ಬೀದರ್: ನೈಜ ಫಲಾನುಭವಿಗಳನ್ನ ಕೈಬಿಟ್ಟು, ಹಣ ಕೊಟ್ಟವರಿಗೆ ಮನೆ? ಪಂಚಾಯ್ತಿ ಅಧಿಕಾರಿಗಳ ವಿರುದ್ಧ ತಿರುಗಿಬಿದ್ದ ಮಲ್ಕಾಪುರ ಗ್ರಾಮಸ್ಥರು

Published : Jan 28, 2026, 06:44 PM IST
Bidar Malkapur villagers protest against officials over housing scam

ಸಾರಾಂಶ

ಬೀದರ್ ತಾಲೂಕಿನ ಮಲ್ಕಾಪುರ ಗ್ರಾಮ ಸಭೆಯಲ್ಲಿ ಆಶ್ರಯ ಯೋಜನೆಯ ನಿವೇಶನ ಹಂಚಿಕೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಅರ್ಹರನ್ನು ಕೈಬಿಟ್ಟು ಅನರ್ಹರಿಗೆ ನಿವೇಶನ ನೀಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರಿಂದ ಸಭೆಯು ರಣರಂಗವಾಯ್ತು.

ಬೀದರ್ (ಜ.28): ಬೀದರ್ ತಾಲೂಕಿನ ಮಲ್ಕಾಪುರ ಗ್ರಾಮದಲ್ಲಿ ಇಂದು ನಡೆದ ಗ್ರಾಮ ಸಭೆಯು ಅಕ್ಷರಶಃ ರಣರಂಗವಾಗಿ ಮಾರ್ಪಟ್ಟಿತ್ತು. ಆಶ್ರಯ ಯೋಜನೆಯಡಿ ನಿವೇಶನ ಹಂಚಿಕೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ತಿರುಗಿಬಿದ್ದ ಘಟನೆ ನಡೆದಿದೆ.

ಹಣಬಲಕ್ಕೆ ಮಣಿದರೇ ಅಧಿಕಾರಿಗಳು? ಭ್ರಷ್ಟಾಚಾರದ ಗಂಭೀರ ಆರೋಪ

ಬಡವರಿಗಾಗಿ ಮೀಸಲಿಟ್ಟ ಸುಮಾರು 2.5 ಎಕರೆ ಜಾಗದಲ್ಲಿ ನಿವೇಶನ ಹಂಚಿಕೆ ಮಾಡಲು ಇಂದು ಇಒ (EO) ನೇತೃತ್ವದಲ್ಲಿ ಸಭೆ ಕರೆಯಲಾಗಿತ್ತು. ಆದರೆ, ಅರ್ಹ ಫಲಾನುಭವಿಗಳನ್ನು ಕೈಬಿಟ್ಟು, ಹಣಬಲ ಇರುವವರಿಗೆ ಮತ್ತು ಅನರ್ಹರಿಗೆ ನಿವೇಶನ ನೀಡಲಾಗುತ್ತಿದೆ ಎಂಬ ಸುದ್ದಿ ತಿಳಿಯುತ್ತಿದ್ದಂತೆ ಗ್ರಾಮಸ್ಥರ ಆಕ್ರೋಶ ಕಟ್ಟೆಯೊಡೆಯಿತು. 'ಹಣ ಪಡೆದು ಮನೆ ಆಯ್ಕೆ ಪ್ರಕ್ರಿಯೆಯಲ್ಲಿ ಮೋಸ ಮಾಡಲಾಗುತ್ತಿದೆ' ಎಂದು ಸಾರ್ವಜನಿಕರು ನೇರವಾಗಿಯೇ ಅಧಿಕಾರಿಗಳನ್ನು ಪ್ರಶ್ನಿಸಿದರು.

ಪಂಚಾಯತ್ ಅಧಿಕಾರಿಗಳು, ಗ್ರಾಮಸ್ಥರ ನಡುವೆ ಮಾತಿನ ಚಕಮಕಿ

ಸಭೆಯ ಆರಂಭದಲ್ಲೇ ಆಯ್ಕೆ ಪಟ್ಟಿಯ ವಿಚಾರವಾಗಿ ಮಾತಿಗೆ ಮಾತು ಬೆಳೆದು, ಅಧಿಕಾರಿಗಳು ಹಾಗೂ ಗ್ರಾಮಸ್ಥರ ನಡುವೆ ತೀವ್ರ ಸ್ವರೂಪದ ಗಲಾಟೆ ನಡೆಯಿತು. ನೈಜ ಫಲಾನುಭವಿಗಳಿಗೆ ಅನ್ಯಾಯವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಜನರು, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಪರಿಸ್ಥಿತಿ ನಿಯಂತ್ರಿಸಲು ಪೊಲೀಸರ ಹರಸಾಹಸ

ಗಲಾಟೆ ವಿಕೋಪಕ್ಕೆ ಹೋಗುತ್ತಿದ್ದಂತೆ ಸ್ಥಳಕ್ಕೆ ಬೀದರ್ ಗ್ರಾಮೀಣ ಪೊಲೀಸರು ಧಾವಿಸಿದರು. ರೊಚ್ಚಿಗೆದ್ದಿದ್ದ ಗ್ರಾಮಸ್ಥರನ್ನು ಸಮಾಧಾನಪಡಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು. ಸಾಕಷ್ಟು ಸಮಯದ ನಂತರ ಪೊಲೀಸರ ಮಧ್ಯಪ್ರವೇಶದಿಂದ ಪರಿಸ್ಥಿತಿ ತಿಳಿಗೊಂಡಿತು. ಸದ್ಯ ಮಲ್ಕಾಪುರದಲ್ಲಿ ಬಿಗುವಿನ ವಾತಾವರಣವಿದ್ದು, ನಿವೇಶನ ಹಂಚಿಕೆ ಪ್ರಕ್ರಿಯೆ ಬಗ್ಗೆ ಗ್ರಾಮಸ್ಥರಲ್ಲಿ ಅಸಮಾಧಾನ ಮುಂದುವರಿದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿದ್ದರಾಮಯ್ಯ ಮುಡಾ ಹಗರಣ ಬಿ-ರಿಪೋರ್ಟ್ ವಿರುದ್ಧ, ಹೈಕೋರ್ಟ್ ಮೆಟ್ಟಿಲೇರುತ್ತೇನೆ: ಸ್ನೇಹಮಯಿ ಕೃಷ್ಣ
ಬೃಹತ್ ಅಕ್ರಮ ಡ್ರಗ್ ತಯಾರಿಕೆ ಶಂಕೆ, ಮೈಸೂರಲ್ಲಿ ಕೆಮಿಕಲ್ಸ್ ಫ್ಯಾಕ್ಟರಿಗೆ ದೆಹಲಿ ಪೊಲೀಸರು ದಾಳಿ!