ಸೈಟ್ ಫೈಟ್: ಸಿಎಂ ರಾಜೀನಾಮೆಗೆ ಬಿಜೆಪಿ ಆಗ್ರಹ, ನಾನು ರಿಸೈನ್‌ ಮಾಡಲ್ಲ ಎಂದ ಸಿದ್ದು..!

By Kannadaprabha News  |  First Published Jul 4, 2024, 10:05 AM IST

ನಾನು ಯಾಕೆ ರಾಜೀನಾಮೆ ನೀಡಬೇಕು ? ಮುಡಾ ನಿವೇಶನ ವಿಷಯದಲ್ಲಿ ನನ್ನ ಪಾತ್ರ ಏನಿದೆ? ಬಿಜೆಪಿಯವರು ಎಲ್ಲವನ್ನೂ ಸಿಬಿಐಗೆ ಹಸ್ತಾಂತರಿಸಲು ಕೇಳುವುದು ಯಾಕೆ? ಬಿಜೆಪಿ ಅಧಿಕಾರದಲ್ಲಿದ್ದಾಗ ಯಾವ ಪ್ರಕರಣವನ್ನೂ ಸಿಬಿಐಗೆ ಹಸ್ತಾಂತರ ಮಾಡಿರಲಿಲ್ಲ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ 
 


ಬೆಂಗಳೂರು(ಜು.04):  ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಿಂದ ಅಕ್ರಮವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಅವರಿಗೆ ನಿವೇಶನ ನೀಡಲಾಗಿದೆ. ಈ ಬಗ್ಗೆ ಸಿಬಿಐ ತನಿಖೆಯಾಗಬೇಕು, ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಆಗ್ರಹಿಸಿದೆ. ಇದಕ್ಕೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದು, ರಾಜೀನಾಮೆ ನೀಡುವುದಿಲ್ಲ ಎಂದಿದ್ದಾರೆ ಮೈಸೂರಿನ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ನಿವೇಶನ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸು ವಂತೆ ಪ್ರಮುಖ ಪ್ರತಿಪಕ್ಷ ಬಿಜೆಪಿ ಬಲವಾಗಿ ಒತ್ತಾಯಿಸಿದೆ.

ರಾಜ್ಯದ ಜನತೆಗೆ ಉತ್ತಮ ಆಡಳಿತ ನೀಡುತ್ತೇವೆಂದು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರದಲ್ಲಿ ದಿನಕ್ಕೊಂದು ಹಗರಣ ಬೆಳಕಿಗೆ ಬರುತ್ತಿದ್ದು, ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.

Tap to resize

Latest Videos

ಸಿಎಂ ಕುಟುಂಬಕ್ಕೆ ಲಾಭ ಮಾಡಿಕೊಡಲು ಸೈಟ್ ಕೊಟ್ರಾ..? ಏನಿದು ಮುಡಾ ಗೋಲ್ಮಾಲ್..?

ಕಾಂಗ್ರೆಸ್ ಸರ್ಕಾರ ಕೂಡಲೇ ಈ ಮುಡಾ ನಿವೇಶನ ಯೋಜನೆಯನ್ನು ರದ್ದು ಮಾಡಿ ತನಿಖೆಯನ್ನು ಸಿಬಿಐಗೆ ವಹಿಸಿದರೆ ಸತ್ಯ ಹೊರ ಬರಲಿದೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಮತ್ತು ಮುಡಾ ಹಗರಣ ಖಂಡಿಸಿ ಬುಧವಾರ ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆಗೆ ಯತ್ನಿಸಿದ ವೇಳೆ ಉಭಯ ನಾಯಕರು ಸುದ್ದಿಗಾರರ ಜತೆ ಮಾತನಾಡಿದರು.

ಸಿಎಂ ಗಮನಕ್ಕೆ ಬರದೆ ಹೇಗೆ ಸಾಧ್ಯ?:

ವಿಜಯೇಂದ್ರ ಮಾತನಾಡಿ, ಭಂಡ ಕಾಂಗ್ರೆಸ್ ಸರ್ಕಾರದ ಬಣ್ಣ ಬಯಲಾಗಿದೆ. ದಿನಕ್ಕೊಂದು ಹಗರಣ ಬಯಲಿಗೆ ಬರುತ್ತಿದೆ. ವಾಲ್ಮೀಕಿ ನಿಗ ಮದ್ದುನೂರಾರುಕೋಟಿಯಹಗರಣವಾದರೆ, ಮುಡಾದಲ್ಲಿ ಅವರ ಗಮನಕ್ಕೆ ಬಾರದೆ ಹಗರಣ ನಡೆದಿದೆಯಂತೆ. ಮುಖ್ಯಮಂತ್ರಿಗಳ ಗಮನಕ್ಕೆ ಬಾರದೆ ನಡೆಯಲು ಹೇಗೆ ಸಾಧ್ಯ ಎಂದು ಹರಿಹಾಯ್ದರು. ಮುಖ್ಯಮಂತ್ರಿಗಳ ಧರ್ಮಪತ್ನಿಗೆ 15 ನಿವೇಶನಗಳನ್ನು ಕೊಟ್ಟಿದ್ದಾರೆ. ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ಮೈಸೂರಿಗೆ
ಹೋಗಿ ಅಧಿಕಾರಿಗಳ ವರ್ಗಾವಣೆ ಮಾಡಿ, ಹಗರಣಕ್ಕೆ ಸಂಬಂಧಿಸಿದ ಕಡತಗಳನ್ನು ಬೆಂಗಳೂರಿಗೆ ತೆಗೆದುಕೊಂಡು ಬಂದಿದ್ದಾರೆ. ಸಾವಿರಾರು ಕೋಟಿ ರು. ಹಗರಣದ ಕುರಿತು ಜಿಲ್ಲಾಧಿಕಾರಿಗಳು 6-7 ತಿಂಗಳ ಹಿಂದೆ ವರದಿ ನೀಡಿದ್ದರು.

ಹಗರಣದ ವಿಚಾರ ಗೊತ್ತಿದ್ದರೂ ಸಹ ಇದನ್ನು ಮುಚ್ಚಿಟ್ಟಿದ್ದರು. ತಾಕತ್ತಿದ್ದರೆ ಅಧಿಕಾರಿಗಳನ್ನು ಅಮಾನತು ಮಾಡಬೇಕಿತ್ತು. ಆದರೆ, ವರ್ಗಾವಣೆ ಮಾಡಲಾಗಿದೆ. ಈ ಹಗ ರಣ ಮುಚ್ಚಿಹಾಕುವ ಸಂಪೂರ್ಣ ಪ್ರಯತ್ನ ನಡೆದಿದೆ. ತನಿಖೆ ಪೂರ್ಣವಾಗುವವರೆಗೆ ಮುಖ್ಯಮಂತ್ರಿಗಳು ತಮ್ಮ ಸ್ಥಾನಕ್ಕೆ ರಾಜೀ ನಾಮೆ ಕೊಡಬೇಕು ಎಂದು ವಿಜಯೇಂದ್ರ ಒತ್ತಾಯಿಸಿದರು.

ಲೂಟಿ ಹೊಡೆಯಲು ಸುರಂಗ: ವಿಧಾನಸಭೆ ಪ್ರತಿಪಕ್ಷ ನಾಯಕ ಅಶೋಕ್ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಬಂದು ಒಂದು ವರ್ಷದ ಬಳಿಕ ಒಂದೊಂದಾಗಿ ಬ್ರಹ್ಮಾಂಡ ಭ್ರಷ್ಟಾಚಾರ ಬಯಲಾಗುತ್ತಿದ್ದು, ಲೂಟಿ ಹೊಡೆಯಲು ಸುರಂಗ ಕೊರೆಯುವ ಕೆಲಸ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಮುಡಾದಲ್ಲಿ 50:50ರ ಅನುಪಾತದಲ್ಲಿ ನಿವೇಶನ ಹಂಚಿಕೆ ಮಾಡಿದ್ದಾರೆ. 3-4 ಸಾವಿರ ಕೋಟಿ ರು. ಹಗರಣ ನಡೆದಿದೆ. ಕಳೆದ 20 ವರ್ಷಗಳಿಂದ ಹಗರಣ ನಡೆದಿದೆ ಎನ್ನಲಾಗು ತ್ತಿದೆ. ಇದನ್ನು ಯಾರೇ ಮಾಡಿದರೂ, ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು. ಇದರಲ್ಲಿ ಬದಲಿ ನಿವೇಶನದ ಗೋಲ್ಮಾಲ್ ನಡೆದಿದೆ. ಬಡವರು 86 ಸಾವಿರ ಅರ್ಜಿಗಳನ್ನು ಹಾಕಿದ್ದಾರೆ. ಅವರಿಗೆ ನಿವೇಶನ ಇಲ್ಲ. ಆದರೆ ಮುಖ್ಯಮಂತ್ರಿಗಳು ಎಂಬ ಕಾರಣಕ್ಕೆ ನಿವೇಶನಗಳನ್ನು ಮಂಜೂರು ಮಾಡಲಾಗಿದೆ. ಮಂಜೂರಾಗಿರುವ ನಿವೇಶನ ಗಳ ಸಂಖ್ಯೆಗಿಂತಲೂ ಹೆಚ್ಚಿನ ನಿವೇಶನಗಳನ್ನು ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಹರಣದ ಕುರಿತು ಸಮಗ್ರ ತನಿಖೆಯಾಗಬೇಕು ಎಂದು ಒತ್ತಾಯಿಸಿದರು. ಈ ನಿವೇಶನ ಯೋಜನೆ ಯನ್ನು ರದ್ದು ಮಾಡಬೇಕು. ತನಿಖೆಯನ್ನು ಸಿಬಿಐಗೆ ವಹಿಸಿದರೆ ಸತ್ಯ ಹೊರ ಬರಲಿದೆ. ಈ ವಿಚಾರವನ್ನು ಸದನದಲ್ಲಿ ಮಾತನಾಡಿ ಸತ್ಯ ಬಯಲಿಗೆ ತರುತ್ತೇವೆ ಎಂದರು.

ರಾಜ್ಯ ಸರ್ಕಾರದಲ್ಲಿ ದಿನಕ್ಕೊಂದು ಅಕ್ರಮ

ಭಂಡ ಕಾಂಗ್ರೆಸ್ ಸರ್ಕಾರದ ದಿನಕ್ಕೊಂದು ಹಗರಣ ಬಯಲಿಗೆ ಬರುತ್ತಿದೆ. ವಾಲ್ಮೀಕಿ ನಿಗಮದ್ದು ನೂರಾರು ಕೋಟಿಯ ಹಗರಣವಾದರೆ, ಮುಡಾದಲ್ಲಿ ಅವರ ಗಮನಕ್ಕೆ ಬಾರದೆ ಹಗರಣ ನಡೆದಿದೆಯಂತೆ. ಮುಖ್ಯಮಂತ್ರಿಗಳ ಗಮನಕ್ಕೆ ಬಾರದೆ ನಡೆಯಲು ಹೇಗೆ ಸಾಧ್ಯ? ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ತಿಳಿಸಿದ್ದಾರೆ. 

ಸೈಟ್ ಹಂಚಿಕೆಗೆ 50:50 ಸೂತ್ರ ಜಾರಿಗೆ ಕಾಯ್ದೆ ತಂದಿದೇ ಬಿಜೆಪಿ: ಸಿದ್ದು

ಬೆಂಗಳೂರು: 'ಜಮೀನು ಕೊಟ್ಟವರಿಗೆ ಪರ್ಯಾಯವಾಗಿ 50:50 ಅನುಪಾತದಲ್ಲಿ ನಿವೇಶನ ನೀಡಬೇಕು ಎಂಬ ಕಾನೂನು ತಂದಿದ್ದೇ ಬಿಜೆಪಿ ಸರ್ಕಾರ, ಇದೀಗ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ನಿವೇಶನ ಹಂಚಿಕೆ ಪ್ರಕರಣದಲ್ಲಿ ಬಿಜೆಪಿ ನಾಯಕರು ವಿನಾಕಾರಣ ರಾಜಕಾರಣ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಮುಡಾ ನಿವೇಶನ ಹಂಚಿಕೆಯಲ್ಲಿ ಅವ್ಯವ ಹಾರ ಆಗಿದ್ದರೆ ಪತ್ತೆ ಹಚ್ಚಲು ಐಎಎಸ್ ಅಧಿ ಕಾರಿಗಳ ನೇತೃತ್ವದಲ್ಲಿ ತನಿಖೆಗೆ ವಹಿಸಲಾಗಿದೆ. ಹೀಗಾಗಿ ಸಿಬಿಐ ತನಿಖೆಗೆ ವಹಿಸುವ ಪ್ರಶ್ನೆಯೇ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.\

ಬುಧವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಯವರು ಎಲ್ಲವನ್ನೂ ಸಿಬಿಐಗೆ ಹಸ್ತಾಂತರಿ ಸಲು ಕೇಳುವುದು ಯಾಕೆ?. ಬಿಜೆಪಿ ಅಧಿಕಾರದಲ್ಲಿದ್ದಾಗ ಯಾವ ಪ್ರಕರಣವನ್ನೂ ಸಿಬಿಐಗೆ ಹಸ್ತಾಂತರ ಮಾಡಿರಲಿಲ್ಲ. ಜಮೀನು ಕೊಟ್ಟವರಿಗೆ ಪರ್ಯಾಯವಾಗಿ ನಿವೇಶನ ನೀಡಬೇ ಕೆಂದು ಕಾನೂನು ತಂದಿದ್ದೇ ಬಿಜೆಪಿ. ಹೀಗಿದ್ದರೂ ಯಾಕೆ ಈ ರಾಜಕೀಯ ಎಂದು ಕಿಡಿಕಾರಿದ್ದಾರೆ.

'ಹಿರಿಯ ಐಎಎಸ್ ಅಧಿಕಾರಿಗಳ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದೆ. ನಿವೇಶನ ಹಂಚಿಕೆ ವೇಳೆ ಜವಾಬ್ದಾರಿಯ ತು ಲ್ಲಿದ್ದ ಎಲ್ಲಾ ಅಧಿಕಾರಿಗಳನ್ನೂ ವರ್ಗಾ ವಣೆ ಮಾಡಲಾಗಿದೆ. ತನಿಖಾ ವರದಿ ಬಂದ ಬಳಿಕ ಕ್ರಮ ಕೈಗೊಳ್ಳಲಾಗು ವುದು' ಎಂದರು.

ರಾಜೀನಾಮೆ ಕೊಡಲಾಗುತ್ತಾ?: ಪ್ರತಿಪಕ್ಷ ನಾಯಕ ಆ‌ರ್.ಅಶೋಕ್ ತಮ್ಮ ರಾಜೀನಾಮೆಗೆ ಒತ್ತಾಯಿಸಿರುವ ಬಗ್ಗೆ ಮಾತನಾಡಿದ ಅವರು, 'ನಾನು ಯಾಕೆ ರಾಜೀನಾಮೆ ನೀಡಬೇಕು? ನನ್ನ ಪಾತ್ರವೇನಿದೆ? ಅಶೋಕ್ ಶಾಸಕ ರಾ
ಗಿದ್ದಾಗ ಭೂ ಮಂಜೂರಾತಿ ಅಕ್ರಮ ಮಾಡಿದ್ದಾರೆಂಬ ಆರೋಪ ಇದೆ. ಇದಕ್ಕೆ ಜಾಮೀನು ಪಡೆದಿದ್ದಾರೆ. ಅದಕ್ಕೆ ರಾಜೀನಾಮೆ ಕೊಡಿ ಎಂದರೆ ಕೊಡು ತ್ತಾರೆಯೇ' ಎಂದು ಪ್ರಶ್ನಿಸಿದರು.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ನನ್ನ ಹೆಂಡ್ತಿಗೆ ಕಾನೂನುಬದ್ಧವಾಗಿ ಸೈಟು ಕೊಟ್ಟಿದೆ; ಸಿಎಂ ಸಿದ್ದರಾಮಯ್ಯ

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಕುರಿತ ಬಿಜೆಪಿ ಪ್ರತಿಭಟನೆಗೆ ಪ್ರತಿಕ್ರಿಯಿಸಿ, 'ಬಿಜೆಪಿಯವರಿಗೆ ಮಾತ ನಾಡಲು ಯಾವುದೇ ವಿಷಯ ಇಲ್ಲ, ಹೀಗಾಗಿ ಇದೆಲ್ಲಾ ಮಾಡುತ್ತಿದ್ದಾರೆ. ಪ್ರಕ ರಣ ಸಂಬಂಧ ಎಸ್‌ಐಟಿ ರಚನೆ ಮಾಡಿ ತನಿಖೆಗೆ ವಹಿಸಲಾಗಿದೆ. ಡೆತ್‌ನೋಟ್ ನಲ್ಲಿ ಮಂತ್ರಿಗಳು ಎಂದಿರುವ ಕಾರಣಕ್ಕೆ ಹೆಸರಿಲ್ಲದಿದ್ದರೂ ನಾಗೇಂದ್ರ ಅವರ ರಾಜೀನಾಮೆ ತೆಗೆದುಕೊಳ್ಳಲಾಗಿದೆ. ಬಿಜೆಪಿಯವರ ಆರೋಪ ನಿಜವಾಗಿದ್ದರೆ ದೋಷಾರೋಪ ಪಟ್ಟಿ ಸಲ್ಲಿಕೆಯಾದ ಬಳಿಕ ನೋಡೋಣ. ಬ್ಯಾಂಕ್ ವ್ಯವಹಾರಗಳ ಬಗ್ಗೆ ಸಿಬಿಐ ಕೂಡ ತನಿಖೆ ಕೈಗೊಂಡಿದೆ. ಹಗರಣ ಆಗಿದ್ದರೆ ಸಾಬೀತುಪಡಿಸಲಿ' ಎಂದರು.

ನಾನು ರಾಜೀನಾಮೆ ಯಾಕೆ ಕೊಡಬೇಕು?

ನಾನು ಯಾಕೆ ರಾಜೀನಾಮೆ ನೀಡಬೇಕು ? ಮುಡಾ ನಿವೇಶನ ವಿಷಯದಲ್ಲಿ ನನ್ನ ಪಾತ್ರ ಏನಿದೆ? ಬಿಜೆಪಿಯವರು ಎಲ್ಲವನ್ನೂ ಸಿಬಿಐಗೆ ಹಸ್ತಾಂತರಿಸಲು ಕೇಳುವುದು ಯಾಕೆ? ಬಿಜೆಪಿ ಅಧಿಕಾರದಲ್ಲಿದ್ದಾಗ ಯಾವ ಪ್ರಕರಣವನ್ನೂ ಸಿಬಿಐಗೆ ಹಸ್ತಾಂತರ ಮಾಡಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. 

click me!