ಬೆಂಗಳೂರಿಗೆ ಎಲ್ಲೋ ಅಲರ್ಟ್, ಒಂದು ವಾರ ಭಾರೀ ಮಳೆಯ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ!

By Gowthami K  |  First Published Aug 12, 2024, 1:10 PM IST

ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ 1 ವಾರ ಹೆಚ್ಚಿನ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.


ಬೆಂಗಳೂರು (ಆ.12): ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ 1 ವಾರ ಹೆಚ್ಚಿನ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.  ಮುಂದಿನ ಗುರುವಾರದವರೆಗೆ ಅಲ್ಪ ಪ್ರಮಾಣದ ಮಳೆಯಾಗಲಿದ್ದು, ಶುಕ್ರವಾರ ಮತ್ತು ಶನಿವಾರ ನಗರದಲ್ಲಿ ಭಾರೀ ಮಳೆಯಾಗಲಿದೆ ಎಂದು ವರದಿ ನೀಡಿದ್ದು ಎಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಆಗಸ್ಟ್ 13 ರಿಂದ ಆಗಸ್ಟ್ 17ರವರೆಗಿನ ವರದಿಯನ್ನು ಬಿಡುಗಡೆ ಮಾಡಿದೆ.

ಬೆಂಗಳೂರಿನಲ್ಲಿ ಸೋಮವಾರ ಬೆಳ್ಳಂಬೆಳಗ್ಗೆ ಇದ್ದಕ್ಕಿದ್ದಂತೆಯೇ ವಿಪರೀತ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಬೆಂಗಳೂರು ನಗರ ಮತ್ತು ಹೊರ ವಲಯದಲ್ಲಿ ಹಲವು ಕಡೆ ಮನೆಗಳು ಜಲಾವೃತವಾಗಿದೆ.

Tap to resize

Latest Videos

undefined

ತುಂಗಭದ್ರಾ ಡ್ಯಾಂ ಅವಘಡ ಇದೇ ಮೊದಲಲ್ಲ, 2019ರಲ್ಲೂ ನಡೆದಿತ್ತು ದುರಸ್ಥಿಗಾಗಿ ವಾರಗಳ ಕಾಲ ಹರಸಾಹಸ!

ಮುಂದಿನ 1 ವಾರಗಳ ಕಾಲ ಬೆಂಗಳೂರಿನಲ್ಲಿ ಗುಡುಗು ಸಹಿತ ಬಾರೀ ಮಳೆಯಾಗಲಿದ್ದು, ಗಂಟೆಗೆ 35 ಕಿಮೀ ವೇಗದಿಂದ 66 ಕಿ ಮೀಟರ್ ವೇಗದಲ್ಲಿ ಗಾಳಿ ಸಹಿತ ಮಳೆಯಾಗಲಿದೆ.  ಸಮೀಪದ ಜಿಲ್ಲೆಗಳಲ್ಲೂ ಕೂಡ ಮಳೆಯಾಗಲಿದೆ ಎಂದು ಐಎಂಡಿ ಹೇಳಿದೆ.

ಬೆಂಗಳೂರಿಗೆ ಸಮೀಪ ಜಿಲ್ಲೆಗಳಾದ ರಾಮನಗರ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕೂಡ ಗುಡುಗು ಸಹಿತ ಭಾರೀ  ಮಳೆಯಾಗಲಿದೆ. ಮೈಸೂರು, ಮಂಡ್ಯ, ಹಾಸನ, ತುಮಕೂರು ಜಿಲ್ಲೆಗಳಲ್ಲಿ ಕೆಲವೆಡೆ  ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಇನ್ನು ಕರ್ನಾಟಕದ ಕರಾವಳಿ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ವರದಿ ಬಂದಿದೆ.

ತುಂಗಭದ್ರಾ ಜಲಾಶಯ ಚೈನ್‌ಲಿಂಕ್ ದುರಸ್ತಿಗೆ ಇನ್ನೂ 4-5 ದಿನಗಳು ಬೇಕು; ಡಿಸಿಎಂ ಡಿ.ಕೆ. ಶಿವಕುಮಾರ

ಈ ನಡುವೆ ಬೆಂಗಳೂರಿನ ನಿವಾಸಿಗಳು ಪ್ರತಿಕೂಲ ಹವಾಮಾನವನ್ನು ಎದುರಿಸಲು ಸಿದ್ದರಾಗಿರಬೇಕು, ಮಳೆಯ ನಡುವೆ ಬಿಸಿಲು ಕೂಡ ಇರಲಿರುವುದಿಂದ ಮುನ್ನೆಚ್ಚರಿಕೆಯನ್ನು ತೆಗೆದುಕೊಳ್ಳಬೇಕು ಎಂದು ತಜ್ಞರು ತಿಳಿಸಿದ್ದಾರೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಮಳೆ ಬರುವ ಸಾಧ್ಯತೆ ಇದೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ  ಲಘು ಮಳೆಯಾಗಲಿದೆ ಎಂದು IMD ತಿಳಿಸಿದೆ. 

click me!