ಕಿಡ್ನಾಪ್‌ ಕೇಸ್‌ನಲ್ಲಿ ಭವಾನಿ ರೇವಣ್ಣಗೆ ಬಿಗ್ ರಿಲೀಫ್‌: ಹೈಕೋರ್ಟ್‌ ಜಾಮೀನು ಎತ್ತಿಹಿಡಿದ ಸುಪ್ರೀಂಕೋರ್ಟ್

By Kannadaprabha News  |  First Published Oct 19, 2024, 9:25 AM IST

ಕೆ.ಆರ್‌.ನಗರದ ಲೈಂಗಿಕ ಕಿರುಕುಳ ಸಂತ್ರಸ್ತೆಯೊಬ್ಬರ ಅಪಹರಣ ಕೇಸ್‌ನಲ್ಲಿ ಮಾಜಿ ಸಚಿವ ಎಚ್‌.ಡಿ.ರೇವಣ್ಣನವರ ಪತ್ನಿ ಭವಾನಿಗೆ ನೀಡಲಾಗಿದ್ದ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ.


ನವದೆಹಲಿ (ಅ.19): ಕೆ.ಆರ್‌.ನಗರದ ಲೈಂಗಿಕ ಕಿರುಕುಳ ಸಂತ್ರಸ್ತೆಯೊಬ್ಬರ ಅಪಹರಣ ಕೇಸ್‌ನಲ್ಲಿ ಮಾಜಿ ಸಚಿವ ಎಚ್‌.ಡಿ.ರೇವಣ್ಣನವರ ಪತ್ನಿ ಭವಾನಿಗೆ ನೀಡಲಾಗಿದ್ದ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಈ ಮೂಲಕ, ಭವಾನಿ ರೇವಣ್ಣನವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದ ಕರ್ನಾಟಕ ಹೈಕೋರ್ಟ್‌ನ ನಿರ್ಧಾರವನ್ನು ಎತ್ತಿ ಹಿಡಿದಿದೆ. 

ಭವಾನಿಯವರು ರಾಜಕೀಯ ಕುಟುಂಬದಿಂದ ಬಂದವರೆಂಬ ಕಾರಣಕ್ಕೆ ಅವರಿಗೆ ಜಾಮೀನು ನಿರಾಕರಿ ಸುವಂತಿಲ್ಲ ಎಂದು ನ್ಯಾಯಪೀಠ ಹೇಳಿದೆ. ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಮಾಜಿ ಸಚಿವ ಎಚ್. ಡಿ.ರೇವಣ್ಣನವರಿಂದ ಲೈಂಗಿಕ ಕಿರುಕುಳಕ್ಕೆ ಒಳಗಾಗಿರುವುದಾಗಿ ಕೆಲವು ತಿಂಗಳುಗಳ ಹಿಂದೆ ಕೆಆರ್‌.ನಗರದ ಮಹಿಳೆಯೊಬ್ಬರು ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ರೇವಣ್ಣ ವಿರುದ್ಧ ದಾಖಲಾಗಿದ್ದು, ತನಿಖೆಗೆ ರಾಜ್ಯ ಕೇಸ್ ಎಸ್‌ಐಟಿ ಸರ್ಕಾರ ಆದೇಶಿಸಿತ್ತು. 

Latest Videos

5, 8, 9ನೇ ಕ್ಲಾಸ್‌ಗೆ ಬೋರ್ಡ್ ಪರೀಕ್ಷೆ ಇಲ್ಲ: ಸಚಿವ ಮಧು ಬಂಗಾರಪ್ಪ

ತನಿಖೆ ಶುರುವಾದಾಗ ಆ ಸಂತ್ರಸ್ತ ಮಹಿಳೆಯನ್ನು ಅಪಹರಿಸಿ ಗ್ರಾಮವೊಂದರ ಫಾರ್ಮ್ ಹೌಸ್ನಲ್ಲಿ ಕೂಡಿ ಹಾಕಲಾಗಿತ್ತು ಎಂಬ ಆರೋಪ ಭವಾನಿ ವಿರುದ್ಧ ಕೇಳಿ ಬಂದಿತ್ತು. ಬಳಿಕ, ಎಸ್‌ಐಟಿ ಅಧಿಕಾರಿಗಳು ಆ ಮಹಿಳೆಯನ್ನು ರಕ್ಷಿಸಿದ್ದರು. ಈ ಹಿನ್ನೆಲೆಯಲ್ಲಿ ಭವಾನಿಯ ವರು ನಿರೀಕ್ಷಣಾ ಜಾಮೀನು ಕೋರಿದ್ದು, ಜೂ.18ರಂದು ಕರ್ನಾಟಕ ಹೈಕೋರ್ಟ್‌ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಇದನ್ನು ಪ್ರಶ್ನಿಸಿ ಎಎಸ್‌ಟಿ, ಸುಪ್ರೀಂಕೋರ್ಟ್ ಮೊರೆ ಹೋಗಿತ್ತು.

click me!