
ಕಲಬುರಗಿ (ನ.14): ದೇಶಾದ್ಯಂತ ಮತಗಳ್ಳತನ ನಡೆದಿದೆ ಎಂಬ ಸುಳ್ಳು ಸುದ್ದಿ ಹರಡಿಸುವ ಮೂಲಕ ಅಪಪ್ರಚಾರದ ಅಭಿಯಾನ ಕೈಗೊಂಡ ಕಾಂಗ್ರೆಸ್ ಪಕ್ಷಕ್ಕೆ ಹಾಗೂ ರಾಹುಲ್ ಗಾಂಧಿಗೆ ಬಿಹಾರ ಜನರು ತಕ್ಕ ಪಾಠ ಕಲಿಸಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಅಶೋಕ್ ಬಗಲಿ ಹೇಳಿದರು.
ಶುಕ್ರವಾರ ಬಿಹಾರ ಚುನಾವಣೆಯ ಫಲಿತಾಂಶದಲ್ಲಿ ಎನ್ ಡಿ ಎ ಮೈತ್ರಿಕೂಟಕ್ಕೆ ಐತಿಹಾಸಿಕ ಗೆಲುವು ದೊರೆತ ಹಿನ್ನಲೆಯಲ್ಲಿ ಬಿಜೆಪಿ ಪಕ್ಷದಿಂದ ನಗರದ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿ ಬಳಿಕ ಮಾತನಾಡಿದ ಅವರು, ಬಿಜೆಪಿ ಮತಗಳ್ಳತನ ಮಾಡಿದೆ ಎಂಬ ರಾಹುಲ್ ಗಾಂಧಿ ಆರೋಪಕ್ಕೆ ಬಿಹಾರಿನ ಪ್ರಜ್ಞಾವಂತ ಮತದಾರರು ತಕ್ಕ ಪಾಠ ಕಲಿಸುವ ಮೂಲಕ ಇತಿಹಾಸಕ್ಕೆ ಮುನ್ನುಡಿ ಬರೆದಿದ್ದಾರೆ ಎಂದರು.
ಇದೇ ಮೊದಲ ಬಾರಿಗೆ ಬಿಹಾರದಲ್ಲಿ ಎನ್ ಡಿ ಎ ಮೈತ್ರಿಗೆ ೨೦೦ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲುವು ದೊರೆತಿದ್ದು ಮೋದಿ ಜನಪ್ರೀಯತೆಗೆ ಸಾಕ್ಷಿಯಾಗಿದೆ. ಕಾಂಗ್ರೆಸ್ ಪಕ್ಷವೇ ದೊಡ್ಡ ಕಳ್ಳರ ಪಾರ್ಟಿಯಾಗಿದೆ. ತನ್ನ ತಪ್ಪನ್ನು ಮುಚ್ಚಿ ಹಾಕಲು ಇನ್ನೋಬ್ಬರ ಮೇಲೆ ಗೂಬೆ ಕೂರಿಸುವ ಕೆಲಸ ರಾಹುಲ್ ಗಾಂಧಿ ಮಾಡಿದ್ದರಿಂದ ಬಿಹಾರದಲ್ಲಿ ಕಾಂಗ್ರೆಸ್ ನೆಲಕಚ್ಚಿದೆ ಎಂದ ಅವರು,ಕಾಂಗ್ರೆಸ್ ಸರ್ವನಾಶಕ್ಕೆ ರಾಹುಲ್ ಗಾಂಧಿ ಒಬ್ಬರೇ ಸಾಕು ಎಂದು ಹೇಳಿದರು.
ಬಿಜೆಪಿ ನಗರಾಧ್ಯಕ್ಷ ಚಂದು ಪಾಟೀಲ್ ಮಾತನಾಡ, ಅಮರ್ನಾಥ್ ಪಾಟೀಲ್ ಇದ್ದರು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ