
ಬೆಂಗಳೂರು: ಬಹುನಿರೀಕ್ಷಿತ ಆರ್.ವಿ. ರಸ್ತೆ–ಬೊಮ್ಮಸಂದ್ರ ಹಳದಿ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಹಸಿರು ನಿಶಾನೆ ತೋರಿಸಿದ ಬಳಿಕ ಉದ್ಘಾಟನಾ ಕಾರ್ಯಕ್ರಮದ ನಂತರ ಪ್ರಧಾನಿ ಮೋದಿ ನೂತನ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಿದರು. ಬುಧವಾರದಿಂದ ಈ ಮಾರ್ಗದಲ್ಲಿ ವಾಣಿಜ್ಯ ಸಂಚಾರ ಪ್ರಾರಂಭವಾಗಲಿದ್ದು, ಪ್ರಾರಂಭದಲ್ಲಿ 25 ನಿಮಿಷಕ್ಕೊಮ್ಮೆ ರೈಲು ಸಂಚಾರ ನಡೆಯಲಿದೆ. ಸದ್ಯಕ್ಕೆ ಕೇವಲ ಮೂರು ಮೆಟ್ರೋ ರೈಲುಗಳ ಮೂಲಕವೇ ಬಿಎಂಆರ್ಸಿಎಲ್ ಸೇವೆ ಆರಂಭಿಸಲು ನಿರ್ಧರಿಸಿದೆ. ಚಾಲಕರಿಲ್ಲದ (ಡ್ರೈವರ್‌ಲೆಸ್) ರೈಲುಗಳು ಇನ್ನೂ ಲಭ್ಯವಾಗದ ಕಾರಣ, ಹಳದಿ ಮಾರ್ಗದ ಸಂಪೂರ್ಣ ಸಾಮರ್ಥ್ಯದಲ್ಲಿ ಸಂಚಾರ ಪ್ರಾರಂಭಿಸಲು ಸಮಯ ಹಿಡಿಯಲಿದೆ.
ಆರ್.ವಿ. ರಸ್ತೆ–ಬೊಮ್ಮಸಂದ್ರ ಮಾರ್ಗದ ಒಟ್ಟು ಉದ್ದ 19.15 ಕಿಲೋಮೀಟರ್ ಆಗಿದ್ದು, 16 ನಿಲ್ದಾಣಗಳನ್ನು ಒಳಗೊಂಡಿದೆ. ಈ ಮಾರ್ಗಕ್ಕೆ ಅಗತ್ಯವಿರುವ 15 ರೈಲುಗಳ ಪೈಕಿ ಪ್ರಸ್ತುತ ಮೂರು ರೈಲುಗಳು ಮಾತ್ರ ಲಭ್ಯ. ಪ್ರಾರಂಭದಲ್ಲಿ ದಿನಕ್ಕೆ ಸುಮಾರು 25 ರಿಂದ 30 ಸಾವಿರ ಪ್ರಯಾಣಿಕರು ಈ ಮಾರ್ಗದಲ್ಲಿ ಸಂಚರಿಸುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ