ಬೆಂಗಳೂರಿನಲ್ಲಿ ಕಾವೇರಿ ಕುಡಿಯುವ ನೀರಿನ ದರ ಏರಿಕೆ: ಹೊಸ ದರಪಟ್ಟಿ ಬಿಡುಗಡೆ ಮಾಡಿದ ಜಲಮಂಡಳಿ!

Published : Apr 09, 2025, 08:08 PM ISTUpdated : Apr 09, 2025, 08:20 PM IST
ಬೆಂಗಳೂರಿನಲ್ಲಿ ಕಾವೇರಿ ಕುಡಿಯುವ ನೀರಿನ ದರ ಏರಿಕೆ: ಹೊಸ ದರಪಟ್ಟಿ ಬಿಡುಗಡೆ ಮಾಡಿದ ಜಲಮಂಡಳಿ!

ಸಾರಾಂಶ

ಬೆಂಗಳೂರಿನಲ್ಲಿ 11 ವರ್ಷಗಳ ನಂತರ ನೀರಿನ ದರ ಏರಿಕೆಯಾಗಲಿದೆ. ಗೃಹ, ಅಪಾರ್ಟ್‌ಮೆಂಟ್, ವಾಣಿಜ್ಯ ಬಳಕೆಗೆ ಕಾವೇರಿ ನೀರಿಗೆ ದರ ಹೆಚ್ಚಳವಾಗಲಿದ್ದು, ಏಪ್ರಿಲ್ 10 ರಂದು ಅಧಿಕೃತ ಆದೇಶ ಹೊರಡಿಸಲಾಗುವುದು. ವಿದ್ಯುತ್, ನಿರ್ವಹಣಾ ವೆಚ್ಚ ಹೆಚ್ಚಳ ಮತ್ತು ಆರ್ಥಿಕ ಕೊರತೆಯಿಂದಾಗಿ ದರ ಏರಿಕೆ ಅನಿವಾರ್ಯವಾಗಿದೆ ಎಂದು ಜಲಮಂಡಳಿ ಅಧ್ಯಕ್ಷರು ತಿಳಿಸಿದ್ದಾರೆ. ನೀರಿನ ಬಳಕೆಗೆ ಅನುಗುಣವಾಗಿ ದರ ಬದಲಾಗಲಿದೆ. (50 ಪದಗಳು)

ಬೆಂಗಳೂರು (ಏ.09): ಬೆಂಗಳೂರಿನಲ್ಲಿ ಕಳೆದ 11 ವರ್ಷಗಳ ನಂತರ ಜನಸಾಮಾನ್ಯರಿಗೆ ಹೆಚ್ಚಿನ ಹೊರೆಯಾಗದಂತೆ, ನೀರಿನ ಸಮರ್ಪಕ ಬಳಕೆಗೆ ಒತ್ತು ನೀಡುವುದನ್ನ ಮನಗಾಣಿಸುವ ಅಂಶಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ನೀರಿನ ದರವನ್ನು ಏರಿಕೆ ಮಾಡಲು ಉದ್ದೇಶಿಸಲಾಗಿದೆ. ಗೃಹ ಬಳಕೆ, ದೊಡ್ಡ ಅಪಾರ್ಟ್‌ಮೆಂಟ್‌ಗಳು ಹಾಗೂ ವಾಣಿಜ್ಯ ಉದ್ದೇಶಕ್ಕೆ ಕಾವೇರಿ ನೀರಿನ ಬಳಕೆಗೆ ಅನುಗುಣವಾಗಿ ದರ ಏರಿಕೆ ಮಾಡಲಾಗುದೆ. ಈ ಬಗ್ಗೆ ಏ.10ರಂದು ಅಧಿಕೃತವಾಗಿ ಆದೇಶ ಹೊರಡಿಸಲಾಗುವುದು ಎಂದು ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ. 

ಇಂದು ಬೆಂಗಳೂರು ಜಲಮಂಡಳಿಯ ಕೇಂದ್ರ ಕಚೇರಿಯಲ್ಲಿ ತಮ್ಮನ್ನು ಭೇಟಿಯಾದ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಅವರು, ಕಳೆದ 11 ವರ್ಷಗಳಲ್ಲಿ ಬೆಂಗಳೂರು ನಗರ ಕೇವಲ ವ್ಯಾಪ್ತಿಯಷ್ಟೇ ಅಲ್ಲ ಜನಸಂಖ್ಯೆಯಲ್ಲೂ ಅಗಾಧ ಬೆಳವಣಿಗೆಯನ್ನು ಕಂಡಿದೆ. ಸರಕಾರದಿಂದ ಹಣಕಾಸಿನ ಸಹಾಯವಿಲ್ಲದೇ ಸ್ವಾಯತ್ತ ಸಂಸ್ಥೆಯಾಗಿರುವ ಮಂಡಲಿಗೆ ಕುಡಿಯುವ ನೀರಿಗೆ ವಿಧಿಸುವ ಶುಲ್ಕವೇ ಪ್ರಮುಖ ಆದಾಯವಾಗಿದೆ. ಕಳೆದ 10 ವರ್ಷಗಳಲ್ಲಿ ವಿದ್ಯುತ್ ವೆಚ್ಚವು ಶೇಕಡಾ 107% ರಷ್ಟು ಹೆಚ್ಚಾಗಿದೆ. ಹಾಗೆಯೇ ನಿರ್ವಹಣಾ ವೆಚ್ಚದಲ್ಲಿ ಶೇಡಕಾ 122.5 ರಷ್ಟು ಹೆಚ್ಚಳವಾಗಿದೆ.
 
ಪ್ರಸ್ತುತ ಬೆಂಗಳೂರು ಜಲಮಂಡಳಿಯ ಮಾಸಿಕ ವೆಚ್ಚ 200 ಕೋಟಿ ರೂಪಾಯಿಗಳು. ಆದರೆ, ಪ್ರತಿ ತಿಂಗಳು ಸಂಗ್ರಹಣೆ ಆಗುತ್ತಿರುವುದು ಕೇವಲ 120 ಕೋಟಿ ರೂಪಾಯಿಗಳು ಮಾತ್ರ. ಪ್ರತಿ ತಿಂಗಳು ಸುಮಾರು 80 ಕೋಟಿ ರೂಪಾಯಿಗಳ ಆರ್ಥಿಕ ಕೊರತೆಯನ್ನ ಬೆಂಗಳೂರು ಜಲಮಂಡಳಿ ನಿಭಾಯಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಇದನ್ನು ಸರಿಪಡಿಸುವ ನಿಟ್ಟಿನಲ್ಲಿ ನೀರಿನ ದರವನ್ನು ಏರಿಸಲು ಉದ್ದೇಶಿಸಲಾಗಿದ್ದು , ಏ.10ರಂದು ಅಧಿಕೃತ ಘೋಷಣೆ ಹೊರಡಿಸಲಾಗುವುದು ಎಂದು ಜಲಮಂಡಳಿ ಅಧ್ಯಕ್ಷರಾದ ಡಾ ರಾಮ್ ಪ್ರಸಾತ್ ಮನೋಹರ್ ತಿಳಿಸಿದರು. 

ಇದನ್ನೂ ಓದಿ: ಬೆಂಗಳೂರು 2ನೇ ವಿಮಾನ ನಿಲ್ದಾಣ: ನೆಲಮಂಗಲ ಬಳಿಯ 5000 ಎಕರೆ ಭೂಮಿ ಪರಿಶೀಲನೆ, ಇಲ್ಲಿದೆ ಬ್ಲೂ ಪ್ರಿಂಟ್!

ನೀರಿನ ದರ ಹೆಚ್ಚಳದ ಪ್ರಮಾಣ: ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯ ತನ್ನ ಹೊರೆಯನ್ನು ಕಡಿಮೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಹಾಗೂ ಜನಸಾಮಾನ್ಯರಿಗೆ ಹೊರೆಯಾಗದಂತೆ ನಿಭಾಯಿಸಲು ನೀರಿನ ದರವನ್ನು ಏರಿಕೆ ಮಾಡಲಾಗಿದೆ. ಕಡಿಮೆ ನೀರು ಬಳಕೆಯನ್ನು ಉತ್ತೇಜಿಸುವುದು ಹಾಗೆಯೇ ನೀರಿನ ಮರುಬಳಕೆಯನ್ನು ಹೆಚ್ಚಿಸುವುದು ನಮ್ಮ ಪ್ರಮುಖ ಗುರಿಯಾಗಿದೆ. ಈ ನಿಟ್ಟಿನಲ್ಲಿ ಯಾರಿಗೂ ಹೊರೆಯಾಗದಂತಹ ನಿರ್ಧಾರವನ್ನು ಕೈಗೊಳ್ಳಲಾಗಿದೆ. 

ಗೃಹ ಬಳಕೆ ನೀರಿನ ದರ ಏರಿಕೆ (ಪ್ರತಿ ಲೀಟರ್‌ಗೆ) 
0-8000 ಲೀಟರ್: 0.15 ಪೈಸೆ 
8001- 25000 ಲೀಟರ್:0.30 ಪೈಸೆ ಹೆಚ್ಚಳ
25001 - 50000 ಲೀಟರ್ :0.80 ಪೈಸೆ ಹೆಚ್ಚಳ
50001 - 100000 ಲೀಟರ್ :1.00 ಪೈಸೆ ಹೆಚ್ಚಳ
  • 0-8000 ಸಾವಿರ ಲೀಟರ್ ಬಳಕೆಯ ಸ್ಲಾಬ್: ಪ್ರತಿ ಲೀಟರ್ ಗೆ 0.15 ಪೈಸೆ ಹೆಚ್ಚಳ(1ಪೈಸೆಗಿಂತ ಕಡಿಮೆ) ಈ ಸ್ಲ್ಯಾಬ್ ನಡಿಯಲ್ಲಿ ಪ್ರತಿ 1 ಸಾವಿರ  ಲೀಟರ್ ಗೆ ಪ್ರಸ್ತುತ ದರ ರೂ.7ರಿಂದ ರೂ.8.50 ಪೈಸೆ(ಅಂದರೇ ರೂ.1.50)ಯಷ್ಟು ಹೆಚ್ಚಳವಾಗಲಿದೆ. 
  • ಇನ್ನು 8001- 25000 ಲೀಟರ್ ಬಳಕೆಯ ಸ್ಲಾಬ್: ಪ್ರತಿ ಲೀಟರ್ ಗೆ 0.30 ಪೈಸೆ ಹೆಚ್ಚಳ(1ಪೈಸೆಗಿಂತ ಕಡಿಮೆ) ಉದಾಹರಣೆಗೆ ಈ ಸ್ಲ್ಯಾಬ್ ನಡಿಯಲ್ಲಿ ಪ್ರತಿ 1 ಸಾವಿರ  ಲೀಟರ್ ಗೆ ಪ್ರಸ್ತುತ ದರ ರೂ.11ರಿಂದ ರೂ.14ಕ್ಕೆ (ಅಂದರೇ ರೂ.3)ಹೆಚ್ಚಳವಾಗಲಿದೆ.
ಅಪಾರ್ಟ್‌ಮೆಂಟ್ ನೀರಿನ ದರ ಏರಿಕೆ (ಪ್ರತಿ ಲೀಟರ್‌ಗೆ)
0-2,00,000 ಲೀಟರ್:0.30 ಪೈಸೆ
2,00,001-5,00,000 ಲೀಟರ್:0.60 ಪೈಸೆ
5,00,001-10,00,000 ಲೀಟರ್:1.00 ಪೈಸೆ

ಇದನ್ನೂ ಓದಿ: ನೀರಿನ ದರ ಅಧಿಕೃತವಾಗಿ ಏರಿಸಿದ ರಾಜ್ಯ ಸರ್ಕಾರ, ಏ.1 ರಿಂದ ಪೂರ್ವಾನ್ವಯ!

ನಾನ್ ಡೊಮೆಸ್ಟಿಕ್ -ಗೃಹೇತರ ಬಳಕೆ (ವಾಣಿಜ್ಯ ಉದ್ದೇಶ)
ಕೈಗಾರಿಕೆಗಳಿಗೆ/ಬಲ್ಕ್ ಸಪ್ಲೇ ಬಳಕೆಯ ಸ್ಲಾಬ್: ಪ್ರತಿ ಲೀಟರ್ ಗೆ 0.90 ಪೈಸೆ ಹೆಚ್ಚಳ(1ಪೈಸೆಗಿಂತ ಕಡಿಮೆ)

  • 0 - 10,000 ಸಾವಿರ ಲೀಟರ್ ಬಳಕೆಯ ಸ್ಲಾಬ್: ಪ್ರತಿ ಲೀಟರ್  ಗೆ 1.00 ಪೈಸೆ ಹೆಚ್ಚಳ
  • 10,001 - 25,000 ಸಾವಿರ ಲೀಟರ್ ಬಳಕೆಯ ಸ್ಲಾಬ್: ಪ್ರತಿ ಲೀಟರ್ಗೆ 1.30 ಪೈಸೆ ಹೆಚ್ಚಳ
  • 25,001 - 50,000 ಸಾವಿರ ಲೀಟರ್ ಬಳಕೆಯ ಸ್ಲಾಬ್: ಪ್ರತಿ ಲೀಟರ್ಗೆ 1.50 ಪೈಸೆ ಹೆಚ್ಚಳ
  • 50,001 - 75,000 ಸಾವಿರ ಲೀಟರ್ ಬಳಕೆಯ ಸ್ಲಾಬ್: ಪ್ರತಿ ಲೀಟರ್ಗೆ 1.90 ಪೈಸೆ ಹೆಚ್ಚಳ
  • 760001 - 1 ಲಕ್ಷ ಸಾವಿರ ಲೀಟರ್ ಬಳಕೆಯ ಸ್ಲಾಬ್: ಪ್ರತಿ ಲೀಟರ್ಗೆ 1.10 ಪೈಸೆ ಹೆಚ್ಚಳ
  • 1 ಲಕ್ಷ ಮತ್ತು ಅದಕ್ಕೂ ಹೆಚ್ಚು ಬಳಕೆ ಸ್ಲಾಬ್: ಪ್ರತಿ ಲೀಟರ್ಗೆ 1.20 ಪೈಸೆ ಹೆಚ್ಚಳ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌