ಜಾತಿ ಗಣತಿ ವರದಿ ಜಾರಿ: ವಿಪಕ್ಷಗಳಿಗೆ ನುಂಗಲಾರದ ತುತ್ತಾಗಿದೆ ಎಂದ ಗೃಹ ಸಚಿವ ಪರಮೇಶ್ವರ!

Published : Oct 08, 2024, 01:34 PM IST
ಜಾತಿ ಗಣತಿ ವರದಿ ಜಾರಿ: ವಿಪಕ್ಷಗಳಿಗೆ ನುಂಗಲಾರದ ತುತ್ತಾಗಿದೆ ಎಂದ ಗೃಹ ಸಚಿವ ಪರಮೇಶ್ವರ!

ಸಾರಾಂಶ

ಜಾತಿಗಣತಿ ವರದಿಯನ್ನು ಜಾರಿಗೊಳಿಸುವ ಮುಂದಿನ ಹೆಜ್ಜೆ ವಿಪಕ್ಷಗಳಿಗೆ ಅಸಮಾಧಾನ ತಂದಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಹೇಳಿದ್ದಾರೆ. ಸಮುದಾಯಗಳಿಗೆ ಯೋಜನೆ ರೂಪಿಸಲು ಜಾತಿಗಣತಿ ವರದಿ ಸಹಾಯಕವಾಗಲಿದೆ ಎಂದು ಅವರು ಸಮರ್ಥಿಸಿಕೊಂಡರು.

ಬೆಂಗಳೂರು (ಅ.08): ರಾಜ್ಯದಲ್ಲಿ ನಮ್ಮ ಸರ್ಕಾರವು ಜಾತಿಗಣತಿ ವರದಿಯನ್ನು ಜಾರಿಗೊಳಿಸಲು ಮುಂದಾಗಿರುವುದು ವಿಪಕ್ಷದವರಿಗೆ ನುಂಗಲಾರದ ತುತ್ತಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಹೇಳಿದರು.

ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಜಾತಿಗಣತಿಯ ವರದಿಯನ್ನು ತರದೇ ಇದ್ದಾಗ ಅದನ್ನು ಕೋಲ್ಡ್ ಸ್ಟೋರೆಜ್‌ನಲ್ಲಿಟ್ಟುಬಿಟ್ಟರು ಎಂದು ವಿಪಕ್ಷ ನಾಯಕರು ಟೀಕಿಸುತ್ತಿದ್ದರು. ಯಾಕೆ ಅಷ್ಟೊಂದು ಹಣ ಖರ್ಚು ಮಾಡಿದರು? ಯಾಕೆ ಪೆಟ್ಟಿಗೆಯೊಳಗೆ ಇಡಬೇಕಿತ್ತು ಎಂದೆಲ್ಲ‌ ಪ್ರಶ್ನಿಸಿದರು. ಇದೀಗ ಅದನ್ನು ಜಾರಿಗೊಳಿಸುತ್ತೇವೆ ಎಂದಾಗ ನುಂಗಲಾರದ ತುತ್ತಾಗಿದೆ. ರಾಜ್ಯದಲ್ಲಿ ಹಿಂದುಳಿದವರು, ಅಲ್ಪಸಂಖ್ಯಾತರು ಹಾಗೂ ದಲಿತ ಸಮುದಾಯದ ಜನರು ಹೆಚ್ಚು ಸಂಖ್ಯೆಯಲ್ಲಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ. ಜಾತಿಗಣತಿ ವರದಿಯ ಆಧಾರದ ಮೇಲೆ ಮುಂದಿನ ದಿನಗಳಲ್ಲಿ ಕಾರ್ಯಕ್ರಮಗಳನ್ನು ರೂಪಿಸಲು ಸಹಾಯವಾಗುತ್ತದೆ ಎಂದು ಎಲ್ಲರು ಹೇಳುತ್ತಿದ್ದಾರೆ. ಸಮುದಾಯಗಳಿಗೆ ಯೋಜನೆಗಳನ್ನು ನೀಡಬಾರದೇ? ಎಂದು ಅವರು ಪ್ರಶ್ನಿಸಿದರು. 

ಇದನ್ನೂ ಓದಿ: ಮೈಸೂರು ಲೋಕಸಭೆ ಸೋಲಿಗೆ ಕ್ಯಾಂಡಿಡೇಟ್ ಸರಿ ಇಲ್ಲದ್ದೇ ಕಾರಣ: ಶಾಸಕ ಹರೀಶ್ ಗೌಡ

ಯಾವ ಆಧಾರದ ಮೇಲೆ ಯೋಜನೆಗಳನ್ನು ಕೊಡಬೇಕು ಎಂಬ ಪ್ರಶ್ನೆ ಬಂದಾಗ ಸ್ವಾಭಾವಿಕವಾಗಿ ನಾವು ಜನಸಂಖ್ಯೆ ಆಧಾರವಾಗಿಟ್ಟುಕೊಂಡು ಕೊಡಬೇಕಾಗುತ್ತದೆ. ಅದಕ್ಕೋಸ್ಕರ ಜಾತಿಗಣತಿ ವರದಿ ಬಿಡುಗಡೆ ಮಾಡಬೇಕು. ಅಕ್ಟೋಬರ್ 18ರಂದು ಸಚಿವ ಸಂಪುಟದ ಮುಂದೆ ಚರ್ಚೆಗೆ ತರುತ್ತೇವೆ ಎಂದು ಮುಖ್ಯಮಂತ್ರಿಯವರು ಹೇಳಿದ್ದಾರೆ. ಉಪಸಮಿತಿ ರಚಿಸುವುದ ಅಥವಾ ಅಸೆಂಬ್ಲಿ ಮುಂದೆ ತೆಗೆದುಕೊಂಡು ಹೋಗುವುದ ಎಂಬುದನ್ನು ತೀರ್ಮಾನ ಮಾಡುತ್ತಾರೆ. ಇದರಲ್ಲಿ ಯಾರ ಬೆಂಬಲದ ಪ್ರಶ್ನೆ ಬರುವುದಿಲ್ಲ. ವಸ್ತುಸ್ಥಿತಿಯನ್ನು ಜನಗಳ ಮುಂದೆ ಇಡುತ್ತೇವೆ. ಅದನ್ನು ಬೇಡ ಅಂದರೆ ಹೇಗೆ? ರೂ. 160 ಕೋಟಿ ಖರ್ಚು ಮಾಡಿ, ಯಾವ ಸಮುದಾಯ ಎಷ್ಟು ಜನಸಂಖ್ಯೆ ಇದೆ ಎಂಬುದು ಗೊತ್ತಾಗಬೇಕು ಎಂದರು.

ಕೇಂದ್ರ ಸರ್ಕಾರ ಜನಗಣತಿ ಮಾಡಬೇಕು ಎಂದು ನಿರ್ಧರಿಸಿದ್ದು, ಈಗಾಗಲೇ ತಡವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವರು ಪ್ರಧಾನಮಂತ್ರಿ ಭೇಟಿಗೆ ಹೋದಾಗ ಜನಗಣತಿ ಮಾಡುವುದಾಗಿ ಹೇಳಿದ್ದರು. 2026 ಅಥವಾ 2027ರಲ್ಲಿ ಪ್ರಾರಂಭಿಸಿ 2028 ಚುನಾವಣೆಗೆ ಸಿಗುತ್ತದೆ ಎಂದಿದ್ದರು. ಆ ಸಂದರ್ಭದಲ್ಲಿಯೂ ಇದೇರೀತಿ ವಿರೋಧಿಸುತ್ತಾರೆಯೇ? ಸರ್ಕಾರ ಅಧಿಕೃತವಾಗಿ ಜಾತಿಗಣತಿ ಮಾಡಿದೆ. ಯಾರೋ ನಾಲ್ಕು ಜನ ಸೇರಿ ಮಾಡಿರುವುದಲ್ಲ. ಪ್ರತಿ ಹತ್ತು ವರ್ಷಕ್ಕೊಮ್ಮೆ ಜನಗಣತಿ ನಡೆಯಬೇಕು. ಈಗ ಏರುಪೇರಾಗಿದೆ. ಹತ್ತುವರ್ಷಕ್ಕೆ ಶೇ.15ರಷ್ಟು ಜನಸಂಖ್ಯೆ ಹೆಚ್ಚಾಗಿರುತ್ತದೆ ಎಂದು ಅಧ್ಯಯನಗಳು ಹೇಳುತ್ತವೆ. ಇದರ ಆಧಾರದ ಮೇಲೆ ಮಾಡಬಹುದು‌ ಎಂದರು.

ಇದನ್ನೂ ಓದಿ: ಮುಡಾ ಹಗರಣ ಮುಚ್ಚಿಹಾಕಲು ಸಿದ್ದರಾಮಯ್ಯ ಜಾತಿ ಗಣತಿ ವರದಿ ನಾಟಕ: ಹೆಚ್‌ಡಿಕೆ!

ಸನ್ನಿವೇಶ ಬಂದಾಗ ಕೂಗು ಹಾಕೋಣ: ಸಚಿವ ಸತೀಶ್ ಜಾರಕಿಹೊಳಿ ಭೇಟಿ ಕುರಿತು ಮಾತನಾಡಿ, ಚರ್ಚೆಗಳಾದರೆ ಆದರೆ ಒಳ್ಳೆಯದಲ್ಲವೇ. ಚಾಯ್ ಪೇ ಚರ್ಚೆ ಅಂತ ಕಾರ್ಯಕ್ರಮ ಇದೆಯಲ್ಲ. ಅದೇರೀತಿ ಕಾಫಿ ಪೇ‌ ಚರ್ಚೆ. ನಾವಿಬ್ಬರು ಕುಳಿತುಕೊಂಡು ಎರಡು ಲೋಟ ಕಾಫಿ ಕುಡಿದರೆ ಮುಖ್ಯಮಂತ್ರಿ ಮಾಡಿಬಿಡುತ್ತಾರೆ ಎನ್ನುವುದಾದರೆ ಬಹಳ ಚರ್ಚೆಗಳಾಗುತ್ತಿದ್ದವು. ಬಹಳಷ್ಟು ಕಾಫಿ ಖರ್ಚಾಗುತ್ತಿತ್ತು. ನಾವು ಮಾತನಾಡುವುದರಿಂದ ಏನು ಆಗುವುದಿಲ್ಲ. ನಿರ್ಧಾರ ಎಲ್ಲ ಹೈಕಮಾಂಡ್ ಮಾಡುತ್ತದೆ. ಅಂತಹ ಸನ್ನಿವೇಶ ಈಗ ಬಂದಿಲ್ಲ. ಸನ್ನಿವೇಶ ಬಂದಾಗ ಚರ್ಚೆ ಮಾಡೋಣ, ಅದರ ಬಗ್ಗೆ ಕೂಗು ಹಾಕೋಣ, ಬೇಡಿಕೆ‌ ಇಡೋಣ. ಬೇಕಾದದ್ದು ಮಾಡೋಣ. ಆದರೆ ಈಗ ಸನ್ನಿವೇಶ ಬಂದಿಲ್ಲವಲ್ಲ. ಮುಖ್ಯಮಂತ್ರಿ ರಾಜೀನಾಮೆ ಕೊಡುವ ಅಗತ್ಯವು ಇಲ್ಲ ಎಂದು ಸ್ಪಷ್ಟಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ