ಹಾಸಿಗೆ, ದಿಂಬು ನಿರೀಕ್ಷೆಯಲ್ಲಿದ್ದ ಆರೋಪಿ ದರ್ಶನ್‌ಗೆ ಬಿಗ್‌ ಶಾಕ್

Published : Oct 29, 2025, 12:18 PM IST
Darshan jail facilities request

ಸಾರಾಂಶ

ಜೈಲಿನಲ್ಲಿ ಹಾಸಿಗೆ ಮತ್ತು ದಿಂಬು ಕೋರಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದ ನಟ ದರ್ಶನ್‌ಗೆ ನಿರಾಸೆಯಾಗಿದೆ. ಜೈಲಿನ ಕೈಪಿಡಿಯ ಪ್ರಕಾರವೇ ಸವಲತ್ತುಗಳನ್ನು ನೀಡಲಾಗುವುದು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಕಾನೂನು ಸೇವಾ ಪ್ರಾಧಿಕಾರದ ಅಧಿಕಾರಿಗಳು ಜೈಲಿಗೆ ಭೇಟಿ ನೀಡಿ ಪರಿಶೀಲನಾ ವರದಿ ಸಲ್ಲಿಸಿದ್ದಾರೆ.

ಬೆಂಗಳೂರು: ಹಾಸಿಗೆ ಮತ್ತು ದಿಂಬು ಬೇಕೆಂದು ನ್ಯಾಯಾಲಯದ ಮೊರೆ ಹೋಗಿದ್ದ ವಿಚಾರಣಾಧೀನ ಕೈದಿ ದರ್ಶನ್‌ಗೆ ಬಿಗ್ ಶಾಕ್ ಎದುರಾಗಿದೆ. ಜೈಲಿನ ಕೈಪಿಡಿ ಪ್ರಕಾರ, ಸವಲತ್ತುಗಳನ್ನು ಮಾತ್ರ ನೀಡಲಾಗುತ್ತದೆ. ತಿಂಗಳಿಗೆ ಒಂದು ಬಾರಿ ಚಾದರ್ ಮತ್ತು ಬಟ್ಟೆ ಬದಲಿಸಲು ಸೂಚನೆ ನೀಡಲಾಗಿದೆ. ಬೇರೆ ಬ್ಯಾರಿಕೇಡ್‌ಗೆ ಬೇಕಾದ್ರೆ ಜೈಲು ಅಧಿಕಾರಿಗಳು ಬದಲಿಸಬಹುದು. ಪವಿತ್ರಾ ಗೌಡ, ದರ್ಶನ್ ಸೇರಿದಂತೆ ಆರು ಆರೋಪಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಬೆಂಗಳೂರಿನ 57 ನೇ ಸಿಸಿಹೆಚ್ ನ್ಯಾಯಾಲಯದ ಮುಂದೆ ಹಾಜರಾಗಿದ್ದರು. ಪ್ರಕರಣದಿಂದ ಕೈಬಿಡುವಂತೆ ಕೋರಿದ್ದ ಎ5 ನಂದೀಶ್ ಅರ್ಜಿಯನ್ನು ನ್ಯಾಯಾಲಯ ಒದಗಿಸಲಾಗಿದೆ.

ಜೈಲಿನಲ್ಲಿ ಸಿಗುವ ವ್ಯವಸ್ಥೆಗಳನ್ನು ಕಲ್ಪಿಸಲಾಗುತ್ತಿಲ್ಲ ಎಂದು ದರ್ಶನ್ ಪರ ವಕೀಲರು ವಾದ ಮಂಡಿಸಿದ್ದರು. ಈ ಹಿನ್ನೆಲೆ ಕಾನೂನು ಸೇವಾ ಪ್ರಾಧಿಕಾರದ ಅಧಿಕಾರಿಗಳು ಜೈಲಿಗೆ ತೆರಳಿ ಪರಿಶೀಲನೆ ನಡೆಸಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದರು. ಈ ವರದಿಯನ್ನು ಆಧರಿಸಿ ನ್ಯಾಯಾಲಯ, ಕಾರಾಗೃಹದ ನಿಯಮಗಳ ಪ್ರಕಾರ ಹೆಚ್ಚುವರಿ ಸವಲತ್ತು ನೀಡಲಾಗಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದು, ಅ.31 ಕ್ಕೆ ವಿಚಾರಣೆ ನಿಗದಿಪಡಿಸಿದೆ .

ಇದನ್ನೂ ಓದಿ: ಜೈಲಿನಲ್ಲಿ ನಟ ದರ್ಶನ್‌ ಪರಿಸ್ಥಿತಿ ನೋಡೋಕಾಗ್ತಿಲ್ಲ; ಕಣ್ಣಾರೆ ಕಂಡ ನಿರ್ದೇಶಕ ಹೇಳಿದ್ದೇನು?

ಕಾರಾಗೃಹದ ಅಧಿಕಾರಿಗಳ ವಿರುದ್ಧ ಗಂಭೀರ ಆರೋಪ  ಮಾಡಿದ್ದ ವಕೀಲರು

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ ಅವರನ್ನು ಬಂಧಿಸಿಟ್ಟಿರುವ ಸೆಲ್‌ ಪಕ್ಕದಲ್ಲಿಯೇ ಪಾಕಿಸ್ತಾನದ ಉಗ್ರರ ಸೆಲ್‌ ಇದೆ. ಉಗ್ರರಿಗೆ ಕೇರಂ ಬೋರ್ಡ್‌ ಹಾಗೂ ಟಿವಿ ಸೇರಿದಂತೆ ಎಲ್ಲಾ ಐಷಾರಾಮಿ ಸೌಲಭ್ಯ ನೀಡಿದ್ದಾರೆ. ಆದರೆ, ನಟ ದರ್ಶನ್‌ಗೆ ಮಾತ್ರ ಹಾಸಿಗೆ, ಹೊದಿಕೆ ಮತ್ತು ತಲೆದಿಂಬು ನೀಡುತ್ತಿಲ್ಲ. ಹೀಗೆಂದು ನಟ ದರ್ಶನ್ ಪರ ವಕೀಲ ಎಸ್‌.ಸುನೀಲ್‌ ಕುಮಾರ್‌ ಬುಧವಾರ ನ್ಯಾಯಾಲಯದ ಮುಂದೆ ಪರಪ್ಪನ ಅಗ್ರಹಾರ ಕಾರಾಗೃಹದ ಅಧಿಕಾರಿಗಳ ವಿರುದ್ಧ ಆರೋಪ ಮಾಡಿದ್ದರು.

ಇದನ್ನೂ ಓದಿ: ಹಾಸಿಗೆ, ದಿಂಬು ಕೊಡ್ತಿಲ್ಲ, ಜಡ್ಜೇ ಜೈಲಿಗೆ ಬಂದು ನೋಡ್ಲಿ: ಪರಪ್ಪನ ಜೈಲಿನ ಅಧಿಕಾರಿಗಳ ವಿರುದ್ಧ ದರ್ಶನ್‌ ಸಮರ 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!
ರಾಯಚೂರು: ರಸ್ತೆಯಲ್ಲಿ ಹೋಗುತ್ತಿದ್ದ ಹಾವು ಹಿಡಿದು ಬೈಕ್ ಸವಾರ ಹುಚ್ಚಾಟ, ವಿಡಿಯೋ ವೈರಲ್