ಯಾವುದೇ ಧರ್ಮವಾಗಲಿ ಸಮಾಜದ ಒಳಿತನ್ನು ಬಯಸುತ್ತದೆಯೇ ವಿನಃ ಸಮಾಜ ಒಡೆಯಲು ಬೋಧಿಸುವುದಿಲ್ಲ. ರಾಷ್ಟ್ರಕವಿ ಕುವೆಂಪು ಹೇಳಿದಂತೆ ಈ ನಾಡು ಸರ್ವ ಜನಾಂಗದ ಶಾಂತಿಯ ತೋಟವಾಗಬೇಕಾದರೆ ಎಲ್ಲರೂ ಸಹಿಷ್ಣುತೆಯಿಂದ ಜೀವನ ನಡೆಸಬೇಕು. ಆದರೆ, ಕೆಲ ಶಕ್ತಿಗಳು ಸಂವಿಧಾನ ವಿರೋಧಿಯಾಗಿವೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ
ಬಳ್ಳಾರಿ(ನ.28): ಜಾತಿ, ಧರ್ಮಗಳ ಹೆಸರಿನಲ್ಲಿ ಕೆಲವರು ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದಾರೆ. ಸಂವಿಧಾನ ವಿರೋಧಿಯಾಗಿ ವರ್ತಿಸುತ್ತಿದ್ದಾರೆ. ಅಂತಹವರಿಂದ ಸದಾ ಎಚ್ಚರದಿಂದ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಸಿದ್ದರಾಮಯ್ಯ ನಗರದಲ್ಲಿ ಕೆಥೋಲಿಕ್ ಕ್ರೈಸ್ತ ಧರ್ಮ ಕ್ಷೇತ್ರದಿಂದ ಬುಧವಾರ ಹಮ್ಮಿಕೊಂಡಿದ್ದ ಬಳ್ಳಾರಿ ಧರ್ಮಕ್ಷೇತ್ರ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಯಾವುದೇ ಧರ್ಮವಾಗಲಿ ಸಮಾಜದ ಒಳಿತನ್ನು ಬಯಸುತ್ತದೆಯೇ ವಿನಃ ಸಮಾಜ ಒಡೆಯಲು ಬೋಧಿಸುವುದಿಲ್ಲ. ರಾಷ್ಟ್ರಕವಿ ಕುವೆಂಪು ಹೇಳಿದಂತೆ ಈ ನಾಡು ಸರ್ವ ಜನಾಂಗದ ಶಾಂತಿಯ ತೋಟವಾಗಬೇಕಾದರೆ ಎಲ್ಲರೂ ಸಹಿಷ್ಣುತೆಯಿಂದ ಜೀವನ ನಡೆಸಬೇಕು. ಆದರೆ, ಕೆಲ ಶಕ್ತಿಗಳು ಸಂವಿಧಾನ ವಿರೋಧಿಯಾಗಿವೆ ಎಂದರು.
ಡಿ.ಕೆ.ಶಿವಕುಮಾರ್ ಬೆನ್ನಲ್ಲೇ ಇಂದು ಸಿದ್ದರಾಮಯ್ಯ ಕೂಡ ದೆಹಲಿಗೆ
ನಾನು ಹಿಂದೂ ವಿರೋಧಿಯಲ್ಲ:
ನಾನು ಹಿಂದೂ ವಿರೋಧಿ ಎಂಬಂತೆ ಬಿಂಬಿಸಲಾಗುತ್ತಿದೆ. ಆದರೆ ನಾನು ಯಾವುದೇ ಧರ್ಮದ ವಿರೋಧಿಯಲ್ಲ. ನಾನು ಹಿಂದೂ ಧರ್ಮ ವನ್ನು ಪ್ರೀತಿಸಿದಂತೆಯೇ ಉಳಿದ ಧರ್ಮಗಳನ್ನೂ ಪ್ರೀತಿಸುತ್ತೇನೆ. ಗೌರವಿಸುತ್ತೇನೆ. ಜಾತಿ ವ್ಯವಸ್ಥೆಯಿಂದಾಗಿಯೇ ಸಮಾಜದಲ್ಲಿ ಅಸಮಾನತೆ ಸೃಷ್ಟಿಯಾಗಿದೆ ಎಂದರು.
ಬಿಜೆಪಿ, ಆರ್‌ಎಸ್‌ಎಸ್ ಸಂವಿಧಾನ ವಿರೋಧಿಗಳು: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಬಿಜೆಪಿ ಮತ್ತು ಆರೆಸ್ಸೆಸ್‌ನವರು ಸಾಮಾಜಿಕ ನ್ಯಾಯದ ವಿರೋಧಿಗಳು, ಮನುಷ್ಯರನ್ನು ಜಾತಿ-ಧರ್ಮದ ಹೆಸರಲ್ಲಿ ವಿಂಗಡಿಸುವ ಮನುಸ್ಮೃತಿಯ ಪರವಾಗಿರುವವರು. ಹಾಗಾಗಿಯೇ ಅವರು ಸಂವಿಧಾನ ವನು ವಿರೋಧಿಸುವ, ಬದಲಾವಣೆ ಮಾಡುವ ಮಾತು, ಪ್ರಯತ್ನ ನಡೆಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಸಿದರು.
ವಿಧಾನಸೌಧ, ಅಂಬೇಡ್ಕರ್ ಭವನ ಹಾಗೂ ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಪ್ರತ್ಯೇಕವಾಗಿ ನಡೆದ ಸಂವಿಧಾನ ದಿನದ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಮಾತನಾಡಿದ ಅವರು, ಆರೆಸ್ಸೆಸ್, ಬಿಜೆಪಿ ವಿರುದ್ಧ ತೀವ್ರ ವಾಕ್ ಪ್ರಹಾರ ನಡೆಸಿದರು.
ಸಂವಿಧಾನ ಅಂಗೀಕಾರವಾಗುವಾಗ ಅದನ್ನು ಬಿಜೆಪಿಯ ಮಾತೃಸಂಸ್ಥೆ ಆರೆಸ್ಸೆಸ್‌ನ ಅಧ್ಯಕ್ಷರಾಗಿದ್ದ ಗೋಳ್ವಾಲ್ಕರ್, ಹಿಂದೂ ಮಹಾಸಭಾದ ಅಧ್ಯಕ್ಷ ಸಾವರ್ಕರ್ ವಿರೋಧಿಸಿದ್ದರು. ವಾಜಪೇಯಿ ಪ್ರಧಾನಿಯಾಗಿ ದ್ದಾಗ ಸಂವಿಧಾನ ಪುನರ್‌ರಚ ನೆಗೆ ವೆಂಕಟಾಚಲಯ್ಯ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ವಾಗ್ದಾಳಿ ಮಾಡಿದ್ದರು. ಇಷ್ಟೆಲ್ಲ ವೈರುಧ್ಯಗಳು ನಮ್ಮ ನಡುವೆ ಇದೆ. ಸಂವಿಧಾನವನ್ನು ಪ್ರೀತಿಸುವ ವರ ನಡುವೆ ವಿರೋಧಿಸುವವರೂ ನಮ್ಮ ನಡುವೆ ಇದ್ದಾರೆ. ಅವರ ಬಗ್ಗೆ ಎಚ್ಚರದಿಂದಿ ರಬೇಕು ಎಂದರು.
ಇನ್ನು, ಈಗಿನ ಮೋದಿ ಅಧಿಕಾರಕ್ಕೆ ಬಂದರೆ ಅವರ ಹಿಂದಿನ ಸರ್ಕಾರದ ಸಂಪುಟದಲ್ಲಿ ಸಚಿವರಾಗಿದ್ದ ಅನಂತಕುಮಾರ್ ಹೆಗಡೆ ನಾವು ಅಧಿಕಾರಕ್ಕೆ ಬಂದಿದ್ದೇ ಸಂವಿಧಾನ ಬದಲಿಸಲು ಎಂದು ಹೇಳಿದ್ದರು. ಅವರ ವಿರುದ್ಧ ಕ್ರಮ ಕೈಗೊಂಡರಾ? ಅವರನ್ನು ಸಂಪುಟದಿಂದ ಕೈಬಿಟ್ಟರಾ? ಅಂದಮೇಲೆ, ಮೋದಿ ಒಪ್ಪಿಗೆ ಇದ್ದೇ ಅನಂತ್ ಹೆಗಡೆ ಅಂತಹ ಹೇಳಿಕೆ ಕೊಟ್ಟರು ಎಂದಾಯಿತಲ್ಲ, ಪಾರ್ಲಿಮೆಂಟ್ ಪ್ರವೇಶಿಸುವಾಗ ಸಂಸತ್ತಿನ ಮೆಟ್ಟಲಿಗೆ, ಸಂವಿಧಾನಕ್ಕೆ ನಮಸ್ಕಾರ ಮಾಡಿದ ಮೋದಿ ಅವರು ಹೇಳುವುದೇ ಒಂದು ಮಾಡುವುದೇ ಇನ್ನೊಂದು ಎಂದು ಕಿಡಿ ಕಾರಿದರು.
ಸಿಎಂ ಸಿದ್ದರಾಮಯ್ಯ ಕುಟುಂಬಕ್ಕೆ ಮತ್ತೆ ಸಂಕಷ್ಟ?
ಪ್ರಭುತ್ವ, ಸಂವಿಧಾನ ಉಳಿದರೆ ನಾವಿಲ್ಲ ಉಳಿಯಲು ಸಾಧ್ಯ. ನಾನು ಮುಖ್ಯಮಂತ್ರಿ ಆಗಿದ್ದೇ ಸಂವಿಧಾನದಿಂದ. ಎರಡು ಬಾರಿ ಮುಖ್ಯಮಂತ್ರಿ ಆಗಿದ್ದೇನೆ ಎಂದು ಕೆಲವರಿಗೆ ಹೊಟ್ಟೆಯುರಿ ಇದೆ. ಆದರೆ, ಜನರ ಆಶೀರ್ವಾದ ಇರುವವರೆಗೆ ನನ್ನನ್ನು ಯಾರೂ ಏನೂ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.
ಸಂವಿಧಾನ ಜಾರಿಗೂ ಮೊದಲು ಅಲಿಖಿತ ಸಂವಿಧಾನ ಇತ್ತು. ಅಸಮಾನತೆ, ತಾರತಮ್ಯ, ಶೂದ್ರ ರನ್ನು ಕೀಳಾಗಿಕಾಣುವ, ಶಿಕ್ಷಣ, ಸಂಪತ್ತಿನ ಸಮಾನತೆಯೇ ಇಲ್ಲದ ವಿಚಾರಗಳು ಅಂದು ಸಮಾಜದಲ್ಲಿದ್ದವು. ಅದನ್ನು ಮನುಸ್ಮೃತಿ ಎಂದು ನಾವು ಕರೆಯುತ್ತೇವೆ. ಇಂತ ಅಲಿಖಿತ ಸಂವಿಧಾನವನ್ನು ಆರೆಸ್ಸೆಸ್ ನವರು ಪೋಷಣೆ ಮಾಡುತ್ತಿದ್ದರು. ಅಂಬೇಡ್ಕರ್ ಅವರು ಹಿಂದೂ ಕೋಡ್ ತಂದು ಮಹಿಳೆಯರಿಗೆ ಸಮಾನ ಅವಕಾಶ ಕೊಡಲು ಮುಂದಾದಾಗ ಇದರಿಂದ ಪುರುಷರು ಖಿನ್ನತೆಗೆ ಒಳಗಾಗುತ್ತಾರೆ ಎಂದು ಕೆಲವರು ಹೇಳಿದರು. ಇದನ್ನೆಲ್ಲ ನಾವು ಸೂಕ್ಷ್ಮವಾಗಿ ತಿಳಿದುಕೊಳ್ಳಬೇಕು ಎಂದರು.