ಭಾರತ ರತ್ನ ಎಲ್.ಕೆ.ಅಡ್ವಾಣಿ ನಿಜವಾದ ಮಣ್ಣಿನ ಮಗ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

Published : Feb 03, 2024, 06:25 PM IST
ಭಾರತ ರತ್ನ ಎಲ್.ಕೆ.ಅಡ್ವಾಣಿ ನಿಜವಾದ ಮಣ್ಣಿನ ಮಗ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಸಾರಾಂಶ

ದೇಶದ ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ ಅವರು ಭಾರತದ ನಿಜವಾದ ಮಣ್ಣಿನ ಮಗನಾಗಿದ್ದಾರೆ. ಅವರಿಗೆ ಭಾರತ ರತ್ನ ಪ್ರಶಸ್ತಿ ದೊರೆತಿರುವುದು ಸಂತಸವಾಗಿದೆ.

ಬೆಂಗಳೂರು (ಫೆ.03): ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ ಅವರಿಗೆ ಭಾರತ ರತ್ನ ಗೌರವ ಸಂದಿರುವುದು ಹೆಮ್ಮೆಯ ವಿಷಯವಾಗಿದ್ದು, ಅವರಿಗೆ ಅಭಿನಂದನೆ ಸಲ್ಲಿಸುತ್ತಿದ್ದೇನೆ. ಎಲ್.ಕೆ. ಅಡ್ವಾಣಿ ಅವರು ನಿಜವಾದ ಭಾರತದ ಮಣ್ಣಿನ ಮಗನಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮಾಜಿ ಉಪ ಪ್ರಧಾನಿ ಎಲ್ ಕೆ ಅಡ್ವಾಣಿಯವರಿಗೆ ಭಾರತ ರತ್ನ ಗೌರವ ಸಂದಿರುವ ಕುರಿತು  ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಅಡ್ವಾಣಿಯವರು  ದೇಶ ವಿಭಜನೆಯ ಸಂದರ್ಭದಲ್ಲಿ ಭಾರತಕ್ಕೆ ಬಂದು ನೆಲೆಸಿದರು. ಅವರಿಗೆ ಭಾರತ ರತ್ನ ಗೌರವ ನೀಡಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಅಡ್ವಾಣಿಯವರು ತಮ್ಮ ಸಾರ್ವಜನಿಕ ಜೀವನವನ್ನು ಜನಸಂಘದಿಂದ ಆರಂಭಿಸಿ, ಶ್ಯಾಮಪ್ರಸಾದ ಮುಖರ್ಜಿ ಅವರ ಜೊತೆಗೆ ಕಾಶ್ಮೀರ ಹೋರಾಟದಲ್ಲಿ ಪಾಲ್ಗೊಂಡು ತಮ್ಮ ದೇಶಪ್ರೇಮವನ್ನು ಮೆರೆದರು.

ಡ್ರೋನ್ ಪ್ರತಾಪ್ ಮೇಲೆ ಮತ್ತೊಂದು ಕೇಸ್: ಮಾಜಿ ಸಿಎಂ ಹೆಸರೇಳಿಕೊಂಡು ಜಿಪಂ ಟಿಕೆಟ್ ಕೊಡಿಸುವುದಾಗಿ ವಂಚನೆ

ರಾಮಜನ್ಮಭೂಮಿ ಹೋರಾಟದಲ್ಲಿ ಅಡ್ವಾಣಿಯವರು ಅತ್ಯಂತ ಪ್ರಮುಖ ಪಾತ್ರವಹಿಸಿ, ದೇಶವನ್ನು ಭಾವನಾತ್ಮಕವಾಗಿ ಒಗ್ಗೂಡಿಸಿದರು. ಅವರ ಹೋರಾಟದ ಫಲವಾಗಿ ಕೋಟ್ಯಂತರ ಭಾರತೀಯರ ಕನಸಾಗಿದ್ದ ರಾಮಂದಿರ ಇಂದು ನನಸಾಗಿದೆ.ಅಡ್ವಾಣಿಯವರು ಕೇಂದ್ರ ಗೃಹ ಸಚಿವರಾಗಿ ಭಾರತದ ಆಂತರಿಕ ಭದ್ರತೆಯನ್ನು ಬಲಗೊಳಿಸಿ ಭಾರತವನ್ನು ಬಲಿಷ್ಠ ರಾಷ್ಟ್ರವನ್ನಾಗಿ ಮಾಡಿದರು. ಭಾರತದ ಉಕ್ಕಿನ ಮನುಷ್ಯ ಎಂದು ಕರೆಯಲ್ಪಡುವ ಅವರು ದೇಶದ ಅಭಿವೃದ್ಧಿಯಲ್ಲೂ ಮಹತ್ವದ ಪಾತ್ರ ವಹಿಸಿದ್ದಾರೆ ಎಂದರು.
ಅಡ್ವಾಣಿಯವರು ನಮ್ಮ ತಂದೆಗೆ ಅತ್ಯಂತ ಆತ್ಮೀಯರಾಗಿದ್ದರು. ಅಲ್ಲದೇ  ಬೆಂಗಳೂರಿಗೆ ಬಂದಾಗ ನಮ್ಮ ಮನೆಗೆ ಬರುತ್ತಿದ್ದರು. ಅಂತಹ ಮಹಾನ್ ವ್ಯಕ್ತಿಗೆ ಭಾರತ ರತ್ನ ಗೌರವ ಸಂದಿರುವುದು ಹೆಮ್ಮೆಯಾಗಿದೆ. ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಅಡ್ವಾಣಿ ಅವರಿಗೆ ಭಾರತ ರತ್ನ ವಿಚಾರದ ಕುರಿತು ವಿಜಯಪುರದಲ್ಲಿ ಮಾತನಾಡಿದ ರಂಭಾಪುರ ಶ್ರೀಗಳು, ದೇಶದ ಹಿರಿಯ ನಾಯಕನಿಗೆ ಭಾರತ ನೀಡಲಾಗಿದೆ. ಭಾರತೀಯ ಜನತಾ ಪಕ್ಷ ಕಟ್ಟುವಲ್ಲಿ ಅಡ್ವಾಣಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅಟಲ್ ಬಿಹಾರಿ ವಾಜಪೇಯಿ ಹಾಗೂ ಅಡ್ವಾಣಿ ಇಬ್ಬರು ಹೋರಾಟ ಮಾಡಿದರು. ಬಿಜೆಪಿ ಬಹಳಷ್ಟು ಸಂಕಷ್ಟದ ಸಮಯದಲ್ಲಿದ್ದಾಗ ಅದನ್ನ ಕಟ್ಟಿ ಬೆಳೆಸಿದ್ದಾರೆ. ವಾಜಪೇಯಿ ಹಾಗೂ ಅಡ್ವಾಣಿ ಜೋಡೆತ್ತುಗಳಾಗಿ ಭಾರತೀಯ ಸಂಸ್ಕೃತಿ ಉಳಿಸಿಲು ಹೋರಾಡಿದ್ದಾರೆ. ಅವರಿಗೆ ಪ್ರಶಸ್ತಿ ನೀಡಿರುವುದು ಸಂತಸ ತಂದಿದೆ ಎಂದು ಹೇಳಿದರು.

ಗಾಯಾಳು ಅಭಿಮಾನಿಗಳಿಗೆ ಗೊತ್ತಾಗದಂತೆ ತಲಾ 1 ಲಕ್ಷ ರೂ. ನೆರವು ನೀಡಿದ ರಾಕಿಂಗ್ ಸ್ಟಾರ್ ಯಶ್!

ಸಿದ್ದಗಂಗಾ ಮಠದ ಡಾ. ಶಿವಕುಮಾರ ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕು ಎಂದು ಈ ಹಿಂದಿನ ಸರಕಾರ ಆಗ್ರಹ ಮಾಡಿತ್ತು. ಆದರೆ, ತಾಂತ್ರಿಕ ಕಾರಣದಿಂದ ಅದು ಸಾಧ್ಯವಾಗಿಲ್ಲ. ಮುಂದಿನ ದಿನಗಳಲ್ಲಿ ನೀಡುವ ಆಶಾಭಾವ ಇದೆ. ಆಧ್ಯಾತ್ಮಿಕ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಸಿದ್ದಗಂಗಾ ಶ್ರೀಗಳ ಕ್ರಾಂತಿ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಅವರಿಗೆ ಭಾರತ ರತ್ನ ನೀಡಬೇಕು ಎಂದು ರಂಭಾಪುರ ಶ್ರೀಗಳು ಆಗ್ರಹಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಲೀಚೆಟ್ ಸಂಸ್ಕರಣಾ ಘಟಕ:ಬೆಂಗಳೂರಲ್ಲಿ ಜಟಿಲವಾಗಿರುವ ಕಸದ ಸಮಸ್ಯೆಗೆ ಕೊನೆಗೂ ಮುಕ್ತಿ !
ಇಂಡಿಗೋ ವಿಮಾನ ರದ್ದು, ಬೆಂಗ್ಳೂರು ಏರ್‌ಪೋರ್ಟ್‌ನಲ್ಲಿ ನೂಕು ನುಗ್ಗಲು, ಟಿಕೆಟ್ ಬೆಲೆ 15ರಿಂದ 80,000ಕ್ಕೆ ಏರಿಕೆ