ಬೆಂಗಳೂರಿಗೆ ನೀರು ಸರಬರಾಜು ವಸ್ತುಸ್ಥಿತಿ ಇಲ್ಲಿದೆ ನೋಡಿ... ಅಲ್ಲಲ್ಲಿ ಸಿಂಟೆಕ್ಸ್ ಫಿಕ್ಸ್‌ ಮಾಡಿ ನೀರು ಪೂರೈಕೆ!

Published : Mar 17, 2024, 03:09 PM IST
ಬೆಂಗಳೂರಿಗೆ ನೀರು ಸರಬರಾಜು ವಸ್ತುಸ್ಥಿತಿ ಇಲ್ಲಿದೆ ನೋಡಿ... ಅಲ್ಲಲ್ಲಿ ಸಿಂಟೆಕ್ಸ್ ಫಿಕ್ಸ್‌ ಮಾಡಿ ನೀರು ಪೂರೈಕೆ!

ಸಾರಾಂಶ

ಬೆಂಗಳೂರಿನ ಆರ್.ಆರ್.ನಗರ, ರಾಜಾಜಿನಗರ ಸೇರಿದಂತೆ ವಿವಿಧೆಡೆ ಸಿಂಟೆಕ್ಸ್‌ಗಳನ್ನು ಇಟ್ಟು ಅದಕ್ಕೆ ಮೂರ್ನಾಲ್ಕು ನಲ್ಲಿಗಳನ್ನು ಅಳವಡಿಕೆ ಮಾಡಿ, ಸ್ಥಳೀಯ ನಿವಾಸಿಗಳಿಗೆ ನೀರಿನ ಪೂರೈಕೆ ಮಾಡಲಾಗುತ್ತಿದೆ.

ಬೆಂಗಳೂರು (ಮಾ.17): ರಾಜ್ಯ ರಾಜಧಾನಿ ಬೆಂಗಳೂರಿಗೆ ಬೇಸಿಗೆ ಆರಂಭಕ್ಕೂ ಮುನ್ನವೇ ಕುಡಿಯುವ ನೀರಿನ ವಸ್ತುಸ್ಥಿತಿ ಬಗ್ಗೆ ಬೆಂಗಳೂರು ಜಲಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ಸ್ವತಃ ಸ್ಥಳ ಭೇಟಿ ಮಾಡಿ ವಾಸ್ತವಿಕ ಚಿತ್ರಣವನ್ನು ಪರಿಶೀಲನೆ ಮಾಡಿದ್ದಾರೆ. ಈ ವೇಳೆ ಬೆಂಗಳೂರಿನ ಆರ್.ಆರ್.ನಗರ, ರಾಜಾಜಿನಗರ ಸೇರಿದಂತೆ ವಿವಿಧೆಡೆ ಸಿಂಟೆಕ್ಸ್‌ಗಳನ್ನು ಇಟ್ಟು ಅದಕ್ಕೆ ಮೂರ್ನಾಲ್ಕು ನಲ್ಲಿಗಳನ್ನು ಅಳವಡಿಕೆ ಮಾಡಿ, ಸ್ಥಳೀಯ ನಿವಾಸಿಗಳಿಗೆ ನೀರಿನ ಪೂರೈಕೆ ಮಾಡಲಾಗುತ್ತಿದೆ.

'ಹೌದು, ಬೆಂಗಳೂರಿನ ಜನತೆಗೆ ಕಾವೇರಿ ನೀರನ್ನು ಕೊಳಾಯಿಗಳ ಬದಲಾಗಿ, ಸಿಂಟೆಕ್ಸ್‌ಗಳನ್ನು ಇಟ್ಟು ನೀರನ್ನು ಸರಬರಾಜು ಮಾಡಲಾಗುತ್ತಿದೆ. ಕೊಳೆಗೇರಿ ಸೇರಿದಂತೆ ಕೆಲವು ಜನನಿಬಿಡ ಪ್ರದೇಶಗಳಲ್ಲಿ ನೀರಿನ ಸಿಂಟೆಕ್ಸ್‌ಗಳನ್ನು ಅಳವಡಿಕೆ ಮಾಡಲಾಗುತ್ತಿದೆ. ಇನ್ನು ಮನೆ ಮನೆಗೆ ತೆರಳಿ ಪರಿಶೀಲನೆ ಮಾಡಿದ ಜಲಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್ ಮನೀಗರ್ ಅವರು ಮನೆಯ ಮುಂದೆ ಅಳವಡಿಕೆ ಮಾಡಲಾಗಿದ್ದ ಡ್ರಮ್‌ಗಳನ್ನು ಪರಿಶೀಲನೆ ಮಾಡಿದರು. ಈ ವೇಳೆ ನೀರಿನ ಸ್ವಚ್ಛತೆಗೆ ಆದ್ಯತೆ ನೀಡುವಂತೆ ಸೂಚಿಸಿದರು.

ಬೆಂಗಳೂರಿನಲ್ಲಿ ನೀರಿನ ಸದ್ಬಳಕೆ, ಉಳಿತಾಯಕ್ಕೆ 4 ಆ್ಯಪ್ ಲೋಕಾರ್ಪಣೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಜಲ ಮಂಡಳಿ ಅಧ್ಯಕ್ಷರಾದ  ರಾಮ್ ಪ್ರಸಾತ್ ಮನೋಹರ್ ಅವರು, ಬೆಂಗಳೂರು ನಗರದಲ್ಲಿ ಖಾಸಗಿ ನೀರಿನ ಟ್ಯಾಂಕರ್ ಗಳ ನೋಂದಣಿ ಕಾರ್ಯ ಮುಗಿದಿದ್ದು, ಶೇ.95 ರಷ್ಟು ಖಾಸಗಿ ನೀರಿನ ಟ್ಯಾಂಕರ್ ಗಳನ್ನ ಈಗಾಗಲೇ ನೋಂದಾಯಿಸಲಾಗಿದೆ. ನೋಂದಣಿ ಆಗದೆ ಇರುವಂತಹ ಖಾಸಗಿ ನೀರಿನ ಟ್ಯಾಂಕರ್ ಗಳ ಮೇಲೆ ಕಾನೂನಿನ ರೀತ್ಯಾ ಕ್ರಮ ಕೈಗೊಳ್ಳಲಾಗುವುದು. ಬೆಂಗಳೂರಿನ ಕೊಳಚೆ ಪ್ರದೇಶಗಳಾದ ಭಾಷ್ಯಂ ಪಾರ್ಕ್, ದೀನ ಬಂಧು ನಗರ, ಶ್ರೀರಾಮ ನಗರ ಸೇರಿದಂತೆ ಜನಸಂದ್ರತೆಯ ಪ್ರದೇಶಗಳಿಗೆ ಭೇಟಿ ನೀಡಿ ನಾಗರಿಕರೊಂದಿಗೆ ನೀರಿನ ವಿತರಣೆಯ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು. ಕಾವೇರಿ ನೀರಿನ ಸಂಪರ್ಕ ಇರುವಂತಹ ಪ್ರದೇಶಗಳಲ್ಲಿ ಈಗಾಗಲೇ ಸಮರ್ಪಕವಾದ ವಿತರಣೆಯನ್ನು ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ.

ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ನಗರದ ಎಲ್ಲಾ ಭಾಗದಲ್ಲಿ ಟ್ಯಾಂಕ್ ಗಳನ್ನು ಅಳವಡಿಸುವ ಮೂಲಕ ಉಚಿತವಾಗಿ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಕುಡಿಯುವ ನೀರು ಪೂರೈಸುವ ಖಾಸಗಿ ಟ್ಯಾಂಕರ್ ಗಳ ನೋಂದಣಿ ಪ್ರಕ್ರಿಯೆಯ ಗಡುವು ದಿನಾಂಕ ಮಾರ್ಚ್ 15 ಕ್ಕೆ ಮುಗಿದಿದೆ.  ಶೇಕಡಾ 95 ರಷ್ಟು ನೀರಿನ ಖಾಸಗಿ ಟ್ಯಾಂಕರ್ ಗಳನ್ನ ನೋಂದಾಯಿಸಲಾಗಿದೆ. ಕೆಲವೆಡೆ ಟ್ರಾಕ್ಟರ್ ಮಾರ್ಪಾಡಿಸಿ ನೀರಿನ ಟ್ಯಾಂಕರ್ ಗಳಾಗಿ ಪರಿವರ್ತಿಸಲಾಗಿದೆ. ಇವುಗಳ ಮೇಲೆಯೂ ನಿಗಾ ಇಡಲಾಗುವುದು. ನೋಂದಣಿ ಗೆ ಗಡುವು ನೀಡಿದ ಸಮಯದಲ್ಲಿ ನೋಂದಣಿ ಮಾಡದೆ ಇರುವಂತಹ ಖಾಸಗಿ ನೀರಿನ ಟ್ಯಾಂಕರ್ ಗಳ ಮಾಲೀಕರ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

ಸರ್ಕಾರಿ ನೌಕರರಿಗೆ ಶೇ.3.75 ತುಟ್ಟಿ ಭತ್ಯೆ ಹೆಚ್ಚಿಸಿದ ಸರ್ಕಾರ; ಜನವರಿಯಿಂದಲೇ ಪೂರ್ವಾನ್ವಯ!

ನಗರದ ಹೊರಭಾಗದಲ್ಲಿ ಇರುವಂತಹ ಗ್ರಾಮಗಳಿಗೆ ಇನ್ನು ಕಾವೇರಿ ನೀರಿನ ಸಂಪರ್ಕ ನೀಡಲಾಗಿಲ್ಲ. ಈ ಭಾಗದಲ್ಲಿ ಅಂತರ್ಜಲ ದ ಮೇಲೆ ಹೆಚ್ಚಿನ ಅವಲಂಬನೆ ಇದೆ. ಈ ಪ್ರದೇಶದಲ್ಲಿ ಬಿಬಿಎಂಪಿ ಯಿಂದ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುತ್ತಿದೆ.  ನಗರದ ಹೊರಭಾಗದ ಗ್ರಾಮಗಳಿಗೂ ಭೇಟಿ ನೀಡಿ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ದಿನದ 24 ಗಂಟೆಗಳ ಕಾಲ ನಗರದ ಕುಡಿಯುವ ನೀರು ಸರಬರಾಜು ಸಮರ್ಪಕವಾಗಿ ನಡೆಯುವಂತೆ ಮಂಡಳಿ ವತಿಯಿಂದ ನಿಗಾ ವಹಿಸಲಾಗುತ್ತಿದೆ ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ನನಗೂ ಸಿಎಂ ಆಗುವ ಆಸೆ ಇದೆ, ಹೈಕಮಾಂಡ್ ನಿರ್ಧಾರ ಅಂತಿಮ: ದಿನೇಶ್‌ ಗುಂಡೂರಾವ್
Karnataka News Live: ನ್ಯಾಷನಲ್‌ ಹೆರಾಲ್ಡ್‌ ಕೇಸ್‌ನಲ್ಲಿ ಡಿಕೆಗೆ ದಿಲ್ಲಿ ಪೊಲೀಸ್‌ ನೋಟಿಸ್‌