
ತುಮಕೂರು(ನ. 15): ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶಗಳು ರಾಜ್ಯದ ರಾಜಕೀಯ ವಲಯದಲ್ಲಿ ಚರ್ಚೆಗೆ ಗುರಿಯಾಗಿವೆ. ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಅಭೂತಪೂರ್ವ ಗೆಲುವು, ಇನ್ನೊಂದೆಡೆ ಮಹಾಘಟಬಂಧನ ಹೀನಾಯ ಸೋಲು. ಈ ವಿಚಾರವಾಗಿ ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.
ಮಧುಗಿರಿಯಲ್ಲಿ ನಡೆದ ಆರ್‌ಟಿಒ ನೂತನ ಕಟ್ಟಡ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಮಾತನಾಡಿದ ರಾಜಣ್ಣ ಅವರು, ಕಳೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಮಹಿಳೆಯರು ಕಾಂಗ್ರೆಸ್‌ಗೆ ಮತ ನೀಡದ ಕಾರಣದಿಂದ ಹೆಚ್ಚಿನ ಸ್ಥಾನಗಳನ್ನು ಕಳೆದುಕೊಂಡಿದ್ದೇವೆ. ಫ್ರೀ ತಗೊಂಡ ಮಹಿಳೆಯರು ಮತ ಹಾಕಿದ್ದರೆ ನಾವು ಹೆಚ್ಚಿನ ಸ್ಥಾನಗಳನ್ನು ಗೆಲ್ಲುತ್ತಿದ್ದೆವು. ಆದರೆ ಅವರು ಯಾರೂ ಲೋಕಸಭೆಯಲ್ಲಿ ಮತ ಹಾಕಿಲ್ಲ. 1-2 ಲಕ್ಷ ಸಂಬಳ ಪಡೆಯುವ ಹೆಣ್ಣು ಮಕ್ಕಳು ಪುಕ್ಕಟೆ ಬಸ್‌ಗಳಲ್ಲಿ ಓಡಾಡುತ್ತಾರೆ. ಆದರೆ ಮತದಾನದ ದಿನದಂದು ಕಾಂಗ್ರೆಸ್‌ಗೆ ಮತ ಹಾಕೋದಿಲ್ಲ ಬೇಸರ ವ್ಯಕ್ತಪಡಿಸಿದರು.
ಬಿಹಾರದಲ್ಲಿ ಬಿಜೆಪಿಯ ಯಶಸ್ಸಿಗೆ ಕಾರಣವಾಗಿದ್ದು, ಹಿಂದೂ-ಮುಸ್ಲಿಂ ಧ್ರುವೀಕರಣ ಬಿಟ್ಟು ಮಹಿಳೆಯರು ಮತ್ತು ಯುವಕರು ಎಂಬ ತಂತ್ರ ಮಾಡಿದ್ದಾರೆ. ಅದಕ್ಕೆ ಅವರಿಗೆ ಮತ ಬಂದಿದೆ. ಮಹಿಳೆಯರಿಗೆ 10 ಸಾವಿರ ರೂಪಾಯಿ ಮೊದಲೇ ಕೊಟ್ಟು, ಅವರ ಮನಸ್ಸು ಗೆದ್ದಿದ್ದಾರೆ. ನಾವು ಇಂತಹ ತಂತ್ರ ಅಳವಡಿಸಿಕೊಳ್ಳುವಲ್ಲಿ ಸೋತಿದ್ದೇವೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ