ಬಿಜೆಪಿ ಮುಖಂಡ ಈಶ್ವರಪ್ಪಗೆ ಬಿಗ್ ರಿಲೀಫ್

By Web DeskFirst Published Jan 20, 2019, 9:54 AM IST
Highlights

ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪಗೆ ಬಿಗ್ ರಿಲೀಫ್ ದೊರಕಿದೆ. ವಿಧಾನಸಭೆ ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ ದಾಖಲಾಗಿದ್ದ ಪ್ರಕರಣದಿಂದ  ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಆರೋಪ ಮುಕ್ತಗೊಳಿಸಿದೆ. 

ಬೆಂಗಳೂರು :  ವಿಧಾನಸಭೆ ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ ದಾಖಲಾಗಿದ್ದ ಪ್ರಕರಣದಿಂದ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಬಿಜೆಪಿ ಶಾಸಕ ಕೆ.ಎಸ್‌.ಈಶ್ವರಪ್ಪ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಆರೋಪ ಮುಕ್ತಗೊಳಿಸಿದೆ. 

ಸೂಕ್ತ ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಪ್ರಕರಣವನ್ನು ಶನಿವಾರ ನ್ಯಾಯಾಲಯವು ಖುಲಾಸೆಗೊಳಿಸಿದೆ. 2013ರ ವಿಧಾನಸಭೆ ಚುನಾವಣೆಯ ವೇಳೆ ಬಳ್ಳಾರಿ ಜಿಲ್ಲೆಯಲ್ಲಿ ಬಿಜೆಪಿಗೆ ಮತ ನೀಡುವಂತೆ ಸಿ.ಡಿ. ಮಾಡಿ ಧಾರ್ಮಿಕ ಮುಖಂಡರಿಗೆ ವಿತರಣೆ ಮಾಡಿದ್ದರು. 

ಇದು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ ಎಂದು ಚುನಾವಣಾಧಿಕಾರಿಗಳು ಜಪ್ತಿ ಮಾಡಿದ್ದರು. ಪ್ರಕರಣವು ಬಳ್ಳಾರಿ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿತ್ತು. ಬಳಿಕ ಪ್ರಕರಣವು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆಯಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯವು ಸೂಕ್ತ ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ಪ್ರಕರಣವನ್ನು ಖುಲಾಸೆಗೊಳಿಸಿ ಆದೇಶಿಸಿದೆ.

click me!