
ಬೆಂಗಳೂರು(ಜು.02): ಅತ್ಯಾಚಾರ ಪ್ರಕರಣಗಳಲ್ಲಿ ಬಂಧಿತನಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಆರೋಪಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ತಾಯಿ ಭವಾನಿ ಸೋಮವಾರ ಭೇಟಿಯಾಗಿ ಕೆಲ ಕಾಲ ಮಾತನಾಡಿದರು.
ಮಗ ಜೈಲು ಸೇರಿದ ಬಳಿಕ ಇದೇ ಮೊದಲ ಬಾರಿಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಬಂದಿದ್ದ ಭವಾನಿ ರೇವಣ್ಣ, ಕೆಲ ಸಮಯ ಮಗನೊಂದಿಗೆ ಮಾತನಾಡಿದರು. ತಾಯಿಯನ್ನು ಕಂಡು ಪ್ರಜ್ವಲ್ ರೇವಣ್ಣ ಭಾವುಕರಾಗಿದ್ದರು. ಈ ವೇಳೆ ಭವಾನಿ ರೇವಣ್ಣ ಅವರು ಮಗನನ್ನು ಸಂತೈಸಿದರು. ಬಳಿಕ ಆರೋಗ್ಯದ ಬಗ್ಗೆ ವಿಚಾರಿಸಿದರು ಎಂದು ತಿಳಿದು ಬಂದಿದೆ.
ಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ಬಳಿ ಒಂದಲ್ಲ, ಎರಡಲ್ಲ ಬರೋಬ್ಬರಿ ಎಷ್ಟು ಸಿಮ್‌ಕಾರ್ಡ್ ಇತ್ತು ಗೊತ್ತಾ?
ಕಾರಿನಲ್ಲಿ ಬಂದಿದ್ದ ಭವಾನಿ ರೇವಣ್ಣ ಅವರು ಮಾಧ್ಯಮಗಳನ್ನು ಕಂಡು ಮುಖ ಮುಚ್ಚಿಕೊಂಡರು. ಬಳಿಕ ಕಾರಿನಿಂದ ಇಳಿದು ಸ್ಟಿಕ್ (ಊರುಗೋಲು) ಸಹಾಯದಿಂದ ನಡೆದುಕೊಂಡು ಜೈಲಿನತ್ತ ತೆರಳಿದರು. ಮಗನ ಭೇಟಿ ಬಳಿಕವೂ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೆ ಹೊರಟರು.
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮೂರು ಅತ್ಯಾಚಾರ ಮತ್ತು ಬಲವಂತವಾಗಿ ಸಂತ್ರಸ್ತೆಯರ ಅಶ್ಲೀಲ ವಿಡಿಯೊ ಸೆರೆ ಹಿಡಿದ ಆರೋಪ ಸೇರಿ ನಾಲ್ಕು ಪ್ರಕರಣಗಳು ದಾಖಲಾಗಿವೆ. ಈ ಪ್ರಕರಣಗಳ ತನಿಖೆಗೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ ರಚಿಸಿದ್ದು, ಅಧಿಕಾರಿಗಳು ಪ್ರಜ್ವಲ್‌ನನ್ನು ಬಂಧಿಸಿ ವಿಚಾರಣೆ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ