ಬಹುಕೋಟಿ ಬಿಟ್‌ಕಾಯಿನ್‌ ಕೇಸಲ್ಲಿ ನಲಪಾಡ್‌ಗೆ ಸಂಕಷ್ಟ: ಬಂಧನ ಭೀತಿ ಶುರು

Published : Feb 06, 2025, 05:48 AM IST
ಬಹುಕೋಟಿ ಬಿಟ್‌ಕಾಯಿನ್‌ ಕೇಸಲ್ಲಿ ನಲಪಾಡ್‌ಗೆ ಸಂಕಷ್ಟ: ಬಂಧನ ಭೀತಿ ಶುರು

ಸಾರಾಂಶ

ರಾಜ್ಯಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿದ್ದ ಬಹುಕೋಟಿ ಬಿಟ್‌ ಕಾಯಿನ್ ಹಗರಣ ಸಂಬಂಧ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಅವರಿಗೆ ಸಂಕಷ್ಟ ಎದುರಾಗಿದ್ದು, ವಿಚಾರಣೆಗೆ ಮತ್ತೆ ಎಸ್‌ಐಟಿ ನೋಟಿಸ್‌ ನೀಡಿದ ಬೆನ್ನಲ್ಲೇ ಬಂಧನ ಭೀತಿ ಶುರುವಾಗಿದೆ. 

ಬೆಂಗಳೂರು (ಫೆ.06): ರಾಜ್ಯಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿದ್ದ ಬಹುಕೋಟಿ ಬಿಟ್‌ ಕಾಯಿನ್ ಹಗರಣ ಸಂಬಂಧ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಅವರಿಗೆ ಸಂಕಷ್ಟ ಎದುರಾಗಿದ್ದು, ವಿಚಾರಣೆಗೆ ಮತ್ತೆ ಎಸ್‌ಐಟಿ ನೋಟಿಸ್‌ ನೀಡಿದ ಬೆನ್ನಲ್ಲೇ ಬಂಧನ ಭೀತಿ ಶುರುವಾಗಿದೆ. ಹಗರಣದ ಪ್ರಮುಖ ರೂವಾರಿ ಎನ್ನಲಾದ ಅಂತಾರಾಷ್ಟ್ರೀಯ ಮಟ್ಟದ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಜತೆ ನಲಪಾಡ್‌ ವ್ಯಾವಹಾರಿಕ ನಂಟು ಹೊಂದಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಆರೋಪ ಹಿನ್ನೆಲೆಯಲ್ಲಿ ನಲಪಾಡ್ ಅವರಿಗೆ ಫೆ.7 ರಂದು ವಿಚಾರಣೆಗೆ ಹಾಜರಾಗುವಂತೆ ಸೆಕ್ಷನ್ 41ರಡಿ ವಿಶೇಷ ತನಿಖಾ ತಂಡ (ಎಸ್‌ಐಟಿ) ನೋಟಿಸ್ ನೀಡಿದೆ.

ಸಾಮಾನ್ಯವಾಗಿ ಆರೋಪಿತರಿಗೆ ಈ ಸೆಕ್ಷನ್‌ ಅಡಿ ತನಿಖಾಧಿಕಾರಿ ನೋಟಿಸ್‌ ನೀಡುತ್ತಾರೆ. ಹೀಗಾಗಿ ಅದೇ ಸೆಕ್ಷನ್‌ ಅಡಿ ನಲಪಾಡ್ ಅವರಿಗೆ ಎರಡನೇ ಬಾರಿಗೆ ಎಸ್‌ಐಟಿ ವಿಚಾರಣೆಗೆ ಕರೆದಿರುವುದು ಬಂಧನ ಭೀತಿಗೆ ಕಾರಣವಾಗಿದೆ. ಕೆಲ ತಿಂಗಳ ಹಿಂದೆ ಕೂಡ ಬಿಟ್ ಕಾಯಿನ್ ಹಗರಣ ಸಂಬಂಧ ನಲಪಾಡ್ ಅವರನ್ನು ಎಸ್‌ಐಟಿ ವಿಚಾರಣೆ ನಡೆಸಿ ಹೇಳಿಕೆ ಪಡೆದಿತ್ತು. ಹ್ಯಾಕರ್ ಶ್ರೀಕಿಯಿಂದ ಕೋಟ್ಯಂತರ ರುಪಾಯಿಯನ್ನು ನಲಪಾಡ್‌ ಪಡೆದಿದ್ದಾರೆ ಎಂಬ ಆಪಾದನೆ ಸಹ ಇದೆ.

ಸಿದ್ದರಾಮಯ್ಯ ಸಿಎಂ ಆಗಿರುವುದು ಬಿಜೆಪಿಗೆ ಸಹಿಸಲು ಆಗುತ್ತಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದುಳಿದ ವರ್ಗಕ್ಕೆ ಸೇರಿದವರು ಎನ್ನುವ ಒಂದೇ ಕಾರಣಕ್ಕೆ ಬಿಜೆಪಿಯವರಿಗೆ ಸಹಿಸಲು ಆಗುತ್ತಿಲ್ಲ. ಅವರ ವಿರುದ್ಧ ಷಡ್ಯಂತ್ರ ಮಾಡುತ್ತಿದ್ದಾರೆ. ನೂರು ಇಡಿ, ನೂರು ಸಿಬಿಐ ಬರಲಿ, ಕಾಂಗ್ರೆಸ್ ವೈಟ್ ಟೀ ಶರ್ಟ್ ಆರ್ಮಿ ಎಂದಿಗೂ ಹೆದರುವುದಿಲ್ಲ ಎಂದು ಯುವ ಕಾಂಗ್ರೆಸ್‌ ರಾಜ್ಯಾಧ್ಯಕ್ಷ ಮಹ್ಮದ ಹ್ಯಾರಿಸ್‌ ನಲಪಾಡ್ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಈ ಹಿಂದೆ ಬಿಜೆಪಿ ಸರ್ಕಾರ ಶೇ. 40 ಭ್ರಷ್ಟಾಚಾರ ಮಾಡಿದ್ದರ ಬಗ್ಗೆ ಗುತ್ತಿಗೆದಾರರು ಪ್ರಧಾನಿ ಕಚೇರಿಗೆ ಖುದ್ದು ದೂರು ಸಲ್ಲಿಸಿದಾಗ ಇಡಿ ಎಲ್ಲಿತ್ತು? ಚೆಕ್ ಮೂಲಕ ಲಂಚ ಪಡೆದವರು ಜೈಲಿಗೆ ಹೋಗಿದ್ದು ನೆನಪಿಲ್ಲವೆ? ಬಿಜೆಪಿ ಸರ್ಕಾರ ಶೇ. 40ರಷ್ಟು ಕಮಿಷನ್ ಹಣ ಎಲ್ಲಿ ಹೋಯಿತು? ಕೋವಿಡ್ ಹಗರಣವಾಗಿದ್ದ ವೇಳೆ ಇಡಿ, ಸಿಬಿಐದವರು ಎಲ್ಲಿದ್ದರು? ಎಂದು ಪ್ರಶ್ನಿಸಿದರು.

ರಾಜಧಾನಿ ಆಡಳಿತದಿಂದ ಆಪ್‌ಗೆ ‘ಎಕ್ಸಿಟ್‌’ ಪೋಲ್‌: ಬಿಜೆಪಿಗೆ ದಿಲ್ಲಿ ಗದ್ದುಗೆ?

ಬರಿ ಕಾಂಗ್ರೆಸ್ಸಿನವರೇ ಕಾಣುತ್ತಾರೆ: ಇಡಿ, ಸಿಬಿಐಗೆ ಕಾಂಗ್ರೆಸ್ ನವರು ಮಾತ್ರ ಕಾಣುತ್ತಾರೆ. ಇದೀಗ ನಾವು ಯಾವ ಸಿಬಿಐ, ಇಡಿಗೆ ಹೆದರಲ್ಲ. ಧಮ್, ತಾಕತ್ತು ಬಗ್ಗೆ ಮಾತನಾಡುವ ಬಿಜೆಪಿಯವರು ನ್ಯಾಯಯುತವಾಗಿ ಹೋರಾಟ ಮಾಡಲಿ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣ ಬಿಜೆಪಿ ಸರ್ಕಾರದಲ್ಲಿದ್ದಾಗ ಆಗಿರುವುದು ಎಂದರು. ಸರ್ಕಾರ ನಡೆಸಲು ಅಧಿಕಾರಿಗಳು ಬಹಳ ಮುಖ್ಯ. ಅವರನ್ನು ನಿಯಂತ್ರಣದೊಂದಿಗೆ ಉತ್ತಮ ಆಡಳಿತ ನೀಡುವುದು ಸಚಿವರ ಕೆಲಸ. ನಿಯಂತ್ರಿಸದಿದ್ದರೆ ಕಷ್ಟ ಕಷ್ಟ ಎಂದ ಅವರು, ವಾಲ್ಮೀಕಿ ನಿಗಮದ ಪ್ರಕರಣವನ್ನು ಹಗರಣ ಎಂದು ಒಪ್ಪಲು ಸಾಧ್ಯವಿಲ್ಲ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೈತನಿಗೆ ಪರಿಹಾರ ನೀಡದ ಶಿವಮೊಗ್ಗ ಡಿಸಿ ಕಚೇರಿ, ಕಾರು ಜಪ್ತಿಗೆ ಕೋರ್ಟ್ ಆದೇಶ! ಏನಿದು ಪ್ರಕರಣ?
'ನಿಮಗೆ ಧಮ್ ಇದ್ರೆ..; ದ್ವೇಷ ಭಾಷಣ ಮಸೂದೆ ಜಾರಿಗೆ ಮುಂದಾಗಿರೋ ಕಾಂಗ್ರೆಸ್ ಸರ್ಕಾರಕ್ಕೆ ಸಿಟಿ ರವಿ ನೇರ ಸವಾಲು!