ಪ್ರವೀಣ್‌ ಹತ್ಯೆ ಖಂಡಿಸಿ ಬಿಜೆಪಿ, ಹಿಂದೂ ಪರ ಸಂಘಟನೆಗಳ ಪ್ರತಿಭಟನೆ

By Govindaraj SFirst Published Jul 28, 2022, 5:10 AM IST
Highlights

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಮಂಗಳವಾರ ಸಂಜೆ ಬಿಜೆಪಿ ಯುವ ಮೋರ್ಚಾದ ಧುರೀಣ ಪ್ರವೀಣ್‌ ನೆಟ್ಟಾರು ಅವರನ್ನು ಅಮಾನುಷವಾಗಿ ಹತ್ಯೆಗೈದ ಘಟನೆಯನ್ನು ಖಂಡಿಸಿ ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ರಾಜ್ಯದ ವಿವಿಧೆಡೆ ಬುಧವಾರ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು (ಜು.28): ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಮಂಗಳವಾರ ಸಂಜೆ ಬಿಜೆಪಿ ಯುವ ಮೋರ್ಚಾದ ಧುರೀಣ ಪ್ರವೀಣ್‌ ನೆಟ್ಟಾರು ಅವರನ್ನು ಅಮಾನುಷವಾಗಿ ಹತ್ಯೆಗೈದ ಘಟನೆಯನ್ನು ಖಂಡಿಸಿ ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ರಾಜ್ಯದ ವಿವಿಧೆಡೆ ಬುಧವಾರ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊಪ್ಪಳ, ಹುಬ್ಬಳ್ಳಿ, ಗದಗ, ಶಿವಮೊಗ್ಗ ಸೇರಿದಂತೆ ಹಲವೆಡೆ ಪ್ರತಿಭಟನೆಗಳು ನಡೆದಿದ್ದು ತಪ್ಪಿತಸ್ಥರ ಎನ್‌ಕೌಂಟರ್‌ ಮಾಡಬೇಕೆಂದು ಒತ್ತಾಯಿಸಿದ್ದಾರೆ. 

ದಾವಣಗೆರೆಯಲ್ಲಿ ಯುವ ಬಿಜೆಪಿ ಕಾರ್ಯಕರ್ತರು ಶ್ರದ್ಧಾಂಜಲಿ ಸಭೆ ನಡೆಸಿದರು. ಜಿಲ್ಲೆಯ ಹೊನ್ನಾಳಿಯಲ್ಲಿ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಟೈರ್‌ ಸುಟ್ಟು ಘಟನೆಗೆ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಶ್ರದ್ಧಾಂಜಲಿ ಸಭೆ ನಡೆಸಿದರು. ಹುಬ್ಬಳ್ಳಿಯಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಮೊಂಬತ್ತಿ ಹಿಡಿದು ಪ್ರತಿಭಟನೆ ನಡೆಸಲಾಯಿತು. ಬಳಿಕ ಪ್ರವೀಣ ನೆಟ್ಟಾರು ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಗದಗದಲ್ಲೂ ಬಿಜೆಪಿ ಯುವ ಮೋರ್ಚಾದ ನೇತೃತ್ವದಲ್ಲಿ ಮಹಾತ್ಮಾ ಗಾಂಧಿ ವೃತ್ತದಲ್ಲಿ ಮಧ್ಯಾಹ್ನ ಪ್ರತಿಭಟನೆ ನಡೆಯಿತು.

ಬಿಜೆಪಿ ಮುಖಂಡನ ಬರ್ಬರ ಹತ್ಯೆ: ದುಷ್ಕರ್ಮಿಗಳನ್ನು ಶೀಘ್ರ ಬಂಧಿಸಿ ಶಿಕ್ಷೆ, ಸಿಎಂ ಬೊಮ್ಮಾಯಿ

ಕೇರಳ ಯುವಕನ ಹತ್ಯೆಗೆ ಪ್ರವೀಣ್‌ ಹತ್ಯೆ ಪ್ರತೀಕಾರ?: ಬೆಳ್ಳಾರೆ ಬಿಜೆಪಿ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆ ಘಟನೆ ಹಿಂದೆ ಕೇರಳ ನಂಟು ಹೊಂದಿರುವ ಸಾಧ್ಯತೆ ಬಗ್ಗೆ ಪೊಲೀಸ್‌ ಇಲಾಖೆ ಪರಿಶೀಲನೆ ನಡೆಸುತ್ತಿದೆ. ವಾರದ ಹಿಂದೆ ಬೆಳ್ಳಾರೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ನಡೆದ ಕೇರಳ ಯುವಕ ಮಸೂದ್‌ ಹತ್ಯೆಗೆ ಪ್ರತೀಕಾರವಾಗಿ ಈ ಹತ್ಯೆ ನಡೆಸಲಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ.

ಕೊಲೆ ನಡೆಸಿದ ದುಷ್ಕರ್ಮಿಗಳು ಕೇರಳ ನೋಂದಣಿಯ ದ್ವಿಚಕ್ರ ವಾಹನದಲ್ಲಿ ಆಗಮಿಸಿದ್ದರು ಎಂಬುದು ಸ್ಥಳೀಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಆದರೆ ಆ ವಾಹನದ ನೋಂದಣಿಯನ್ನು ಸರಿಯಾಗಿ ಗುರುತಿಸಲು ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ತನಿಖೆ ತೀವ್ರಗೊಳಿಸಲಿದೆ ಎಂದು ಮೂಲಗಳು ತಿಳಿಸಿವೆ. ಪ್ರವೀಣ್‌ನ ಚಲನವಲನದ ಬಗ್ಗೆ ಕೆಲವು ದಿನಗಳಿಂದ ನಿಗಾ ಇರಿಸಿದ ತಂಡವೇ ಈ ಕೃತ್ಯ ಎಸಗಿರುವ ಸಾಧ್ಯತೆಯನ್ನು ಹೇಳಲಾಗುತ್ತಿದೆ.

ಹಗಲು ಮುಸ್ಲಿಂ ಸ್ನೇಹಿತನ ಗೃಹಪ್ರವೇಶಕ್ಕೆ ಹೋಗಿದ್ದ ಪ್ರವೀಣ್‌!: ಪ್ರವೀಣ್‌ ಬೆಳ್ಳಾರೆಯಲ್ಲಿ ಎಲ್ಲರೊಂದಿಗೆ ಬೆರೆಯುತ್ತಿದ್ದರು. ಹತ್ಯೆಗೆ ಒಳಗಾದ ದಿನ ಮಂಗಳವಾರ ಅಲ್ಲೇ ಮುಸ್ಲಿಂ ಸ್ನೇಹಿತನ ಗೃಹ ಪ್ರವೇಶಕ್ಕೆ ಹೋಗಿ ಬಂದಿದ್ದರು. ಇದು ಅವರ ಸರ್ವಧರ್ಮ ಸಮಭಾವದ ಕಾಳಜಿಯನ್ನು ತೋರಿಸುತ್ತಿತ್ತು ಎಂದು ಅವರ ಆಪ್ತರು ಹೇಳುತ್ತಾರೆ. ಆದರೆ ಅದೇ ದಿನ ರಾತ್ರಿ ವೇಳೆ ದುಷ್ಕರ್ಮಿಗಳು ಭೀಕರವಾಗಿ ಕಡಿದು ಕೊಲೆ ಮಾಡಿದ್ದಾರೆ.

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ: ಸೈದ್ಧಾಂತಿಕವಾಗಿ ಏನೇ ಭಿನ್ನಾಭಿಪ್ರಾಯ ಇದ್ರೂ ಕೊಲೆ ಮಾಡಬಾರದು, ಆರಗ

15ಕ್ಕೂ ಹೆಚ್ಚು ಮಂದಿ ವಶಕ್ಕೆ: ಹತ್ಯೆ ಘಟನೆ ಬಗ್ಗೆ ಎಲ್ಲ ಆಯಾಮಗಳಿಂದ ತನಿಖೆ ನಡೆಯುತ್ತಿದೆ. ಮಂಗಳೂರು ಕಮಿಷನರ್‌ ಮತ್ತು ಉಡುಪಿ ಪೊಲೀಸರ ಸಹಾಯ ಪಡೆದು ಆರು ತಂಡಗಳನ್ನು ರಚನೆ ಮಾಡಿದ್ದೇವೆ. 15ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದ್ದೇವೆ ಎಂದು  ರಾಜ್ಯ ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್‌ಕುಮಾರ್‌ ಹೇಳಿದ್ದಾರೆ.

click me!