ನಾಳೆಯಿಂದ ಬೆಂಗಳೂರು- ಮೈಸೂರು ದಶಪಥದಲ್ಲಿ ಬೈಕ್‌, ಆಟೋ ನಿಷೇಧ: ನಿಯಮ ಉಲ್ಲಂಘಿಸಿದರೆ 500 ರೂ. ದಂಡ

By Sathish Kumar KH  |  First Published Jul 31, 2023, 2:51 PM IST

ಬೆಂಗಳೂರು ಮೈಸೂರು ದಶಪಥ ಹೆದ್ದಾರಿಯಲ್ಲಿ ಆ.1ರಿಂದ ಎಲ್ಲ ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ನಿಯಮ ಉಲ್ಲಂಘಿಸಿದರೆ 500 ರೂ. ದಂಡ ವಿಧಿಸಲಾಗುತ್ತದೆ.


ರಾಮನಗರ (ಜು.31): ಬೆಂಗಳೂರು- ಮೈಸೂರು ದಶಪಥ ಹೆದ್ದಾರಿಯಲ್ಲಿ ಆ.1ರಿಂದ ಎಲ್ಲ ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಒಂದು ವೇಳೆ ನಿಯಮ ಉಲ್ಲಂಘಿಸಿದರೆ 500 ರೂ. ದಂಡ ವಿಧಿಸಲಾಗುತ್ತದೆ.

ರಾಜ್ಯದ ಏಕೈಕ ಎಕ್ಸ್‌ಪ್ರೆಸ್‌ ವೇ ಆಗಿರುವ ಬೆಂಗಳೂರು ಮೈಸೂರು ದಶಪಥ ಹೆದ್ದಾರಿಯಲ್ಲಿ ನಾಳೆಯಿಂದ (ಆಗಸ್ಟ್‌ 1ರಿಂದ) ಎಲ್ಲ ಮಾದರಿಯ ದ್ವಿಚಕ್ರ ವಾಹನ (ಬೈಕ್‌ಗಳು) ಹಾಗೂ ತ್ರಿಚಕ್ರ ವಾಹನ (ಆಟೋಗಳು) ಹಾಗೂ ಟ್ರ್ಯಾಕ್ಟರ್‌ ಸೇರಿ ಕಡಿಮೆ ವೇಗ ಸಾಮಥ್ರ್ಯದ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಒಂದು ವೇಳೆ ಈ ನಿಯಮ ಉಲ್ಲಂಘಿಸಿ ಹೆದ್ದಾರಿಯಲ್ಲಿ ಸಂಚಾರ ಮಾಡಿದರೆ 500 ರೂ. ದಂಡವನ್ನು ವಿಧಿಸಲಾಗುವುದು ಎಂದು ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಎಚ್ಚರಿಕೆ ನೀಡಿದ್ದಾರೆ.

Latest Videos

undefined

ಕೇಂದ್ರದ ದುಬಾರಿ ಟೋಲ್‌ಗೆ ಬೆಚ್ಚಿಬಿದ್ದ ರಾಜ್ಯ ಸಾರಿಗೆ ಸಂಸ್ಥೆ: ಟೋಲ್‌ ಕಟ್ಟಲಾಗದೇ ವಾಪಸ್‌ ಬಂದ ಕೆಎಸ್‌ಆರ್‌ಟಿಸಿ ಬಸ್‌

ಸರ್ಕಾರದ ಅಧಿಸೂಚನೆ ನಾಳೆಯಿಂದ ಅನ್ವಯ: ಬೆಂಗಳೂರು- ಮೈಸೂರು ದಶಪಥ (Bengaluru Mysuru expressway) ಹೆದ್ದಾರಿಯಲ್ಲಿ ಅಪಘಾತಗಳ ತಡೆಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಈ ನಿರ್ಧಾರ ಕೈಗೊಂಡಿದೆ. ಬೈಕ್, ಆಟೋ, ಟ್ರ್ಯಾಕ್ಟರ್‌ಗಳು ಇನ್ನುಮುಂದೆ ಹೆದ್ದಾರಿಯಲ್ಲಿ ಸಂಚರಿಸುವಂತಿಲ್ಲ. ಏನಿದ್ದರೂ ಇಂತಹ ವಾಹನಗಳನ್ನು ಹೊಂದಿರುವವರು ಹೆದ್ದಾರಿಯ ಬದಲಿಗೆ ಸರ್ವೀಸ್ ರಸ್ತೆ ಬಳಸಿ ಸಂಚಾರ ಮಾಡಬೇಕು. ಈಗಾಗಲೇ ಜು.12 ರಂದು ಈ ಬಗ್ಗೆ ಗೆಜೆಟ್ ಅಧಿಸೂಚನೆ (Gazette Notification) ಹೊರಡಿಸಲಾಗಿದೆ.  ಈ ಹಿನ್ನೆಲೆಯಲ್ಲಿ ನಾಳೆಯಿಂದ ಹೊಸ ನಿಯಮ ಅನ್ವಯ ಆಗಲಿದೆ ಎಂದು ತಿಳಿಸಿದರು.

ಸರ್ವಿಸ್‌ ರಸ್ತೆ ಸಮಸ್ಯೆ ಪರಿಹಾರಕ್ಕೆ ಎನ್‌ಎಚ್‌ಎಐ ಅಧಿಕಾರಿಗಳೊಂದಿಗೆ ಚರ್ಚೆ: ಎಕ್ಸ್‌ಪ್ರೆಸ್‌ ವೇನಲ್ಲಿ ಇನ್ನೂ ಕೆಲವೆಡೆ ಸರ್ವೀಸ್ ರಸ್ತೆಯಲ್ಲಿ ಸಮಸ್ಯೆ ಇದೆ. ಅದನ್ನ ಶೀಘ್ರವಾಗಿ ಸರಿಪಡಿಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (National Highway Authority) ಅಧಿಕಾರಿಗಳ ಜೊತೆಗೆ ಮಾತನಾಡಲಾಗಿದೆ. ವಾಹನ ಸವಾರರು ನಿಯಮ ಪಾಲನೆ ಮಾಡುವಂತೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸೂಚನೆ ನೀಡಿದ್ದಾರೆ. ಒಂದು ವೇಳೆ ನಿಯಮ ಉಲ್ಲಂಘನೆ ಮಾಡಿ ಮೇಲೆ ಸೂಚಿಸಿದ ವಾಹನಗಳು ಹೆದ್ದಾರಿಯಲ್ಲಿ ಪ್ರವೇಶ ಮಾಡಿದಲ್ಲಿ ಪೊಲೀಸ್ ಇಲಾಖೆಯಿಂದ ದಂಡಾಸ್ತ್ರ ಪ್ರಯೋಗ ಮಾಡಲಾಗುತ್ತದೆ. ಅಂತಹ ಪ್ರಕರಣಗಳಿಗೆ 500 ರೂ. ದಂಡ ವಿಧಿಸಲಾಗುತ್ತದೆ ಎಂದು ರಾಮನಗರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ತಿಳಿಸಿದ್ದಾರೆ.

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ 10 ಕಿ.ಮೀ.ಗೆ ಒಂದು ಸ್ಪೀಡ್‌ ಡಿಟೆಕ್ಟರ್‌: ಸಿಎಂ ಸಿದ್ದರಾಮಯ್ಯ

150 ಸಿಸಿಗಿಂತ ಕಡಿಮೆ ವಾಹನ ವೃಗವಾಗಿ ಹೋಗಲು ಅಸಾಧ್ಯ: ಕ್ಸ್‌ಪ್ರೆಸ್‌ ಹೆದ್ದಾರಿಯ ಅಪಘಾತದಲ್ಲಿ ಮೃತಪಟ್ಟವರಲ್ಲಿ ಬಹುತೇಕರು ಬೈಕ್ ಸವಾರರು ಆಗಿದ್ದಾರೆ. 150 ಸಿಸಿ ಹಾಗೂ ಅದಕ್ಕಿಂತ ಕಡಿಮೆ ಇಂಜಿನ್‌ ಸಾಮರ್ಥ್ಯದ  ವಾಹನಗಳಲ್ಲಿ ಹೆಚ್ಚು ವೇಗದಲ್ಲಿ ಹೋಗಲು ಸಾಧ್ಯವಿಲ್ಲ. ಆಟೋ ರಿಕ್ಷಾದಂತಹ ವಾಹನಗಳ ವೇಗ ಇನ್ನೂ ಕಡಿಮೆ ಇರುತ್ತದೆ. ಎತ್ತಿನಗಾಡಿ, ಕುದುರೆಗಾಡಿಯಂತಹ ಮೋಟಾರ್ ರಹಿತ ವಾಹನಗಳನ್ನು ಬಿಡಲು ಸಾಧ್ಯವೇ ಇಲ್ಲವೆಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಹಿಂದೆಯೇ ಆದೇಶವನ್ನು ಹೊರಡಿಸಿದೆ. ಈ ಸಂಬಂಧ ಜುಲೈ 12ರಂದು ನೋಟಿಫಿಕೇಷನ್ ಕೂಡ ಆಗಿದೆ. ಆಗಸ್ಟ್ 1ರಿಂದ ನಿಯಮ ಜಾರಿಗೆ ಬರಲಿದೆ ಎಂದು ಸಂಚಾರ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದರು.

click me!