Breaking News: ಆನೇಕಲ್ ದುರಂತ ಬೆನ್ನಲ್ಲೇ ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಸಿಲಿಂಡರ್ ಸ್ಫೋಟ! ನಾಲ್ವರು ಗಂಭೀರ ಗಾಯ!

By Ravi Janekal  |  First Published Jan 13, 2025, 10:22 AM IST

ಸಿಲಿಂಡರ್ ಸ್ಫೋಟಗೊಂಡು ಒಂದೇ ಕುಟುಂಬದ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಬೆಂಗಳೂರು ನಗರದ ಟಿ ದಾಸರಹಳ್ಳಿಯ ಚೊಕ್ಕಸಂದ್ರದಲ್ಲಿ ನಡೆದಿದೆ


ಬೆಂಗಳೂರು (ಜ.13): ಸಿಲಿಂಡರ್ ಸ್ಫೋಟಗೊಂಡು ಒಂದೇ ಕುಟುಂಬದ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಬೆಂಗಳೂರು ನಗರದ ಟಿ ದಾಸರಹಳ್ಳಿಯ ಚೊಕ್ಕಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ ಓರ್ವ ಮಹಿಳೆಗೆ ಗಂಭೀರ ಗಾಯವಾಗಿದೆ. 1 ಮಗು ಹಾಗೂ ಇಬ್ಬರು ಪುರುಷರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಿಲಿಂಡರ್ ಸ್ಫೋಟಕ್ಕೆ ಕಾರಣಗಳು ತಿಳಿದುಬಂದಿಲ್ಲ. ಅನಿಲ ಸೋರಿಕೆಯಿಂದ ಸ್ಫೋಟಿಸಿರುವ ಸಾಧ್ಯತೆ ಇದೆ. ಸ್ಫೋಟದ ರಭಸಕ್ಕೆ ಅಡುಗೆಯಲ್ಲಿದ್ದ ವಸ್ತುಗಳು ಛಿದ್ರಗೊಂಡಿಗೆ ಕಿಟಕಿಗಳು ಒಡೆದು ಅಕ್ಕಪಕ್ಕದ ಮನೆಗಳಿಗೂ ಹಾನಿಯಾಗಿದೆ. 

Tap to resize

Latest Videos

ಆನೇಕಲ್‌ನಲ್ಲಿ ಸಿಲಿಂಡರ್ ಸ್ಫೋಟಕ್ಕೆ ಇಬ್ಬರ ಸ್ಥಿತಿ ಗಂಭೀರ; ಮನೆ ಕೆಡವಲು ಆದೇಶ ಕೊಟ್ಟ ಸರ್ಕಾರ!

ಸಿಲಿಕಾನ್ ಸಿಟಿಯಲ್ಲಿ ಸಿಲಿಂಡರ್ ಸ್ಫೋಟ ಹೆಚ್ಚಳ:

ದಿನೇದಿನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಿಲಿಂಡರ್ ಸ್ಫೋಟ ಪ್ರಕರಣಗಳು ಹೆಚ್ಚುತ್ತಲೇ ಇವೆ. ಮೊನ್ನೆಯಷ್ಟೇ ಅನೇಕಲ್ ತಾಲೂಕಿನ ಕಿತ್ತಾಗನಹಳ್ಳಿಯಲ್ಲಿ ಸಿಲಿಂಡರ್ ಸೋರಿಕೆಯಿಂದ ಸಂಭವಿಸಿದ ಸ್ಫೋಟದಲ್ಲಿ ಹಲವರು ಗಂಭೀರ ಗಾಯಗೊಂಡಿದ್ದರು. ಗಾಯಗೊಂಡವರ ಪೈಕಿ ಗಂಭೀರವಾಗಿ ಗಾಯಗೊಂಡಿದ್ದ ವಿಷ್ಣು ಜಯರಾಜ್ ಎಂಬುವವರು ಓರ್ವ ಮೃತಪಟ್ಟಿದ್ದರು. ಆನೇಕಲ್ ಸಿಲಿಂಡರ್ ಸ್ಫೋಟದ ಬೆನ್ನಲ್ಲೇ ಇದೀಗ ಟಿ ದಾಸರಹಳ್ಳಿಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಮಗು ಸೇರಿ ಹಲವರು ಗಾಯಗೊಂಡಿದ್ದಾರೆ. ಇದರಿಂದಾಗಿ ಅಡುಗೆ ಮನೆಯಲ್ಲಿ ಸಿಲಿಂಡರ್ ಬಳಸಲು ಹೆದರುವಂತಾಗಿದೆ.

click me!