ಶಾಸಕ ಬಿಕೆ ಸಂಗಮೇಶ್ ಪುತ್ರನ ಗೂಂಡಾಗಿರಿ, ಮಹಿಳಾ ಅಧಿಕಾರಿಗೆ ಸೊಂಟದ ಕೆಳಗಿನ ಪದ ಬಳಸಿ ನಿಂದನೆ!

Published : Feb 11, 2025, 11:37 AM ISTUpdated : Feb 11, 2025, 12:43 PM IST
ಶಾಸಕ ಬಿಕೆ ಸಂಗಮೇಶ್ ಪುತ್ರನ ಗೂಂಡಾಗಿರಿ, ಮಹಿಳಾ ಅಧಿಕಾರಿಗೆ ಸೊಂಟದ ಕೆಳಗಿನ ಪದ ಬಳಸಿ ನಿಂದನೆ!

ಸಾರಾಂಶ

ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ ಪುತ್ರ ಬಸವೇಶ್, ಅಕ್ರಮ ಮರಳು ದಂಧೆ ತಡೆಯಲು ಹೋದ ಮಹಿಳಾ ಅಧಿಕಾರಿ ಜ್ಯೂತಿಯವರನ್ನು ನಿಂದಿಸಿದ ವಿಡಿಯೋ ವೈರಲ್ ಆಗಿದೆ. ಈ ಘಟನೆ ಭದ್ರಾ ನದಿ ತಟದಲ್ಲಿ ನಡೆದಿದೆ. ಪ್ರತಿಪಕ್ಷಗಳು ಈ ಕೃತ್ಯವನ್ನು ಖಂಡಿಸಿವೆ. ಸಚಿವ ರಾಜಣ್ಣ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂದು ಹೇಳಿದ್ದಾರೆ.

ಭದ್ರಾವತಿ (ಫೆ.11): ಅಕ್ರಮ ಮರಳು ದಂಧೆ ತಡೆಯಲು ಹೋದ ಗಣಿ ಮತ್ತು ಭೂವಿಜ್ಞಾನದ ಮಹಿಳಾ ಅಧಿಕಾರಿ ವಿರುದ್ಧ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಶಾಸಕ ಬಿಕೆ ಸಂಗಮೇಶ್ ಪುತ್ರ  ಅತ್ಯಂತ ಕೆಟ್ಟ ಪದಗಳಿಂದ ಬೈದು ನಿಂದಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸಂಗಮೇಶ್ ಪುತ್ರ ಬಸವೇಶ್  ಮಹಿಳಾ ಅಧಿಕಾರಿ ಜ್ಯೂತಿ ಎಂಬವರಿಗೆ ಅವಾಚ್ಯವಾಗಿ ಬಾಯಿಗೆ ಬಂದಂತೆ ಬೈದಿರುವುದು ವಿಡಿಯೋದಲ್ಲಿ ಕಂಡು ಬಂದಿದೆ.  ಭದ್ರಾ ನದಿತಟದಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಗಣಿಗಾರಿಕೆ ಮೇಲೆ ಗಣಿ ಇಲಾಖೆಯ ವಿಜ್ಞಾನಿ ಜ್ಯೋತಿ ಕಳೆದ ರಾತ್ರಿ ದಾಳಿ ಮಾಡಿದ್ದರು. ಈ ವೇಳೆ ನಡೆದ ಘಟನೆಯ ವಿಡಿಯೋ ವೈರಲ್ ಆಗಿದೆ.

ಮಹಿಳಾ ಅಧಿಕಾರಿಗೆ ಬೈದಿದ್ದನ್ನು ಸಮರ್ಥಿಸಿಕೊಂಡ ಅಪ್ಪ, ವರದಿ ಮಾಡಿದ ಸುವರ್ಣನ್ಯೂಸ್‌ ಮೇಲೆ ಮಗನ ಕೋಪ

ಸಂಗಮೇಶ್ ಪುತ್ರ ಬಸವೇಶ್ ಈ ಕೃತ್ಯವನ್ನು ಪ್ರತಿಪಕ್ಷಗಳಾದ ಜೆಡಿಎಸ್ ಹಾಗೂ ಬಿಜೆಪಿ ತೀವ್ರವಾಗಿ ಖಂಡಿಸಿದೆ. ಪ್ರಕರಣ ಸಂಬಂಧ ಟ್ವೀಟ್‌ ಮಾಡಿರುವ ಬಿಜೆಪಿ, ಮಹಿಳೆಯರಿಗೆ ರಕ್ಷಣೆಯಿಲ್ಲ - ಮಹಿಳಾ ಅಧಿಕಾರಿಗಳಿಗೆ ಗೌರವವಿಲ್ಲ ಇದು ಕಾಂಗ್ರೆಸ್ ಸರ್ಕಾರದ ಮಹಿಳಾ ನೀತಿ!

ಶಿವಮೊಗ್ಗ ಜಿಲ್ಲೆಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿ ಅಕ್ರಮ ಮರಳು ಗಣಿಗಾರಿಕೆಯನ್ನು ತಡೆಯಲು ಸ್ಥಳಕ್ಕೆ ಹೋದಾಗ ಭದ್ರಾವತಿ ಕಾಂಗ್ರೆಸ್‌ ಶಾಸಕ ಬಿ.ಕೆ.ಸಂಗಮೇಶ್‌ ಪುತ್ರ ಬಸವೇಶ ಬಳಸಿದ ಭಾಷೆ ಅತ್ಯಂತ ಖಂಡನೀಯ.

ಸಿಎಂ ಸಿದ್ದರಾಮಯ್ಯ ಅವರೆ, ಡಿಸಿಎಂ ಶಿವಕುಮಾರ್ ಅವರೆ ಮಹಿಳಾ ಅಧಿಕಾರಿಗಳಿಗೆ ಅವಾಚ್ಯವಾಗಿ ನಿಂದಿಸುವುದು ನಿಮ್ಮ ಕಾಂಗ್ರೆಸ್‌  ಸಂಸ್ಕೃತಿ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಭದ್ರಾವತಿಯನ್ನು ರಿಪಬ್ಲಿಕ್‌ ಮಾಡಿ ಆಟಾಟೋಪ ಮೆರೆಯುತ್ತಿರುವ ಶಾಸಕರ ಪುತ್ರ ಬಸವೇಶ್‌ರನ್ನು ಬಂಧಿಸಿ, ಗಡಿಪಾರು ಮಾಡಿ ಎಂದು ಕಿಡಿಕಾರಿದೆ.

ಶಾಸಕನ ಮಗನ ದರ್ಬಾರ್, ಅಕ್ರಮ ಮರಳು ದಂಧೆ ತಡೆಯಲು ಹೋದ ಮಹಿಳಾ ಅಧಿಕಾರಿಗೆ ನಿಂದನೆ

ಕೆ ಎನ್‌ ರಾಜಣ್ಣ ಪ್ರತಿಕ್ರಿಯೆ:
ಭದ್ರಾವತಿ ಶಾಸಕರ ಪುತ್ರನ ಪ್ರಕರಣ ಸಂಬಂಧ ಹೇಳಿಕೆ ನೀಡಿದ ಸಚಿವ ಕೆ.ಎನ್.ರಾಜಣ್ಣ  ಅಧಿಕಾರಿಗಳನ್ನು ಆಕ್ಷೇಪಾರ್ಹ ಪದಗಳನ್ನು ಬಳಸಿ ನಿಂದನೆ ಮಾಡುವುದು ಅಪರಾಧ ಯಾರೇ ತಪ್ಪು ಮಾಡಿದ್ರೂ ಶಿಕ್ಷೆ ಆಗಬೇಕು. ಯಾರೇ ಆಗಲಿ ಅಧಿಕಾರಿಗಳ ವಿರುದ್ಧ ಹಾಗೆ ಮಾತನಾಡಬಾರದು. ಕಾನೂನು ಪ್ರಕಾರ ಶಿಕ್ಷೆ ಆಗಲೇಬೇಕು. ಮಿನಿಸ್ಟರ್ ಆಗಲೀ, ಶಾಸಕ‌ ಆಗಲೀ, ಶಾಸಕನ‌ ಮಗ  ಆಗಲೀ ಯಾರೂ ಹಾಗೆ ಮಾತನಾಡಬಾರದು. ಹಾಗೆ ಮಾತನಾಡೋರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಆಗಬೇಕು ಎಂದಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಲೀಚೆಟ್ ಸಂಸ್ಕರಣಾ ಘಟಕ:ಬೆಂಗಳೂರಲ್ಲಿ ಜಟಿಲವಾಗಿರುವ ಕಸದ ಸಮಸ್ಯೆಗೆ ಕೊನೆಗೂ ಮುಕ್ತಿ !
ಇಂಡಿಗೋ ವಿಮಾನ ರದ್ದು, ಬೆಂಗ್ಳೂರು ಏರ್‌ಪೋರ್ಟ್‌ನಲ್ಲಿ ನೂಕು ನುಗ್ಗಲು, ಟಿಕೆಟ್ ಬೆಲೆ 15ರಿಂದ 80,000ಕ್ಕೆ ಏರಿಕೆ