ಫೆ.27ರಿಂದ ಮಾ.3ರವರೆಗೆ ವಿಧಾನಸೌಧದಲ್ಲಿ ಪುಸ್ತಕ ಮೇಳ: ಸಾರ್ವಜನಿಕರಿಗೆ ಮುಕ್ತ ಅವಕಾಶ!

Published : Feb 24, 2025, 03:20 PM ISTUpdated : Feb 24, 2025, 03:28 PM IST
ಫೆ.27ರಿಂದ ಮಾ.3ರವರೆಗೆ ವಿಧಾನಸೌಧದಲ್ಲಿ ಪುಸ್ತಕ ಮೇಳ: ಸಾರ್ವಜನಿಕರಿಗೆ ಮುಕ್ತ ಅವಕಾಶ!

ಸಾರಾಂಶ

ಬೆಂಗಳೂರಿನ ವಿಧಾನಸೌಧದಲ್ಲಿ ಫೆಬ್ರವರಿ 27 ರಿಂದ ಮಾರ್ಚ್ 3 ರವರೆಗೆ ಪುಸ್ತಕ ಮೇಳ ನಡೆಯಲಿದ್ದು, ಸಾರ್ವಜನಿಕರಿಗೆ ಉಚಿತ ಪ್ರವೇಶವಿರುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇಳವನ್ನು ಉದ್ಘಾಟಿಸಲಿದ್ದು, ಸಾಹಿತಿಗಳು ಮತ್ತು ಮನರಂಜನಾ ಕಾರ್ಯಕ್ರಮಗಳು ಇರಲಿವೆ.

ಬೆಂಗಳೂರು (ಫೆ.24): ಕರ್ನಾಟಕ ರಾಜ್ಯದ ಆಡಳಿತ ಕೇಂದ್ರವಾಗಿರುವ ಬೆಂಗಳೂರಿನ ವಿಧಾನ ಸೌಧದಲ್ಲಿ ಫೆ.27ರಿಂದ ಮಾ.3ರವರೆಗೆ ಪುಸ್ತಕ ಮೇಳವನ್ನು ಆಯೋಜನೆ ಮಡಲಾಗುತ್ತಿದೆ. ನಾಲ್ಕು ದಿನಗಳ ಕಾಲ ಸಾರ್ವಜನಿಕರಿಗೆ ವಿಧಾನ ಸೌಧದೊಳಗೆ ಬರಲು ಮುಕ್ತ ಅವಕಾಶ ನೀಡಲಾಗಿದೆ ಎಂದು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಮಾಹಿತಿ ನೀಡಿದ್ದಾರೆ.

ಬೆಂಗಳೂರು ವಿಧಾನಸೌಧದಲ್ಲಿ ಪುಸ್ತಕ ಸಮ್ಮೇಳನ ಆಯೋಜನೆ ಮಾಡುವ ಕುರಿತು ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದ ಇತಿಹಾಸದಲ್ಲಿಯೇ  ಮೊಟ್ಟ ಮೊದಲ ಬಾರಿಗೆ ವಿಧಾನ ಸೌಧದಲ್ಲಿ ಬೃಹತ್ ಪುಸ್ತಕ ಮೇಳವನ್ನು ಆಯೋಜಿಸಿದ್ದೇವೆ. ಸರ್ವರಿಗೂ ಇರುವ ವಿಧಾನ ಸೌಧದಲ್ಲಿ ಪುಸ್ತಕ ಪ್ರಕಾಶಕರನ್ನ ಗಮನದಲ್ಲಿಟ್ಟುಕೊಂಡು ಆಯೋಜಿಸಿದ್ದೇವೆ. ನಮ್ಮ ರಾಜ್ಯದಲ್ಲಿ ಸಾಹಿತ್ಯಕ್ಕೆ ಕೊಡುಗೆ ಕೊಡುವವರು ಪ್ರಕಾಶಕರು ಆಗಿದ್ದಾರೆ. ಪ್ರಕಾಶಕರಿಂದ ಸಾಹಿತ್ಯ ಜನರಿಗೆ ತಲುಪಲಿದೆ ಎಂದರು.

ಇದೇ ಫೆ.27ರ ಸಂಜೆ 5 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೃಹತ್ ಪುಸ್ತಕ ಮೇಳವನ್ನು ಉಧ್ಘಾಟನೆ ಮಾಡಲಿದ್ದಾರೆ. ರ್ಕಾರದ ಹಲವು ಸಚಿವರು ಹಾಗೂ ಪ್ರತಿಷ್ಠಿತ ಸಾಹಿತಿಗಳು ಕೂಡ ಈ ಪುಸ್ತಕ ಮೇಳದಲ್ಲಿ ಭಾಗಿಯಾಗಲಿದ್ದಾರೆ. ಮುಖ್ಯವಾಗಿ ಕನ್ನಡಕ್ಕೆ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ್ ಕಂಬಾರ್ ಮತ್ತು ಸಾಹಿತಿ ದಾಮೋದರ್ ಮೌಜು ಭಾಗಿಯಾಗುತ್ತಿದ್ದಾರೆ. ಈ ಪುಸ್ತಕ ಮೇಳ ಫೆ.27ರಿಂದ ಮಾ.3ರವರೆಗೆ ಇರುತ್ತದೆ. ಪ್ರತಿದಿನ ಸಂಜೆ 5 ಗಂಟೆಗೆ ಮನರಂಜನಾ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ಮಾಹಿತಿ ನಿಡಿದರು.

ಇದನ್ನೂ ಓದಿ: ದಲಿತರ ಹಣ ಗ್ಯಾರಂಟಿಗೆ ಬಳಕೆ: ದಿನೇಶ್ ಗುಂಡೂರಾವ್ ಸಮರ್ಥನೆ

ಇನ್ನು ಮಾ.2ರ ಭಾನುವಾರದಂದು ಸಾಧು ಕೋಕಿಲ ನೇತ್ರತ್ವದಲ್ಲಿ ಮನೋರಂಜನಾ ಕಾರ್ಯಕ್ರಮ ನಡೆಯಲಿದೆ. ಫೆ.28ರಂದು ಪುಸ್ತಕ ಬಿಡುಗಡೆಗೂ ಅವಕಾಶ ಇದೆ. ಹೊಸ ಪುಸ್ತಕ ಬಿಡುಗಡೆ ಮಾಡುವ ಎಲ್ಲರಿಗೂ ಸೇರಿ ಒಂದು ಸ್ಟಾಲ್ ಕೊಡುತ್ತೇವೆ. ಬ್ಯಾರಿ, ತುಳು, ಕೊಂಕಣಿ, ಕನ್ನಡ ಅಕಾಡೆಮಿಗೂ ಒಂದೊಂದು ಸ್ಟಾಲ್ ಅನ್ನು ಮೀಸಲಿರಿಸಲಾಗಿದೆ. ಭಾಷೆಗಳ ಆಧಾರದಲ್ಲಿ ತೆರೆಯಲಾದ ಪುಸ್ತಕ ಮಳಿಗೆಗಳಲ್ಲಿಯೂ ಪುಸ್ತಕವನ್ನ ಅವರು ಮಾರಾಟ ಮಾಡಬಹುದು. ಪುಸ್ತಕ ಮೇಳಕ್ಕೆ ಸಾರ್ವಜನಿಕರಿಗೆ ಮುಕ್ತ ಅವಕಾಶ ಇರುತ್ತದೆ. ಆದರೆ, ಪುಸ್ತಕ ಮೇಳದ ಕೊನೆಯ ದಿನ ಮಾ.3ರಂದು ಅಧಿವೇಶನ ಇರುವ ಕಾರಣ ಭದ್ರತೆಯ ಕಾರಣದಿಂದಾಗಿ ಸಾರ್ವಜನಿಕರಿಗೆ ಪ್ರವೇಶ ಇರುವುದಿಲ್ಲ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಈಶ್ವರನ ಫ್ಲೆಕ್ಸ್‌ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು; ಸಾಸ್ವೆಹಳ್ಳಿ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ
'ಉಪಲೋಕಾಯುಕ್ತರಿಗೆ ಒಂದ್ ನಮಸ್ಕಾರ': ಭ್ರಷ್ಟಾಚಾರದ ಬಗ್ಗೆ ಹೇಳಿಕೆ ನೀಡಲು ಮಾತ್ರ ಅಧಿಕಾರವಿದೆಯೇ? – ಹೆಚ್‌ಡಿಕೆ ವ್ಯಂಗ್ಯ