
ಬೀದರ್: ಟ್ರ್ಯಾಕ್ಟರ್ ಪಲ್ಟಿಯಾಗಿ 13 ವರ್ಷದ ಪುಟ್ಟ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಆಘಾತಕಾರಿ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಮದಕಟ್ಟಿ ಕ್ರಾಸ್ ಬಳಿ ನಡೆದಿದೆ. ಬಾಜೋಳಗಾ ನಿವಾಸಿ 13 ವರ್ಷದ ಶೋಹಮ್ ಮೃತ ಬಾಲಕ. ಡಿಸೇಲ್ ತುಂಬಿಸಲು ಬಾಜೋಳಗಾ ಕ್ರಾಸ್‌ನಿಂದ ಹೊರಟಿದ್ದ ಟ್ರ್ಯಾಕ್ಟರ್ ಮದಕಟ್ಟಿ ಕ್ರಾಸ್ ಬಳಿ ಬರುತ್ತಿದ್ದಂತೆ ಪಲ್ಟಿಯಾಗಿದ್ದು, ಟ್ರ್ಯಾಕ್ಟರ್ ಮೇಲೆ ಕುಳಿತಿದ್ದ ಶೋಹಮ್ ಕೆಳಗೆ ಬಿದ್ದು ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಖಟಕ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಕಲಬುರಗಿ: ಚಲಿಸುತ್ತಿರುವ ರಥಕ್ಕೆ ಕೈ ಮುಗಿಯಲು ಹೋಗಿ ಎರಡೂ ಕಾಲು ಕಳೆದುಕೊಂಡ ಮಹಿಳೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ