ಕರ್ನಾಟಕದಲ್ಲಿ ಅಪರಾಧ ಹೆಚ್ಚಳ: ಡಿಜಿಪಿಗೆ ಬಿಜೆಪಿ ದೂರು

Published : May 19, 2024, 09:35 AM IST
ಕರ್ನಾಟಕದಲ್ಲಿ ಅಪರಾಧ ಹೆಚ್ಚಳ: ಡಿಜಿಪಿಗೆ ಬಿಜೆಪಿ ದೂರು

ಸಾರಾಂಶ

ಹಿಂದೆ ರಾಜ್ಯವು ಕಾನೂನು-ಸುವ್ಯವಸ್ಥೆ ವಿಚಾರದಲ್ಲಿ ಉತ್ತಮ ಹೆಸರು ಪಡೆದಿತ್ತು. ಅವರಾಧ ಕನಿಷ್ಠ ಪ್ರಮಾಣದಲ್ಲಿದ್ದವು. ಆದರೆ, ಇದೀಗ ಮಹಿಳೆಯರ ಮೇಲಿನ ದೌರ್ಜನ್ಯ, ಕೊಲೆ, ಸುಲಿಗೆಗಳು ಹಾಗೂ ಬಡವರು, ಶೋಷಿತರ ಮೇಲಿನ ದೌರ್ಜನ್ಯ ಹೆಚ್ಚಾಗಿದೆ. ಈ ಮೂಲಕ ಕರ್ನಾಟಕವು 'ಅಪರಾಧಗಳ ರಾಜ್ಯ' ಎಂಬ ಕೆಟ್ಟ ಹೆಸರು ಪಡೆಯುವಂತಾಗಿದೆ: ಬಿಜೆಪಿ 

ಬೆಂಗಳೂರು(ಮೇ.19): ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟು ಅಪರಾಧ ಪ್ರಮಾಣ ಹೆಚ್ಚಳವಾಗಿದೆ. ಕೂಡಲೇ ಈ ಸಂಬಂಧ ಕಾರ್ಯಪ್ರವೃತ್ತರಾಗಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಕ್ರಮ ಕೈಗೊಳ್ಳುವಂತೆ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ನೇತೃತ್ವದ ಬಿಜೆಪಿ ನಿಯೋಗವು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಮನವಿ ಮಾಡಿದೆ.

ಶನಿವಾರ ರಾಜ್ಯ ಪೊಲೀಸ್ ಪ್ರಧಾನ ಕಚೇರಿಗೆ ಭೇಟಿ ನೀಡಿದ್ದ ಬಿಜೆಪಿ ನಿಯೋಗವು ರಾಜ್ಯ ಪೊಲೀಸ್ ಮಹಾನಿರ್ದೇಶಕ ಆಲೋಕ್ ಮೋಹನ್ ಅವರಿಗೆ ಮನವಿ ಸಲ್ಲಿಸಿತು. ನಿಯೋಗದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಮಾಳವಿಕಾ ಅವಿನಾಶ್, ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಕೆ.ರಾಮಮೂರ್ತಿ, ರಾಜ್ಯ ಬಿಜೆಪಿ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್, ಬೆಂಗಳೂರು ಉತ್ತರ ಜಿಲ್ಲೆ ಅಧ್ಯಕ್ಷ ಎಸ್.ಹರೀಶ್ ಮತ್ತಿತರರಿದ್ದರು.

ನೇಹಾ ಕೇಸ್‌ಗೆ ವಿಶೇಷ ಕೋರ್ಟ್ ತೆರೆಯಲು ಸಿಜೆಗೆ ಮೊರೆ: ಸಚಿವ ಎಚ್‌.ಕೆ. ಪಾಟೀಲ್‌

ಬಿಜೆಪಿದೂರಿನಲ್ಲಿ ಏನಿದೆ?:

ಹಿಂದೆ ರಾಜ್ಯವು ಕಾನೂನು-ಸುವ್ಯವಸ್ಥೆ ವಿಚಾರದಲ್ಲಿ ಉತ್ತಮ ಹೆಸರು ಪಡೆದಿತ್ತು. ಅವರಾಧ ಕನಿಷ್ಠ ಪ್ರಮಾಣದಲ್ಲಿದ್ದವು. ಆದರೆ, ಇದೀಗ ಮಹಿಳೆಯರ ಮೇಲಿನ ದೌರ್ಜನ್ಯ, ಕೊಲೆ, ಸುಲಿಗೆಗಳು ಹಾಗೂ ಬಡವರು, ಶೋಷಿತರ ಮೇಲಿನ ದೌರ್ಜನ್ಯ ಹೆಚ್ಚಾಗಿದೆ. ಈ ಮೂಲಕ ಕರ್ನಾಟಕವು 'ಅಪರಾಧಗಳ ರಾಜ್ಯ' ಎಂಬ ಕೆಟ್ಟ ಹೆಸರು ಪಡೆಯುವಂತಾಗಿದೆ.

ದೌರ್ಜನ್ಯದಲ್ಲಿ 3ನೇ ಸ್ಥಾನ: ಆರ್ಥಿಕ ಅಪರಾಧಗಳಲ್ಲಿ ಕರ್ನಾಟಕಕ್ಕೆ9ನೇ ಸ್ಥಾನ. ಮಕ್ಕಳ ಮೇಲಿನ ಅಪರಾಧಗಳ ಪ್ರಮಾಣ ಶೇ.46ರಷ್ಟು ಹೆಚ್ಚಳ, ಹಿರಿಯ ನಾಗರಿಕರ ಮೇಲಿನ ಅಪರಾಧದಲ್ಲಿ ಶೇ.86ರಷ್ಟು ಹೆಚ್ಚಳ, ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಕರ್ನಾಟಕಕ್ಕೆ 3ನೇ ಸ್ಥಾನ ಬಂದಿರುವುದು ಅತ್ಯಂತ ಬೇಸರದ ಮತ್ತು ಆತಂಕದ ವಿಚಾರ. ರಾಜ್ಯ ಸರ್ಕಾರವು

ಕಾನೂನು- ಸುವ್ಯವಸ್ಥೆ ಕಡೆ ಗಮನ ಕೊಡುತ್ತಿಲ್ಲ. ಪೊಲೀಸ್ ಇಲಾಖೆ ಇದೆಯೋ-ಇಲ್ಲವೋ?:

ಲೋಕಸಭಾ ಚುನಾವಣೆ ವೇಳೆ ಕಾಂಗ್ರೆಸ್ ಸರ್ಕಾರವು ಬೆಂಗಳೂರು ಗ್ರಾಮಾಂತರ ಕ್ಷೇತ್ರ ಸೇರಿದಂತೆ ವಿವಿಧೆಡೆ ಸೋಲಿನ ಭೀತಿಯಿಂದ ಪೊಲೀಸ್ ಇಲಾಖೆಯನ್ನು ಬಳಸಿಕೊಳ್ಳಲು ಮುಂದಾಗಿತ್ತು. ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆದಾಗ ಪ್ರಕರಣ ದಾಖಲಿಸದೆ ಇರುವುದು, ಜೀವ ಬೆದರಿಕೆ ಹಾಕಿದರೂ ಕೈಗೊಳ್ಳದ ಪರಿಸ್ಥಿತಿ ರಾಜ್ಯದಲ್ಲಿ ಪೊಲೀಸ್ ಇಲಾಖೆ ಇದೆಯೋ ಇಲ್ಲವೋ ಎಂಬ ಸಂದೇಹ ಬರುತ್ತಿದೆ.

ಉನ್ನತಾಧಿಕಾರಿಗಳಿಗೆ ನಿರ್ದೇಶನ ನೀಡಿ:

ಹುಬ್ಬಳ್ಳಿಯಲ್ಲಿ ಕಾಲೇಜು ವಿದ್ಯಾರ್ಥಿನಿ ಹಾ ಹಿರೇಮಠ ಹತ್ಯೆ ಪ್ರಕರಣ, ಅಂಬಿಕಾ ಎಂಬ ಯುವತಿಯ ಹತ್ಯೆ ಸೇರಿದಂತೆ ಅನೇಕ ಮಹಿಳೆಯರ ಹತ್ಯೆ ನಡೆದಿದೆ. ಅಲ್ಲದೆ ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಾಗಿದ್ದು, ಪೊಲೀಸ್ ಇಲಾಖೆ ಕೂಡಲೇ ನಿಷ್ಪಕ್ಷಪಾತ ಕ್ರಮ ಕೈಗೊಂಡಿಲ್ಲ ಎಂಬ ಜನಾಕ್ರೋಶಕ್ಕೆ ಕಾರಣವಾಗಿದೆ. ಹೀಗಾಗಿ ಅಪರಾಧಗಳನ್ನು ಕೂಡಲೇ ಹತ್ತಿಕ್ಕಿ ರಾಜ್ಯ ಮಾದರಿ ಆಗುವಂತೆ ಕ್ರಮ ಕೈಗೊಳ್ಳಬೇಕು. ಕಾಂಗ್ರೆಸ್ ಪಕ್ಷದಿಂದ ಹಗೆತನ: ಗನ್ ಹಿಡಿದು ಓಡಾಡುವ ವ್ಯಕ್ತಿ, ಮುಖ್ಯಮಂತ್ರಿಗಳಿಗೆ ಹೂವಿನ ಹಾರ ಹಾಕುವ ದುಸ್ಥಿತಿ ರಾಜ್ಯದ್ದು. ಒಂದು ವರ್ಗಕ್ಕೆ ಬೆಣ್ಣೆ ಇನ್ನೊಂದು ವರ್ಗಕ್ಕೆ ಜೈಲುವಾಸ, ಲಾಠಿ ಏಟು ಎಂಬ ದುಸ್ಥಿತಿ ರಾಜ್ಯದ್ದಾಗಿದೆ. ಹಿಂದೂ ಕಾರ್ಯಕರ್ತರ ಮೇಲೆ ಬಿಜೆಪಿ ಕಾರ್ಯಕರ್ತರ ಮೇಲೆ ಹಗೆತನ ಸಾಧಿಸುವುದು ಕಾಂಗ್ರೆಸ್‌ಗೆ ಸರ್ವೇ ಸಾಮಾನ್ಯ.

ಹುಬ್ಬಳ್ಳಿ ಕೊಲೆಗಳ ಬಗ್ಗೆ ವರದಿ ಕೇಳಿದ್ದೇನೆ: ಗೃಹ ಸಚಿವ ಪರಮೇಶ್ವರ್‌

ದುರ್ಘಟನೆಗಳ ನಿಯಂತ್ರಿಸಲು ವಿಫಲ: 

ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ. ಬೆಳಗಾವಿಯಲ್ಲಿ ನಡೆದ ಘಟನೆಯಂತೂ ಅತ್ಯಂತ ಅಮಾನವೀಯ. ಸಿದ್ದರಾಮಯ್ಯನವರು ಸೇರಿದಂತೆ ಸಂಪೂರ್ಣ ಆಡಳಿತ ಬೆಳಗಾವಿಯಲ್ಲಿ ವಿಧಾನಸಭಾ ಅಧಿವೇಶನನಡೆಸುತ್ತಿದ್ದಾಗ42 ವರ್ಷದಮಹಿಳೆಯನ್ನು ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಿ ಹಲ್ಲೆ ಘಟನೆ ನಡೆದಿತ್ತು.

ಹಿಂದೂಗಳು 2ನೇ ದರ್ಜೆಯ ನಾಗರಿಕರು: ಕಾಂಗ್ರೆಸ್

ಸರ್ಕಾರ ಮುಸ್ಲಿಂ ಅಪರಾಧಿಗಳು ಭಾಗಿಯಾದ ಪ್ರಕರಣ ಗಳಲ್ಲಿ ಕ್ರಮಕ್ಕೆ ಮೀನಾಮೇಷ ಎಣಿಸುತ್ತದೆ. ಮುಸ್ಲಿಂ ವ್ಯಕ್ತಿಗಳ ಗುಂಪಿನಿಂದ ದಂಪತಿಗಳು ನೈತಿಕ ಪೊಲೀಸ್‌ಗಿರಿಗೆ ಬಲಿಯಾಗಿ ಈ ದಂಪತಿಗಳು ನ್ಯಾಯಕ್ಕಾಗಿ ಆಗ್ರಹಿ ಸಿದ್ದರು. ಕೇಸು ಮುಚ್ಚಿಹಾಕಲು ಈ ಸರ್ಕಾರ ಮುಂದಾ ಗಿತ್ತು. ಬೆಂಗಳೂರಿನ ನಗರ್ತಪೇಟೆಯಲ್ಲಿ ಹನುಮಾನ್ ಚಾಲೀಸ ಜೋರಾಗಿ ಹಾಕಿದ್ದಾಗಿ ಆಕ್ಷೇಪಿಸಿ ಹಿಂದೂ ಅಂಗಡಿ ಮಾಲೀಕನ ಮೇಲೆ ಮುಸ್ಲಿಂ ದುಷ್ಕರ್ಮಿಗಳು ಹಲ್ಲೆ ನಡೆಸಿದರು. ಇದರಸಮರ್ಥನೆಗೆ ಕಾಂಗ್ರೆಸ್ ಸರ್ಕಾರಮುಂದಾಗಿತ್ತು. ಈ ಸರ್ಕಾರವು ಹಿಂದೂಗಳನ್ನು 2ನೇ ದರ್ಜೆಯ ನಾಗರಿಕರಂತೆ ನೋಡುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮಹಾಮೇಳಾವ್ ಅನುಮತಿ ನಿರಾಕರಣೆ: ನಾಡದ್ರೋಹಿ ಎಂಇಎಸ್ ‌ಪುಂಡರಿಗೆ ಶಾಕ್ ಕೊಟ್ಟ ಬೆಳಗಾವಿ ಜಿಲ್ಲಾಡಳಿತ
ಸಮಾಜ ಕಲ್ಯಾಣ ಸಚಿವರೇ ಇಲ್ಲಿ ನೋಡಿ, ಅಂಬೇಡ್ಕರ್ ವಸತಿ ಶಾಲೆಯಲ್ಲಿ ಮಕ್ಕಳಿಗೆ ನಿತ್ಯ ಟಾರ್ಚರ್!, ಪೆನ್ನು ಪುಸ್ತಕ ಕೇಳಿದ್ರೆ ಏಟು!