
ಬೆಂಗಳೂರು (ಮಾ.07): ಬೆಂಗಳೂರಿನಲ್ಲಿ ವಾಸವಾಗಿರುವ ಮಹಿಳೆ ಬಿಬಿಎಂಪಿ ಆಸ್ಪತ್ರೆಯಲ್ಲಿ ಕೊಟ್ಟ ಔಷಧಿಯನ್ನು ಪಡೆದು ನನಗೆ ಸೈಡ್ ಎಫೆಕ್ಟ್ ಆಗಿ ತೀವ್ರ ಅನಾರೋಗ್ಯ ಸಮಸ್ಯೆಗೆ ಒಳಗಾಗಿದ್ದೇನೆ. ನನಗೆ ಬಿಬಿಎಂಪಿ ಹಾಗೂ ರಾಜ್ಯ ಸರ್ಕಾರದಿಂದ ಕನಿಷ್ಠ 10 ಲಕ್ಷ ರೂ. ಪರಿಹಾರ ಕೊಡಬೇಕು ಎಂದು ಆಗ್ರಹಿಸಿ ಬಿಬಿಎಂಪಿ ಕೇಂದ್ರ ಕಚೇರಿಯ ಕೌನ್ಸಿಲ್ ಕಟ್ಟಡದಿಂದ ಬೀಳುವುದಾಗಿ ಭಯಪಡಿಸಿದ್ದಾಳೆ. ಈ ಘಟನೆ ಬಗ್ಗೆ ಬಿಬಿಎಂಪಿ ಆರೋಗ್ಯ ವೈದ್ಯಾಧಿಕಾರಿ ನಿರ್ಮಲಾ ಬುಗ್ಗಿ ಅವರು ಸ್ಪಷ್ಟೀಕರಣ ನೀಡಿದ್ದಾರೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಗೋವಿಂದರಾಜ ನಗರದ ಎಂ.ಸಿ ಲೇಔಟ್ ನಲ್ಲಿರುವ ಬಿ.ಜಿ.ಎಸ್ ಆಸ್ಪತ್ರೆಯಲ್ಲಿ ವಿಜಯ ನಗರದ ನಿವಾಸಿಯಾದ ಉಮಾ ಮಹೇಶ್ವರಿ ಎಂಬುವರು 16ನೇ ಆಗಸ್ಟ್ 2024 ರಂದು ಚಿಕಿತ್ಸೆಗಾಗಿ ತೆರಳಿದ್ದು, ಅಲ್ಲಿ ನೀಡಿರುವ ಔಷಧಗಳಿಂದ ನನಗೆ ಸಮಸ್ಯೆಯಾಗಿದೆ ಅದಕ್ಕಾಗಿ ಪರಿಹಾರ ನೀಡುತ್ತಿಲ್ಲವೆಂದು ಇಂದು ಪಾಲಿಕೆ ಕೇಂದ್ರ ಕಛೇರಿಯ ಕೌನ್ಸಿಲ್ ಸಭಾಂಗಣದ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಸಂಬಂಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿರುತ್ತದೆ.
ಗೋವಿಂದರಾಜನಗರದಲ್ಲಿರುವ ಎಂ.ಸಿ ಲೇಔಟ್‌ನಲ್ಲಿರುವ ಬಿಬಿಎಂಪಿ ಆಸ್ಪತ್ರೆಗೆ 2024ರ ಆ.16ರಂದು ತಲೆನೋವು, ಮೈಕೈ ನೋವು ಎಂದು ಚಿಕಿತ್ಸೆಗೆ ಮಹಿಳೆ ಬಂದಾಗ, ವೈದ್ಯರು ಚಿಕಿತ್ಸೆ ನೀಡಿ ಕಳುಹಿಸಿರುತ್ತಾರೆ. ಅದಾದ ಬಳಿಕ 8 ದಿನಗಳ ನಂತರ ಆ.24ರಂದು ಮತ್ತೆ ಇದೇ ಆಸ್ಪತ್ರೆಗೆ ಚಿಕಿತ್ಸೆಗೆ ಬಂದಿರುತ್ತಾರೆ. ಆಗಲೂ ವೈದ್ಯರು ಚಿಕಿತ್ಸೆ ನೀಡಿ ಕಳುಹಿಸಿರುತ್ತಾರೆ. ಅದಾದ ಬಳಿಕ ವಿಕ್ಟೋರಿಯಾ, ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾಳೆ. ಈ ಮಹಿಳೆ ಮೇಲ್ನೋಟಕ್ಕೆ ಆ ಮಹಿಳೆಯು ಮಾನಸಿಕ ಖಿನ್ನತೆಗೆ ಒಳಗಾಗಿರುವುದು ಕಂಡು ಬಂದಿದೆ.
ಇದನ್ನೂ ಓದಿ: ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ ನಟಿ ರನ್ಯಾ ರಾವ್ ಬಿಗ್ ಟ್ವಿಸ್ಟ್! 27 ಸಲ ದುಬೈ ಯಾತ್ರೆ| ಮೊಬೈಲ್‌ನಲ್ಲಿ ಸಿಕ್ಕಿದ್ದೇನು?
ಇನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ಹಲವು ಬಾರಿ ಚಿಕಿತ್ಸೆ ಬಳಿಕ ಎಲ್ಲ ಆಸ್ಪತ್ರೆಗಳ ಚೀಟಿಗಳನ್ನು ಇಟ್ಟುಕೊಂಡು ಸರ್ಕಾರಿ ಕಛೇರಿಗಳು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಬಳಿ ತೆರಳಿ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ. ನನಗೆ ಜೀವನಾಂಶ ನೀಡುವವರೆಗೂ ತೆರಳುವುದಿಲ್ಲ. ನಾನು ಮನೆಯಿಂದ ಇಲ್ಲಿಗೆ ಬರಲು ಆಗಿರುವ ಓಲಾ ಚಾರ್ಜ್ ಸೇರಿದಂತೆ ಇನ್ನಿತರೆ ಖರ್ಚುಗಳಿಗೆ ಹಣ ನೀಡಲು ಅಧಿಕಾರಿಗಳಲ್ಲಿ ಒತ್ತಾಯಿಸಿರುತ್ತಾರೆ.
ಇದೀಗ ಉಮಾ ಮಹೇಶ್ವರಿ ರವರಿಗೆ ಎಂ.ಸಿ ಲೇಔಟ್ ನಲ್ಲಿ ಚಿಕಿತ್ಸೆ ನೀಡಿರುವ ವಿಚಾರವಾಗಿ ವೈದ್ಯಕೀಯ ತನಿಕಾ ತಂಡವು ಈಗಾಗಲೇ ಪ್ರಥಮ ವಿಚಾರಣೆ ನಡೆಸಿದ್ದು, ಇದರಿಂದ ಯಾವುದೇ ಲೋಪವಾಗಿರುವುದಿಲ್ಲ ಎಂದು ವರದಿ ನೀಡಿರುತ್ತಾರೆ. ಈ ಪ್ರಕರಣಕ್ಕೂ ಬಿಬಿಎಂಪಿಗೆ ಯಾವುದೇ ಸಂಬಂಧವಿರುವುದಿಲ್ಲ. ಮುಖ್ಯ ಆಯುಕ್ತರ ನಿರ್ದೇಶನದ ಮೇರೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳಿಂದ ಮತ್ತೊಂದು ಸುತ್ತಿನ ತನಿಖೆ ನಡೆಸಿ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯ ಆರೋಗ್ಯಾಧಿಕಾರಿ(ಕ್ಲಿನಿಕಲ್) ಆದ ಡಾ. ನಿರ್ಮಲಾ ಬುಗ್ಗಿ ರವರು ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ: ದಾಂಪತ್ಯಕ್ಕೆ ಕಾಲಿರಿಸಿದ ತೇಜಸ್ವಿ ಸೂರ್ಯ ಮೊದಲ ಪೋಸ್ಟ್; ಮದುವೆ ಸಂಪ್ರದಾಯ ಬಿಚ್ಚಿಟ್ಟ ಸಂಸದ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ