3ನೇ ಬಾರಿಗೆ ಪ್ರಧಾನಿ ಮೋದಿ ಪ್ರಮಾಣ ವಚನ: ರಾಜ್ಯಾದ್ಯಂತ ಬಿಜೆಪಿ ಕಾರ್ಯಕರ್ತರ ಸಂಭ್ರಮ

By Girish GoudarFirst Published Jun 9, 2024, 7:51 PM IST
Highlights

ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾನ ವಚನ ಸ್ವೀಕರಿಸಿದ ಹಿನ್ನೆಲಯಲ್ಲಿ ರಾಜ್ಯಾದ್ಯಂತ ಸಂಭ್ರಮ ಮನೆ ಮಾಡಿದ. ಬಳ್ಳಾರಿ, ಚಿತ್ರದುರ್ಗ, ಚಿಕ್ಕೋಡಿ, ಕೊಪ್ಪಳ, ಸೇರಿದಂತೆ ರಾಜ್ಯಾದ್ಯಂತ ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಗೂ ಮೋದಿ ಅವರ ಅಭಿಮಾನಿಗಳು ಸಂಭ್ರಮಾಚರಣೆಯನ್ನ ಮಾಡಿದ್ದಾರೆ. 

ಬೆಂಗಳೂರು(ಜೂ.09): ನರೇಂದ್ರ ಮೋದಿ ಅವರು ಇಂದು(ಜೂ..09) ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಹೀಗಾಗಿ ಬಿಜೆಪಿ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ. ರಾಜ್ಯಾದ್ಯಂತ ಬಿಜೆಪಿ ಕಾರ್ಯಕರ್ತರು ಪಟಾಕಿ, ಸಿಹಿ ಹಂಚಿ ಸಂಭ್ರಮಾಚರಣೆಯನ್ನ ಮಾಡಿದ್ದಾರೆ.

ಮೂರನೇ ಬಾರಿ ಪ್ರಧಾನಿ ಆಗಿ ನರೇಂದ್ರ ಮೋದಿ ಅಧಿಕಾರ ಸ್ವೀಕಾರ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ  ಸಂಭ್ರಮ ಮನೆ ಮಾಡಿದೆ. ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದ್ದಾರೆ. ಬಿಜೆಪಿ ರಾಜ್ಯ ಯುವಮೋರ್ಚಾ ಕೋಶಾಧ್ಯಕ್ಷ ಸಿದ್ಧಾರ್ಥ ಸಿಂಗ್ ನೇತೃತ್ವದಲ್ಲಿ ಸಂಭ್ರಮಾಚರಣೆ ನಡೆದಿದೆ. 

Latest Videos

ಈಶ್ವರನ ಹೆಸರಿನಲ್ಲಿ ಮೋದಿ ಪ್ರಮಾಣವಚನ, ಮೋದಿ 3.0 ಸರ್ಕಾರದಲ್ಲಿ ಯಾರಿಗೆ ಸಚಿವ ಸ್ಥಾನ?

ರಾಮನಗರದಲ್ಲಿ ಮೈತ್ರಿ ಪಕ್ಷದ ಕಾರ್ಯಕರ್ತರಿಂದ ಸಂಭ್ರಮ

ಪ್ರಧಾನಿಯಾಗಿ ಮೂರನೇ ಬಾರಿಗೆ ಮೋದಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಜೆಡಿಎಸ್-ಬಿಜೆಪಿ ಕಾರ್ಯರ್ತರು ಕೇಕ್ ಕತ್ತರಿಸಿ ಹಾಗೂ ಸಿಹಿ ಹಂಚಿ ಶುಭ ಕೋರಿದ್ದಾರೆ. ರಾಮನಗರದ ಐಜೂರು ವೃತ್ತದಲ್ಲಿ ಮೈತ್ರಿ ಪಕ್ಷದ ಕಾರ್ಯಕರ್ತರು ಸಂಭ್ರಮಾಚರಣೆಯನ್ನ ಮಾಡಿದ್ದಾರೆ. ಮೋದಿ 3.0 ಎಂಬ ಕೇಕ್ ಕತ್ತರಿಸಿ ಕಾರ್ಯಕರ್ತರು ಪರಸ್ಪರ ಸಂಭ್ರಮಿಸಿದ್ದಾರೆ. ಮೋದಿಗೆ ಜೈಕಾರ ಕೂಗಿ ಸಂಭ್ರಮಾಚರಣೆ ಮಾಡಿದ್ದಾರೆ.

ತುಮಕೂರು ಜಿಲ್ಲಾ ಬಿಜೆಪಿ ವತಿಯಿಂದ ಸಂಭ್ರಮಾಚರಣೆ.

ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ ಹಾಗೂ ತುಮಕೂರು ಲೋಕಸಭಾ ಕ್ಷೇತ್ರದ ನೂತನ ಸಂಸದ ವಿ. ಸೋಮಣ್ಣಗೆ ಕೇಂದ್ರ ಮಂತ್ರಿ ಸ್ಥಾನ ಸಿಕ್ಕ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲಾ ಬಿಜೆಪಿ ವತಿಯಿಂದ ಸಂಭ್ರಮಾಚರಣೆ ನಡೆದಿದೆ.  

ತುಮಕೂರು ನಗರ ಶಾಸಕ ಜಿ.ಬಿ ಜ್ಯೋತಿ ಗಣೇಶ್ ನೇತೃತ್ವದಲ್ಲಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಲಾಗಿದೆ. ತುಮಕೂರು ನಗರದ ಹಲವು ಕಡೆಗಳಲ್ಲಿ ಸಾರ್ವಜನಿಕರಿಗೆ ಸಿಹಿ ಹಂಚಿ ಹಾಗೂ ಮೋದಿ ಮತ್ತೊಮ್ಮೆ ಪ್ರಧಾನಿ  3.0 ಎಂಬ ಸ್ಟೀಕರ್ ಹಂಚಿ ಸಂಭ್ರಮಾಚರಣೆ ಮಾಡಲಾಗಿದೆ.

ಚಿತ್ರದುರ್ಗದಲ್ಲಿ ಬಿಜೆಪಿ ಘಟಕದಿಂದ ವಿಶೇಷ ಪೂಜೆ

ಚಿತ್ರದುರ್ಗದಲ್ಲಿ ಜೆಸಿಆರ್ ಬಡಾವಣೆಯ ಗಣೇಶನಿಗೆ ಬಿಜೆಪಿ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಮಾಜಿ ಶಾಸಕ ಜಿ.ಜೆಚ್ ತಿಪ್ಪಾರೆಡ್ಡಿ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಲಾಗಿದೆ. ನರೇಂದ್ರ ಮೋದಿ ಅವರು ಅಧಿಕಾರ ಸ್ವೀಕಾರ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರಲ್ಲಿ ಹರ್ಷ ಮನೆ ಮಾಡಿದೆ. ವಿಶೇಷ ಪೂಜೆ ಬಳಿಕ ಕಮಲ‌ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸಿದ್ದಾರೆ. 

ಮಂಡ್ಯದಲ್ಲಿ ಮನೆ‌ ಮಾಡಿದ ಸಂಭ್ರಮ

ಪ್ರಧಾನಿ ಮೋದಿ ಪ್ರಮಾಣವಚನ ಸ್ವೀಕಾರ ಹಾಗೂ ಮೋದಿ ಸಂಪುಟದಲ್ಲಿ ಸಚಿವರಾಗಿ ಎಚ್‌.ಡಿ. ಕುಮಾರಸ್ವಾಮಿ ಪ್ರಮಾಣವಚನ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ಸಂಭ್ರಮ ಮನೆ‌ ಮಾಡಿದೆ. ಬೃಹತ್ ಎಲ್‌ಇಡಿ ಪರದೆ ಮುಖಾಂತರ ಪ್ರಮಾಣವಚನ ಕಾರ್ಯಕ್ರಮ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ. ಏಷ್ಯಾನೆಟ್ ಸುವರ್ಣ ನ್ಯೂಸ್ ಮೂಲಕ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ಲೈವ್ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ.  ಬಸರಾಳು ಬಸ್ ನಿಲ್ದಾಣದ ಬಳಿ ಬೃಹತ್ಎಲ್‌ಇಡಿ ಅಳವಡಿಕೆ ಮಾಡಲಾಗಿದೆ. ಬೃಹತ್ ಎಲ್‌ಇಡಿ ಪರದೆಯಲ್ಲಿ ಕಾರ್ಯಕ್ರಮವನ್ನ ನೂರಾರು ಜನರು ಕಣ್ತುಂಬಿಕೊಂಡಿದ್ದಾರೆ. 

ರಾಜ್ಯದ 5 ಮಂದಿಗೆ ಮಂತ್ರಿಗಿರಿ; ಕುಮಾರಣ್ಣ, ಸೋಮಣ್ಣ, ಜೋಶಿ ಮತ್ತು ಶೋಭಾ ಕರಂದ್ಲಾಜೆಗೆ ಸಚಿವ ಸ್ಥಾನ

ಬಳ್ಳಾರಿಯಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

ಬಳ್ಳಾರಿಯ ರಾಯಲ್ ವೃತ್ತದಲ್ಲಿ‌ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದ್ದಾರೆ. ಬಿಜೆಪಿ  ಕಾರ್ಯಕರ್ತರು ಜೈ ಶ್ರೀರಾಮ ಘೋಷಣೆ ಕೂಗುವ ಮೂಲಕ ಸಂಭ್ರಮಿಸಿದ್ದಾರೆ. ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಪರಸ್ಪರ ಸಿಹಿ ತಿನ್ನಿಸಿದ್ದಾರೆ. NDA ಸರ್ಕಾರ ಪರ ಘೋಷಣೆ ಕೂಗಿ, ನಮೋ 3.0 ನರೇಂದ್ರ ಮೋದಿ ಭಾವಚಿತ್ರ ಹಿಡಿದು ಸಂಭ್ರಮಿಸಿದ್ದಾರೆ. ಸಂಭ್ರಮಾಚರಣೆಯಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದಾರೆ. 

ಚಿಕ್ಕೋಡಿ, ಕೊಪ್ಪಳ, ಸೇರಿದಂತೆ ರಾಜ್ಯಾದ್ಯಂತ ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಗೂ ಮೋದಿ ಅವರ ಅಭಿಮಾನಿಗಳು ಸಂಭ್ರಮಾಚರಣೆಯನ್ನ ಮಾಡಿದ್ದಾರೆ. 

click me!