ಸಿಎಂ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆಗೆ ಕಪ್ಪು ಪಟ್ಟಿ ಪ್ರದರ್ಶನ ಸಿದ್ಧತೆ: ಬಿಜೆಪಿ ಕಾರ್ಯಕರ್ತರ ಬಂಧನ

By Sathish Kumar KH  |  First Published Feb 17, 2024, 3:21 PM IST

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಿಎಂ ಸಿದ್ದರಾಮಯ್ಯ ಅವರಿಗೆ ಕಪ್ಪು ಪಟ್ಟಿ ಪ್ರದರ್ಶನ ಮಾಡಲು ನಿಂತಿದ್ದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


ಮಂಗಳೂರು (ಫೆ.17): ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಪ್ಪು ಬಾವುಟ ಪ್ರದರ್ಶನಕ್ಕೆ ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಮಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆಗಮಿಸುತ್ತಿದ್ದ ಹಿನ್ನೆಲೆಯಲ್ಲಿ ಮಂಗಳೂರಿನ ಬಿಜೆಪಿ ಯುವ ಘಟಕದ ಕಾರ್ಯಕರ್ತರು ಕಪ್ಪು ಪಟ್ಟಿ ಪ್ರದರ್ಶನಕ್ಕೆ ಮುಂದಾಗಿದ್ದರು. ಈ ಹಿನ್ನೆಲೆಯಲ್ಲಿ ಮಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ನಿಂತು ಕಪ್ಪು ಪಟ್ಟಿ ಪ್ರದರ್ಶನಕ್ಕೆ ಯತ್ನಿಸಿದ್ದರು. ಆದರೆ, ಇದನ್ನು ತಡೆಯಲು ಪೊಲೀಸರು ಕೂಡ ಮುಂದಾಗಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

Tap to resize

Latest Videos

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಝೆಡ್‌ ಪ್ಲಸ್ ಸೆಕ್ಯೂರಿಟಿ ಕೊಟ್ಟ ಸರ್ಕಾರ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆದ ಬೆನ್ನಲ್ಲಿಯೇ ಬಿಜೆಪಿ ಕಾರ್ಯಕರ್ತರ ಸಂಖ್ಯೆಯೂ ಹೆಚ್ಚಳವಾಯಿತು. ಇದು ವಿಕೋಪಕ್ಕೆ ತೆರಳುವ ಮುನ್ಸೂಚನೆ ಅರಿತ ಪೊಲೀಸರು, ಪ್ರತಿಭಟನಾ ನಿರತ ಬಿಜೆಪಿ ಕಾರ್ಯಕರ್ತರ ಮನವೊಲಿಸಲು ಪ್ರಯತ್ನ ಮಾಡಿದ್ದಾರೆ. ಆದರೂ, ಪಟ್ಟು ಸಡಿಲಿಸದೇ ಬಿಜೆಪಿ ಕಾರ್ಯಕರ್ತರು ರಸ್ತೆ ಬದಿಯಲ್ಲಿ ನಿಂತುಕೊಂಡು ಕಪ್ಪು ಪಟ್ಟಿ ಪ್ರದರ್ಶಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಲು ಮುಂದಾಗಿದ್ದರು. ಈ ವೇಲೆ ಪ್ರತಿಭಟನಾಕಾರರನ್ನು ತಡೆಯಲು ಸಾಧ್ಯವಾಗದೇ ಚದುರಿಸಲು ಪೊಲೀಸರು ಹೈರಾಣಾಗಿದ್ದಾರೆ.

ಪ್ರತಿಭಟನಾ ಸ್ಥಳಕ್ಕೆ ಮಂಗಳೂರು ಕಮಿಷನರ್ ಅನುಪಮ್ ಅಗ್ರವಾಲ್ ಭೇಟಿ ನೀಡಿ ಬಿಜೆಪಿ ಕಾರ್ಯಕರ್ತರಿಗೆ ಕೂಡಲೇ ಇಲ್ಲಿಂದ ತೆರಳುವಂತೆ ಖಡಕ್ ಸೂಚನೆ ನೀಡಿದ್ದಾರೆ. ಇದಕ್ಕೂ ಬಗ್ಗದ ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆಯುವಂತೆ ಕಮಿಷನರ್ ಸೂಚನೆ ನೀಡಿದ್ದಾರೆ. ಕಮಿಷನರ್ ಮಾತಿಗೂ ಬಗ್ಗದೇ ರಸ್ತೆಯಲ್ಲೇ ಕುಳಿತ ಕಾರ್ಯಕರ್ತರನ್ನು ವಶಕ್ಕೆ ಪಡೆದು ಪೊಲೀಸ್ ವಾಹನದಲ್ಲಿ ತುಂಬಿಕೊಂಡು ಅಲ್ಲಿಂದ ಸ್ಥಳಾಂತರ ಮಾಡಿದ್ದಾರೆ.

ಕರ್ನಾಟಕ ಪೊಲೀಸರಿಗೆ 20 ವರ್ಷಗಳಿಂದ ಬೇಕಾಗಿದ್ದ ನಕ್ಸಲ್‌ನನ್ನು ಹಿಡಿದುಕೊಟ್ಟ ಕೇರಳದ ಕಾಡಾನೆ!

ಮಲ್ಲಿಕಾರ್ಜುನ ಖರ್ಗೆಗೆ ಝೆಡ್ ಪ್ಲಸ್ ಭದ್ರತೆ:  ಇನ್ನು ಅಖಿಲ ಭಾರತ ಕಾಂಗ್ರೆಸ್‌ ಸಮಿತಿ (ಎಐಸಿಸಿ) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಜೀವ ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಸರ್ಕಾರದಿಂದ ಝೆಡ್ ಪ್ಲಸ್ (Z+) ಸೆಕ್ಯೂರಿಟಿ ಕೊಡಲಾಗಿದೆ. ಆದರೆ, ಇಲ್ಲಿ ಬಿಜೆಪಿ ಕಾರ್ಯಕರ್ತರು ರಸ್ತೆ ಬದಿ ನಿಂತು ಕಪ್ಪು ಪ್ರದರ್ಶನ ಮಾಡುವ ಜೊತೆಗೆ ಧಿಕ್ಕಾರ ಕೂಗುವ ಯೋಜನೆ ರೂಪಿಸಿದ್ದರು. ಇದರಿಂದ ಅವರ ಭದ್ರತೆಗೆ ಮತ್ತೆ ಧಕ್ಕೆ ಬರಬಹುದು ಎಂಬ ದೃಷ್ಟಿಯಿಂದ ಬಿಜೆಪಿ ಕಾರ್ಯಕರ್ತರಿಗೆ ಪ್ರತಿಭಟನೆ ಮಾಡುವುದಕ್ಕೆ ಅವಕಾಶ ನೀಡಿಲ್ಲ. ಆದ್ದರಿಂದ ಎಲ್ಲ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳುತ್ತಿದ್ದಾರೆ.

click me!