'ಮುಂದಿನ ಮೂರು ತಿಂಗಳಲ್ಲಿ ಆರೋಗ್ಯ ಕ್ಷೇತ್ರದಲ್ಲಿ ದೊಡ್ಡ ಬದಲಾವಣೆ'

Published : May 22, 2021, 05:46 PM IST
'ಮುಂದಿನ ಮೂರು ತಿಂಗಳಲ್ಲಿ ಆರೋಗ್ಯ ಕ್ಷೇತ್ರದಲ್ಲಿ ದೊಡ್ಡ ಬದಲಾವಣೆ'

ಸಾರಾಂಶ

* ಮುಂದಿನ ಮೂರು ತಿಂಗಳಲ್ಲಿ ಆರೋಗ್ಯ ಕ್ಷೇತ್ರದಲ್ಲಿ ದೊಡ್ಡ ಬದಲಾವಣೆಯಾಗಲಿದೆ ಎಂದ ಡಿಸಿಎಂ *ಹಾಸನದಲ್ಲಿ ಇಂದು (ಶನವಾರ) ಸುದ್ದಿಗಾರರೊಂದಿಗೆ ಮಾತನಾಡಿ ಹೇಳಿದ ಅಶ್ವತ್ಥ್ ನಾರಾಯಣ *ಮೂರು ತಿಂಗಳಲ್ಲಿ ಎಲ್ಲಾ ಅವಶ್ಯಕತೆಯನ್ನು ಪೂರೈಸುತ್ತೇವೆ ಎಂದು ಭರವಸೆ 

ಹಾಸನ, (ಮೇ.22): ಮೂರನೇ ಅಲೆಗೆ ರಾಜ್ಯದಲ್ಲಿ ಎಲ್ಲಾ ವ್ಯವಸ್ಥೆ ಮಾಡುತ್ತೇವೆ. ಮುಂದಿನ ಮೂರು ತಿಂಗಳಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಬಹಳ ದೊಡ್ಡ ಬದಲಾವಣೆ ಮಾಡುತ್ತೇವೆ ಎಂದು ಡಿಸಿಎಂ ಅಶ್ವಥ್​ ನಾರಾಯಣ್ ಹೇಳಿದ್ದಾರೆ. 

ಹಾಸನದಲ್ಲಿ ಇಂದು (ಶನವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಜಿಲ್ಲಾ ಆಸ್ಪತ್ರೆಗಳಲ್ಲಿ ಎಲ್ಲಾ ವ್ಯವಸ್ಥೆ ಮಾಡುತ್ತೇವೆ. ಮುಂದಿನ ಮೂರು ತಿಂಗಳಲ್ಲಿ ಎಲ್ಲಾ ಅವಶ್ಯಕತೆಯನ್ನು ಪೂರೈಸುತ್ತೇವೆ ಎಂದು ಭರವಸೆ ನೀಡಿದರು.

ಕರ್ನಾಟಕದಲ್ಲಿ ಮೊದಲ ವೈಟ್ ಫಂಗಸ್ ಪತ್ತೆ..!

 ಇನ್ನು ಮಕ್ಕಳಿಗೆ ಬರುತ್ತದೆಂಬ ಮಾಹಿತಿ ಇದೆ ಎಂದು ಹೇಳಲಾಗಿದೆಯೋ, ಆ ನಿಟ್ಟಿನಲ್ಲಿಯೂ ಕೂಡ ಪ್ರಯತ್ನ ಮಾಡಲಾಗುವುದು. ಸಿಎಂ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಉತ್ತಮ ನಿರ್ಹವಣೆ ಮಾಡಲಾಗುತ್ತಿದೆ ಎಂದು ತಮ್ಮ ಸರ್ಕಾರದ ಕಾರ್ಯ ವೈಖರಿ ಬಗ್ಗೆ ಸಮರ್ಥನೆ ಮಾಡಿಕೊಂಡರು. 

ಸದ್ಯ ಮೂರನೇ ಅಲೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತೇವೆ. ವೆಂಟಿಲೇಟರ್, ಇಂಜೆಕ್ಷನ್, ಆಕ್ಸಿಜನ್ ಸೇರಿ ಎಲ್ಲಾ ವ್ಯವಸ್ಥೆ ಒದಗಿಸುತ್ತೇವೆ. ಈ ವರ್ಷದ ಒಳಗೆ ಒಂದು ಡೋಸ್ ಕೊಡುವ ವ್ಯವಸ್ಥೆ ಮಾಡುತ್ತೇವೆ. ಮುಂದಿನ ದಿನಗಳಲ್ಲಿ 18 ರೊಳಗಿನ ಮಕ್ಕಳಿಗೂ ಲಸಿಕೆ ಬಗ್ಗೆ ಅವಶ್ಯಕತೆ ಇದೆಯೋ ಎಂಬುದನ್ನು ನೋಡಲಾಗುವುದು. ಮುಂದಿನ ಮೂರು ತಿಂಗಳಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಬಹಳ ದೊಡ್ಡ ಬದಲಾವಣೆ ಮಾಡುತ್ತೇವೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಚಿನ್ನಸ್ವಾಮಿಗೆ ಅಂತಾರಾಷ್ಟ್ರೀಯ ಮತ್ತು IPL ಪಂದ್ಯಗಳು ವಾಪಸ್; ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ
ನಾನು ಕೃಷ್ಣತತ್ತ್ವ ನಂಬಿದವನೇ ಹೊರತು, ಕಾಂಗ್ರೆಸ್‌ನ ಕಂಸ ಹಿಂಸೆಯನ್ನಲ್ಲ: ಹೆಚ್.ಡಿ.ಕುಮಾರಸ್ವಾಮಿ!