
ಬೆಂಗಳೂರು (ಜೂ.19) ನಗರದ ದಕ್ಷಿಣ ಸಂಚಾರ ಉಪ ವಿಭಾಗದ ಪೊಲೀಸ್ ಠಾಣೆಗಳ ವ್ಯಾಪ್ತಿಯ ಸಾರ್ವಜನಿಕ ರಸ್ತೆಗಳಲ್ಲಿ ದ್ವಿಚಕ್ರ ವಾಹನಗಳಲ್ಲಿ ಅಪಾಯಕಾರಿ ವ್ಹೀಲಿಂಗ್ ಮಾಡಿದ ಘಟನೆಗಳ ಸಂಬಂಧ 26 ಪ್ರಕರಣ ದಾಖಲಿಸಿ, 26 ಮಂದಿ ಸವಾರರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.
ದಕ್ಷಿಣ ಸಂಚಾರ ಉಪ ವಿಭಾಗದ ವ್ಯಾಪ್ತಿಯ ಚಾಮರಾಜಪೇಟೆ 5ನೇ ಕ್ರಾಸ್, ಹನುಮಂತನಗರ 7ನೇ ಕ್ರಾಸ್, ಜೆ.ಪಿ.ನಗರ ಕೆಳಸೇತುವೆ, ಇಲಿಯಾಸ್ ನಗರ, ಕೆ.ಎಸ್. ಲೇಔಟ್ ರಿಂಗ್ ರಸ್ತೆ, ಗುಬ್ಬಲಾಳ, ಅಂಜನಾಪುರ ಸೇರಿದಂತೆ ವಿವಿಧ ರಸ್ತೆಗಳಲ್ಲಿ ಯುವಕರು ದ್ವಿಚಕ್ರ ವಾಹನಗಳಲ್ಲಿ ವ್ಹೀಲಿಂಗ್ ಮಾಡುವ ಪ್ರವೃತ್ತಿ ಹೆಚ್ಚಿತ್ತು. ಈ ಹಿನ್ನೆಲೆಯಲ್ಲಿ ಮಫ್ತಿಯಲ್ಲಿ ಸಂಚಾರ ಪೊಲೀಸರು ರಸ್ತೆಗಳಿಗೆ ಬ್ಯಾರಿಕೇಡ್ ಅಳವಡಿಸಿ, ವ್ಹೀಲಿಂಗ್ ಮಾಡುವ ಪುಂಡರನ್ನು ಹಿಡಿದು ಪ್ರಕರಣ ದಾಖಲಿಸಿದ್ದಾರೆ.
Karnataka crime: ಬೈಕ್ ವ್ಹೀಲಿಂಗ್ ವೇಳೆ ಬಿದ್ದು ಇಬ್ಬರಿಗೆ ಗಾಯ
ಜತೆಗೆ ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದ ವ್ಹೀಲಿಂಗ್ ವಿಡಿಯೋಗಳು, ಸಾಮಾಜಿಕ ಜಾಲತಾಣ ಖಾತೆಗಳ ಪರಿಶೀಲನೆ ವೇಳೆ ಪತ್ತೆಯಾದ ವ್ಹೀಲಿಂಗ್ ವಾಹನಗಳು ಹಾಗೂ ಸವಾರರನ್ನು ಪತ್ತೆಹಚ್ಚಿ ಪ್ರಕರಣ ದಾಖಲಿಸಲಾಗಿದೆ.
ದಕ್ಷಿಣ ಸಂಚಾರ ಉಪವಿಭಾಗದ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಳೆದ ಆರು ತಿಂಗಳಲ್ಲಿ ವ್ಹೀಲಿಂಗ್ ಸಂಬಂಧ 26 ಪ್ರಕರಣ ದಾಖಲಿಸಲಾಗಿದೆ. ಸಿಕ್ಕಿಬಿದ್ದ 26 ಮಂದಿ ಸವಾರರ ಪೈಕಿ 21 ಮಂದಿ 18 ವರ್ಷಕ್ಕಿಂತ ಮೇಲ್ಪಟ್ಟವರು ಹಾಗೂ 5 ಮಂದಿ ಅಪ್ರಾಪ್ತರು ಇದ್ದಾರೆ. ಈ ಪ್ರಕರಣದ ಸಂಬಂಧ ವಾಹನ ಮಾಲಿಕರಿಗೆ ನೋಟಿಸ್ ನೀಡಿ, ಸವಾರರಿಂದ ಮುಚ್ಚಳಿಕೆ ಬರೆಸಿಕೊಂಡು ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.
ಬೆಂಗಳೂರಿನಲ್ಲಿ ಮಿತಿ ಮೀರುತ್ತಿದೆ ಪುಂಡರ ವ್ಹೀಲಿಂಗ್ ಹಾವಳಿ: ಕಡಿವಾಣಕ್ಕೆ ಟಾಸ್ಕ್‌ಫೋರ್ಸ್ ಟೀಂ ರಚನೆ
ವ್ಹೀಲಿಂಗ್ ಮಾಡಿದರೆ ಆರ್‌ಸಿ, ಡಿಎಲ್ ರದ್ದು
ಆರೋಪಿಗಳು ಎರಡನೇ ಬಾರಿ ವ್ಹೀಲಿಂಗ್ ಪ್ರಕರಣದಲ್ಲಿ ಭಾಗಿಯಾಗಿಯಾದರೆ ಕಠಿಣ ಕ್ರಮ ಎಚ್ಚರಿಕೆ ನೀಡಲಾಗಿದೆ. ನ್ಯಾಯಾಲಯದಲ್ಲಿ ಶಿಕ್ಷೆಯಾದ ಬಳಿಕ ಆರೋಪಿಗಳ ವಾಹನಗಳ ನೋಂದಣಿ ಪ್ರಮಾಣ ಪತ್ರ(ಆರ್‌ಸಿ) ಮತ್ತು ಚಾಲನಾ ಪರವಾನಗಿ (ಡಿಎಲ್) ರದ್ದುಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ಮುಂದಿನ ದಿನಗಳಲ್ಲಿಯೂ ವ್ಹೀಲಿಂಗ್ ಮಾಡುವವರ ವಿರುದ್ಧ ಕಾರ್ಯಾಚರಣೆ ಮುಂದುವರೆಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ