿ ಚರ್ಚೆ ಮಾಡಿತ್ತು. ಆದರೆ, ಈಗಿನ ಕಾಂಗ್ರೆಸ್ ಸರ್ಕಾರ ತಮಿಳುನಾಡಿನ ಹೊಸೂರು ವಿಮಾನ ನಿಲ್ದಾಣ ನಿರ್ಮಾಣಕ್ಕೆ ಠಕ್ಕರ್ ಕೊಡುವ ನಿಟ್ಟಿನಲ್ಲಿ ಬೆಂಗಳೂರು ವ್ಯಾಪ್ತಿಯಲ್ಲಿಯೇ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡಲು ಮುಂದಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್