ಕೇಂದ್ರ ಸರ್ಕಾರದಿಂದ ಬಡ ಮತ್ತು ಮಧ್ಯಮ ವರ್ಗದ ಜನರಿಗಾಗಿ ಭಾರತ್ ಬ್ರ್ಯಾಂಡ್ ಯೋಜನೆಯನ್ನು ಜಾರಿಗೆ ತರಲಾಗಿದ್ದು, ಇದರಡಿ ಪ್ರತಿ ಕೆಜಿ ಅಕ್ಕಿಗೆ ಕೇವಲ 29 ರೂ. ಹಾಗೂ ಪ್ರತಿ ಕೆಜಿ ತೊಗರಿ ಬೇಳೆಗೆ 60 ರೂ. ನಿಗದಿ ಮಾಡಲಾಗಿದೆ.
ಬೆಂಗಳೂರು (ಫೆ.06): ಲೋಕಸಭಾ ಚುನಾವಣೆಗೂ ಮುನ್ನ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದಿಂದ ಬಡ ಮತ್ತು ಮಧ್ಯಮ ವರ್ಗದ ಜನರಿಗಾಗಿ ಭಾರತ್ ಬ್ರ್ಯಾಂಡ್ ಯೋಜನೆಯನ್ನು ಜಾರಿಗೆ ತರಲಾಗಿದ್ದು, ಇದರಡಿ ಪ್ರತಿ ಕೆಜಿ ಅಕ್ಕಿಗೆ ಕೇವಲ 29 ರೂ. ಹಾಗೂ ಪ್ರತಿ ಕೆಜಿ ತೊಗರಿ ಬೇಳೆಗೆ 60 ರೂ. ನಿಗದಿ ಮಾಡಲಾಗಿದೆ.
ಹೌದು, ದೇಶದಲ್ಲಿ ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿದ್ದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಗುಡ್‌ನ್ಯೂಸ್ ನೀಡಿದ್ದಾರೆ. ಭಾರತ್ ಬ್ರ್ಯಾಂಡ್ ಯೋಜನೆಯನ್ನು ಜಾರಿಗೊಳಿಸುವ ಮೂಲಕ ಮೂರ್ನಾಲ್ಕು ಅಗತ್ಯ ದಿನಸಿ ಸಾಮಾಗ್ರಿಗಳನ್ನು ಕೈಗೆಟುಕುವ ದರಕ್ಕೆ ಮಾರಾಟ ಮಾಡಲು ಮುಂದಾಗಿದೆ. ಪ್ರತಿ ಕೆ.ಜಿ ಅಕ್ಕಿಗೆ 29 ಪಾಯಿ , ಗೋದಿ 50 ರೂ, ಹೆಸರು ಕಾಳು 90 ರೂ, ತೊಗರಿ ಬೇಳೆ 60 ರೂ. ಮಾರಾಟ ಮಾಡಲಾಗುತ್ತಿದೆ. ಈ ಯೋಜನೆಗೆ ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಚಾಲನೆ ನೀಡಿದರು.
ರಾಯಚೂರು ಕೃಷ್ಣ ನದಿಯಲ್ಲಿ ಪತ್ತೆಯಾದ ದಶಾವತಾರಿ ವಿಷ್ಣು ಮತ್ತು ಶಿವಲಿಂಗ ವಿಗ್ರಹಗಳು
ಭಾರತ್ ಬ್ರಾಂಡ್ ಯೋಜನೆಗೆ ಬೆಂಗಳೂರಿನಲ್ಲಿ ಚಾಲನೆ ನೀಡಿ ಮಾತನಾಡಿದ ಯಡಿಯೂರಪ್ಪ ಅವರು, ನಮ್ಮ ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಕಾರ್ಯಕ್ರಮ ರೂಪಿಸಲಾಗಿದೆ. 29 ರೂಪಾಯಿಗೆ ಕೆ.ಜಿ ಅಕ್ಕಿ, ಗೋದಿ 50ರೂ, ಹೆಸರು ಕಾಳು 90, ತೊಗರಿ ಬೇಳೆ 60 ರೂ ಕೆಜಿಗೆ ಮಾರಾಟ ಮಾಡಲಾಗ್ತಿದೆ. ಭಾರತ್ ಬ್ರಾಂಡ್ ಹೆಸರಲ್ಲಿ ಪ್ರತಿ ಕೆ.ಜಿ ಅಕ್ಕಿ 29ರೂಗೆ ನೀಡಲು ಹಸಿರು ನಿಶಾನೆ ನೀಡಲಾಗಿದೆ. ಇಂತ ಒಳ್ಳೆಯ ಕಾರ್ಯಕ್ರಮಕ್ಕೆ ಚಾಲನೆ ನೀಡಲು ಹೆಮ್ಮೆ ಇದೆ. NCCF ಅಧಿಕಾರಿ ವರ್ಗಕ್ಕೆ ಧನ್ಯವಾದಗಳು ಎಂದು ತಿಳಿಸಿದರು.
ದೇಶದ ಇತಿಹಾಸದಲ್ಲಿ, ಬಡವರು ಮತ್ತು ಮಧ್ಯಮ ವರ್ಗಕ್ಕೆ ಯೋಜನೆ ತಲುಪಲಿದೆ. ಚುನಾವಣೆ ಪೂರ್ವದಲ್ಲಿ 10 ಕೆ.ಜಿ ಅಕ್ಕಿ ಉಚಿತ ನೀಡೋದಾಗಿ ಹೇಳಿದ್ದರು. ಆದರೆ, ಕೇಂದ್ರ ಸರ್ಕಾರದ 5 ಕೆ.ಜಿ ಅಕ್ಕಿ ಹೊರತುಪಡಿಸಿ, ರಾಜ್ಯ ಸರ್ಕಾರದಿಂದ ಒಂದು ಕೆ.ಜಿ ಅಕ್ಕಿಯನ್ನೂ ಕೊಟ್ಟಿಲ್ಲ. ಈಗ ಪುನಃ ಕೇಂದ್ರ ಸರ್ಕಾರವೇ ಜನರಿಗೆ ಅನುಕೂಲ ಆಗುವಂತೆ ಕಡಿಮೆ ದರದಲ್ಲಿ ಅಕ್ಕಿಯನ್ನು ನೀಡಲು ಮುಂದಾಗಿದೆ. ಪ್ರಸ್ತುತ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿ ಕೇಂದ್ರ ಸರ್ಕಾರದ ಭಾರತ್ ಬ್ರ್ಯಾಂಡ್ ಅಕ್ಕಿ ಮಾರಾಟಕ್ಕೆ ಚಾಲನೆ ಸಿಕ್ಕಿದ್ದು, ಈ ಯೋಜನೆಯನ್ನು ಸದುಪಯೋಗ ಮಾಡಿಕೊಳ್ಳುವಂತೆ ಮಾಜಿ ಸಿಎಂ ಯಡಿಯೂರಪ್ಪ ಅವರು ಮನವಿ ಮಾಡಿದ್ದಾರೆ. ಇನ್ನು ಯೋಜನೆಗೆ ಚಾಲನೆ ವೇಳೆ ಶಾಸಕ ಎಸ್.ಆರ್.ವಿಶ್ವನಾಥ್, ಎನ್ ಸಿಸಿಎಫ್ ಜಿಎಂ ಜಾನ್, ಮಾಜಿ ವಿಧಾನ ಪರಿಷತ್ ಸದಸ್ಯ ಎಂ.ಡಿ.ಲಕ್ಷ್ಮೀ ನಾರಾಯಣ ಉಪಸ್ಥಿತರಿದ್ದರು.
ಮೈಸೂರು ಸಿಂಹನ ವಿರುದ್ಧ ಗುಟುರು ಹಾಕುತ್ತಿದೆ ಹಳ್ಳಿಹಕ್ಕಿ: ಲೋಕಸಭೆಗೆ ಕೈನಿಂದ ಸ್ಪರ್ಧಿಸಲು ವಿಶ್ವನಾಥ್ ಸಜ್ಜು!
ಆರ್ಥಿಕವಾಗಿ ದುರ್ಬಲವಾಗಿರುವವರಿಗೆ ಮತ್ತಷ್ಟು ನೆರವು ನೀಡುವ ನಿಟ್ಟಿನಲ್ಲಿ, ಇಡೀ ದೇಶದಲ್ಲಿ ಒಂದೇ ಬ್ರ್ಯಾಂಡಿನಡಿಯಲ್ಲಿ ಅಗತ್ಯ ಆಹಾರ ಸಾಮಗ್ರಿಗಳನ್ನು ರಿಯಾಯತಿ ದರದಲ್ಲಿ ನೀಡುವ ಮಹತ್ವಾಕಾಂಕ್ಷಿ ಉಪಕ್ರಮವನ್ನು ಕೇಂದ್ರ ಸರ್ಕಾರ ಪ್ರಾರಂಭಿಸಿದ್ದು, ಅದರ ಅಂಗವಾಗಿ ಇಂದಿನಿಂದ ಕೆಜಿಗೆ 29 ರೂ.ಗೆ ದೊರೆಯುವ ʼಭಾರತ್ ಅಕ್ಕಿʼ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಜನಸಾಮಾನ್ಯರ ದೈನಂದಿನ ಜೀವನಮಟ್ಟ ಸುಧಾರಿಸುವ ನಿಟ್ಟಿನಲ್ಲಿ ಈ ಯೋಜನೆ ಪ್ರಾರಂಭಿಸಿದ ಹೆಮ್ಮೆಯ ಸನ್ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಹಾಗೂ ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಪಿಯೂಷ್ ಗೋಯಲ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.
- ಬಿ.ಎಸ್. ಯಡಿಯೂರಪ್ಪ, ಮಾಜಿ ಸಿಎಂ