ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮಾಲೀಕತ್ವದ ಸಕ್ಕರೆ ಕಾರ್ಖಾನೆ ಮೇಲೆ ಅಪರಾಧ ತನಿಖಾ ದಳ (ಸಿಐಡಿ) ಅಧಿಕಾರಿಗಳಿಂದ ದಾಳಿ ಮಾಡಲಾಗಿದೆ.
ಬೆಳಗಾವಿ (ಫೆ.06): ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮಾಲೀಕತ್ವದ ಸಕ್ಕರೆ ಕಾರ್ಖಾನೆ ಮೇಲೆ ಅಪರಾಧ ತನಿಖಾ ದಳ (ಸಿಐಡಿ) ಅಧಿಕಾರಿಗಳಿಂದ ದಾಳಿ ಮಾಡಲಾಗಿದೆ.
ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಹಿಹಿರೇನಂದಿ ಗ್ರಾಮದ ಬಳಿ ಇರುವ ರಮೇಶ ಜಾರಕಿಹೊಳಿ ಮಾಲೀಕತ್ವದ ಸೌಭಾಗ್ಯಲಕ್ಷ್ಮಿ ಸಕ್ಕರೆ ಕಾರ್ಖಾನೆ (Soubhagylaxmi sugar pvt.ltd) ಮೇಲೆ ಸಿಐಡಿ ಅಧಿಕಾರಿಗಳ ತಂಡವು ದಾಳಿ ಮಾಡಿ ದಾಖಲೆ ಪರಿಶೀಲನೆ ಮಾಡಲಾಗುತ್ತಿದೆ. ಈ ಕಾರ್ಖಾನೆಯನ್ನು ಸ್ಥಾಪಿಸಲು 439 ಕೋಟಿ ರೂಪಾಯಿಯನ್ನು ಅಪೆಕ್ಸ್ ಬ್ಯಾಂಕ್ ನಲ್ಲಿ ಸಾಲ ಪಡೆಯಲಾಗಿದೆ. ಆದರೆ, ಸಾಲ ಮರುಪಾವತಿ ಮಾಡದ ಹಿನ್ನೆಲೆಯಲ್ಲಿ ಜನವರಿ 5ರಂದು ದೂರು ದಾಖಲಿಸಲಾಗಿತ್ತು. ಅಪೆಕ್ಸ್ ಬ್ಯಾಂಕ್ ಮ್ಯಾನೇಜರ್ ರಾಜಣ್ಣ ಮುತ್ತಶೆಟ್ಟಿ ಅವರು ನೀಡಿದ ದೂರಿನ ಆಧಾರದಲ್ಲಿ ಸೆಕ್ಷನ್ 406,420 ಅನ್ವಯ ದೂರು ದಾಖಲು ಮಾಡಿಕೊಳ್ಳಲಾಗಿತ್ತು.
ಬಡ ಜನರಿಗೆ ಕೇಂದ್ರದ ಬಂಪರ್ ಕೊಡುಗೆ: ಭಾರತ್ ಬ್ರಾಂಡ್ ಅಕ್ಕಿ ಕೆಜಿಗೆ 29ರೂ. ತೊಗರಿಬೇಳೆ 60ರೂ.ಗೆ ಮಾರಾಟ!
ಸ್ಥಳೀಯ ಪೊಲೀಸರು ತನಿಖೆ ಮಾಡಿದರೆ ಪ್ರಭಾವ ಬೀರಬಹುದು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರವು ಈ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿತ್ತು. ಸಿಐಡಿ ಅಧಿಕಾರಿಗಳ ತಂಡವು ಮಂಗಳವಾರ ಕಾರ್ಖಾನೆ ಮೇಲೆ ದಾಳಿ ದಾಖಲೆ ಪರಿಶೀಲನೆ ಮಾಡುಯತ್ತಿದೆ. ನಾಲ್ಕಕ್ಕೂ ಹೆಚ್ಚು ಅಧಿಕಾರಿಗಳಿಂದ ದಾಖಲೆ ಪರಿಶೀಲನೆ ಕಾರ್ಯ ಮಾಡಲಾಗುತ್ತಿದೆ. ಸದ್ಯ ರಮೇಶ ಜಾರಕಿಹೊಳಿ ಅವರ ಪುತ್ರ ಸಂತೋಷ ಜಾರಕಿಹೊಳಿ ಮಾಲೀಕತ್ವದಲ್ಲಿ ಕರ್ಖಾನೆಯನ್ನು ನಡೆಸಲಾಗುತ್ತಿದೆ, ಸದ್ಯಕ್ಕೆ ಸಂತೋಷ ಜಾರಕಿಹೊಳಿ ಅವರೇ ಕಾರ್ಖಾನೆ ನೋಡಿಕೊಳ್ಳುತ್ತಿದ್ದು, ಸಿಐಡಿ ಅಧಿಕಾರಿಗಳಿಗೆ ದಾಖಲೆಗಳನ್ನು ಪೂರೈಸುತ್ತಿದ್ದಾರೆ.