ಚುನಾವಣೆ ಪೂರ್ವ ನೀಡಿದ್ದ ಐದೂ ಭರವಸೆಗಳನ್ನು ಕಾಂಗ್ರೆಸ್ ಅಧಿಕಾರಕ್ಕೆ ಬಂದು ತಿಂಗಳಾದರೂ ಈಡೇರಿಸಿಲ್ಲ. ನಿಮ್ಮ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವಂತೆ ಅಧಿವೇಶನ ನಡೆಯುವ 10 ದಿನಗಳವರೆಗೂ ಹೋರಾಟ ನಡೆಸುತ್ತೇನೆ ಎಂದ ಬಿ.ಎಸ್.ಯಡಿಯೂರಪ್ಪ
ದಾವಣಗೆರೆ/ಚಿತ್ರದುರ್ಗ(ಜೂ.23): ಐದು ಗ್ಯಾರಂಟಿಗಳನ್ನು ನಂಬಿ ಜನ ಓಟು ಹಾಕಿದ್ದರಿಂದ ದೊಡ್ಡ ಸಂಖ್ಯೆಯಲ್ಲಿ ಕಾಂಗ್ರೆಸ್ ಶಾಸಕರು ಗೆದ್ದಿದ್ದಾರೆ. ಇದೀಗ ಕಾಂಗ್ರೆಸ್ ಸರ್ಕಾರ ತನ್ನ ಐದೂ ಗ್ಯಾರಂಟಿಗಳನ್ನು ಯಾವುದೇ ಷರತ್ತಿಲ್ಲದೆ ಜಾರಿಗೊಳಿಸಬೇಕು. ಇಲ್ಲದಿದ್ದರೆ ಜು.4ರಂದು ರಾಜ್ಯಪಾಲರ ಭಾಷಣ ಮುಗಿದ ನಂತರ ವಿಧಾನಸಭೆ ಅಧಿವೇಶನ ಮುಗಿಯುವವರೆಗೂ ವಿಧಾನಸೌಧ ಆವರಣದ ಗಾಂಧಿ ಪುತ್ಥಳಿ ಬಳಿ ಧರಣಿ ನಡೆಯುವುದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದರು.
ದಾವಣಗೆರೆ ಹಾಗೂ ಚಿತ್ರದುರ್ಗದಲ್ಲಿ ಗುರುವಾರ ಬಿಜೆಪಿ ಜಿಲ್ಲಾ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಚುನಾವಣೆ ಪೂರ್ವ ನೀಡಿದ್ದ ಐದೂ ಭರವಸೆಗಳನ್ನು ಕಾಂಗ್ರೆಸ್ ಅಧಿಕಾರಕ್ಕೆ ಬಂದು ತಿಂಗಳಾದರೂ ಈಡೇರಿಸಿಲ್ಲ. ನಿಮ್ಮ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವಂತೆ ಅಧಿವೇಶನ ನಡೆಯುವ 10 ದಿನಗಳವರೆಗೂ ಹೋರಾಟ ನಡೆಸುತ್ತೇನೆ ಎಂದರು.
ಜೂನ್, ಜುಲೈ ಆಯ್ತು, ಈಗ ಆಗಸ್ಟ್‌ಗೆ ಮುಂದೂಡಿಕೆಯಾದ ಅನ್ನಭಾಗ್ಯ ಯೋಜನೆ
ಅಧಿಕಾರಕ್ಕೆ ಬಂದು ತಿಂಗಳು ಕಳೆದರೂ ಗ್ಯಾರಂಟಿಗಳನ್ನು ಈಡೇರಿಸದ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನಸೌಧದ ಒಳಗೆ, ಹೊರಗೆ ನಮ್ಮ ಹೋರಾಟ ನಿಶ್ಚಿತ. ಅಧಿವೇಶನದಲ್ಲಿ ಬಿಜೆಪಿ ಶಾಸಕರು ಗ್ಯಾರಂಟಿ ಯೋಜನೆಗಳ ಜಾರಿಗೆ ಒತ್ತಾಯಿಸಿ ಹೋರಾಟ ನಡೆಸಿದರೆ, ಸದನದ ಹೊರಗೆ ಗಾಂಧಿ ಪುತ್ಥಳಿ ಬಳಿ ನಾನೂ ಸೇರಿ ಬಿಜೆಪಿ ಪರಾಜಿತ ಅಭ್ಯರ್ಥಿಗಳು, ಮಾಜಿ ಶಾಸಕರು ಧರಣಿ ನಡೆಸುತ್ತೇವೆ. ಯಾವುದೇ ಷರತ್ತು ವಿಧಿಸದೆ ಯೋಜನೆಗಳನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.
ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ ಯೋಜನೆ ಹಾಗೂ ಪದವೀಧರರಿಗೆ .3 ಸಾವಿರ, ಡಿಪ್ಲೋಮಾ ಪದವೀಧರರಿಗೆ ವಿದ್ಯಾನಿಧಿ ನೀಡುವುದಾಗಿ ಸ್ವತಃ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸಹಿ ಮಾಡಿ, ಗ್ಯಾರಂಟಿ ಕಾರ್ಡ್‌ಗಳನ್ನು ರಾಜ್ಯದಲ್ಲಿ ಹಂಚಿ ಆಶ್ವಾಸನೆ ನೀಡಿದ್ದರು. ಮನೆ ಮನೆಗೆ ಹೋಗಿ ಗ್ಯಾರಂಟಿ ಕಾರ್ಡ್ ನೀಡಿದ್ದರು. ಈ ಪೈಕಿ ಶಕ್ತಿ ಯೋಜನೆ ಮಾತ್ರ ಜಾರಿಗೊಳಿಸಿದ್ದು, ಅದಕ್ಕೂ ಹಲವು ಷರತ್ತುಗಳನ್ನು ವಿಧಿಸಲಾಗಿದೆ. ಗ್ಯಾರಂಟಿ ಯೋಜನೆಗಳನ್ನು ಯಾವುದೇ ಷರತ್ತಿಲ್ಲದೆ ಜಾರಿಗೊಳಿಸಬೇಕು ಎಂದು ತಾಕೀತು ಮಾಡಿದರು.
ಸದ್ಯಕ್ಕೆ ಮದ್ಯದ ದರ ಏರಿಕೆ ಇಲ್ಲ, ಏರಿಕೆ ಮಾಡಿದರೆ ತಿಳಿಸುವೆ: ಅಬಕಾರಿ ಸಚಿವ ತಿಮ್ಮಾಪುರ
ಕೇಂದ್ರ ಸರ್ಕಾರ ಈಗಾಗಲೇ ಕಡು ಬಡವರಿಗೆ ಐದು ಕೆಜಿ ಅಕ್ಕಿ ಕೊಡುತ್ತಿದೆ. ಕೇಂದ್ರದ ಈ ನೆರವು ಬಿಟ್ಟು ಕಾಂಗ್ರೆಸ್ ತನ್ನ ಗ್ಯಾರಂಟಿಯ ಹತ್ತು ಕೆ.ಜಿ. ಸೇರಿಸಿ ಒಟ್ಟು 15 ಕೆ.ಜಿ. ಅಕ್ಕಿ ವಿತರಿಸಬೇಕು. ನೀವು ನಿಮ್ಮದೇ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವವರೆಗೂ ನಾವು ಸುಮ್ಮನೆ ಬಿಡುವುದಿಲ್ಲ ಎಂದು ಸೂಚ್ಯವಾಗಿ ಎಚ್ಚರಿಸಿದರು.
ಗಾಂಧಿ ಪ್ರತಿಮೆ ಬಳಿ 10 ದಿನಗಳ ಧರಣಿ
ಅಧಿವೇಶನದಲ್ಲಿ ಬಿಜೆಪಿ ಶಾಸಕರು ಗ್ಯಾರಂಟಿ ಯೋಜನೆಗಳ ಜಾರಿಗೆ ಒತ್ತಾಯಿಸಿ ಹೋರಾಟ ನಡೆಸಿದರೆ, ಸದನದ ಹೊರಗೆ ಗಾಂಧಿ ಪುತ್ಥಳಿ ಬಳಿ ನಾನೂ ಸೇರಿದಂತೆ ಬಿಜೆಪಿ ಪರಾಜಿತ ಅಭ್ಯರ್ಥಿಗಳು, ಮಾಜಿ ಶಾಸಕರು ಕಲಾಪ ನಡೆಯುವ 10 ದಿನಗಳ ಕಾಲ ಧರಣಿ ನಡೆಸುತ್ತೇವೆ. ಸರ್ಕಾರ ಬಡವರಿಗೆ ಒಟ್ಟು 15 ಕೇಜಿ ಉಚಿತ ಅಕ್ಕಿ ನೀಡಬೇಕು ಅಂತ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.