ಹುಬ್ಬಳ್ಳಿ, ಧಾರವಾಡಗಳಲ್ಲಿ ಬಿಜೆಪಿ ಜನಸಂಕಲ್ಪ ಯಾತ್ರೆ: ಅರುಣ್‌ ಸಿಂಗ್‌

By Kannadaprabha News  |  First Published Oct 17, 2022, 1:00 AM IST

ಉತ್ತರ ಕರ್ನಾಟಕದ ವಾಣಿಜ್ಯ ನಗರಿ ಹುಬ್ಬಳ್ಳಿ ಹಾಗೂ ಧಾರವಾಡಗಳಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ನೇತೃತ್ವದಲ್ಲಿ ಭಾನುವಾರ ಬಿಜೆಪಿ ಜನಸಂಕಲ್ಪ ಸಭೆ ನಡೆಯಿತು. 


ಹುಬ್ಬಳ್ಳಿ (ಅ.17): ಉತ್ತರ ಕರ್ನಾಟಕದ ವಾಣಿಜ್ಯ ನಗರಿ ಹುಬ್ಬಳ್ಳಿ ಹಾಗೂ ಧಾರವಾಡಗಳಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ನೇತೃತ್ವದಲ್ಲಿ ಭಾನುವಾರ ಬಿಜೆಪಿ ಜನಸಂಕಲ್ಪ ಸಭೆ ನಡೆಯಿತು. ಬೆಳಗ್ಗೆ ಹುಬ್ಬಳ್ಳಿಗೆ ಆಗಮಿಸಿದ ಸಿಂಗ್‌, ಬಮ್ಮಾಪುರ ಓಣಿಯ ಗುರುಸಿದ್ದೇಶ್ವರ ಕಲ್ಯಾಣ ಮಂಟಪದಲ್ಲಿ ನಡೆದ ಕಾರ್ಯಕರ್ತರ ಸಂಕಲ್ಪ ಸಭೆಯಲ್ಲಿ ಮಾತನಾಡಿದರು. ನಂತರ, ಮೂರುಸಾವಿರ ಮಠಕ್ಕೆ ಭೇಟಿ ನೀಡಿ ಮಠದ ಗುರುಸಿದ್ದೇಶ್ವರ ಕತೃ ಗದ್ದುಗೆ ದರ್ಶನ ಪಡೆದು, ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿಯವರ ಆಶೀರ್ವಾದ ಪಡೆದರು. ಹೂವಿನ ಹಾರ ಹಾಕಿ ಸ್ವಾಮೀಜಿಯವರು ಅರುಣ್‌ ಸಿಂಗ್‌ರನ್ನು ಗೌರವಿಸಿದರು. 

ಸ್ವಾಮೀಜಿಯೊಂದಿಗೆ ಮಾತುಕತೆ ನಡೆಸಿದ ಬಳಿಕ, ಮಠದ ಸಭಾಭವನದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಬಳಿಕ, ಧಾರವಾಡಕ್ಕೆ ತೆರಳಿ, ಅಂಬೇಡ್ಕರ್‌ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಧಾರವಾಡಕ್ಕೆ ಆಗಮಿಸಿದ ಅರುಣ್‌ ಸಿಂಗ್‌ ಅವರಿಗೆ ಮಹಿಳೆಯರು ಆರತಿ ಎತ್ತಿ ಸ್ವಾಗತ ಕೋರಿದರು. ನಂತರ, ಧಾರವಾಡ ಗ್ರಾಮೀಣ ಬಿಜೆಪಿ ಕಾರ್ಯಕರ್ತರ ಸಂಕಲ್ಪ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ, ಸಚಿವ ಶಂಕರಪಾಟೀಲ ಮುನೇನಕೋಪ್ಪ ಹಾಗೂ ಇತರ ಮುಖಂಡರು ಉಪಸ್ಥಿತರಿದ್ದರು.

Tap to resize

Latest Videos

ರಾಹುಲ್‌ರನ್ನು ನಾಯಕ ಎಂದು ಯಾರೂ ಒಪ್ಪಿಕೊಂಡಿಲ್ಲ: ಅರುಣ್‌ ಸಿಂಗ್‌

ಹೆಚ್ಚಿನ ಕಾರ್ಯಕರ್ತರು ಪಾಲ್ಗೊಳ್ಳಿ: ಔರಾದ ಹಾಗೂ ಹುಮನಾಬಾದ ಪಟ್ಟಣಗಳಲ್ಲಿ ನಡೆಯಲಿರುವ ಜನಸಂಕಲ್ಪಯಾತ್ರೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರು ಪಾಲ್ಗೊಳ್ಳಲಿದ್ದಾರೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿ, ಈ ಜನಸಂಕಲ್ಪ ಯಾತ್ರೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರು ಆಗಮಿಸಿ, ಕಾರ್ಯಕ್ರಮ ಯಶಸ್ವಿಗೊಳಿಸಲು ಭಗವಂತ ಖೂಬಾ ಎಲ್ಲಾ ಕಾರ್ಯಕರ್ತರಲ್ಲಿ ಕೋರಿದ್ದಾರೆ.

ಅ.18ರಂದು ಬೆಳಿಗ್ಗೆ 11 ಗಂಟೆಗೆ ಔರಾದ ತಾಲೂಕಿನ ಬಲ್ಲೂರ (ಜೆ) ಗ್ರಾಮದಲ್ಲಿ 91 ಕೋಟಿ ಅನುದಾನದಲ್ಲಿ ನಿರ್ಮಾಣವಾಗುತ್ತಿರುವ ಸಿಪೇಟ್‌ ಕೇಂದ್ರ ಕಾಮಗಾರಿಯ ಭೂಮಿ ಪೂಜೆ ನೇರವೆರಿಸಲಿದ್ದಾರೆ, ನಂತರ ಮಧ್ಯಾಹ್ನ 12.05 ಗಂಟೆಗೆ ಅಮರೇಶ್ವರ ಕಾಲೇಜು ಆವರಣದಲ್ಲಿ ಪಕ್ಷದಿಂದ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಥೇರ್‌ ಮೈದಾನ ಹುಮನಾಬಾದನಲ್ಲಿ ಆಯೋಜಿಸಿರುವ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಅರುಣ ಸಿಂಗ್‌ಗೆ ಆತ್ಮೀಯ ಸ್ವಾಗತ: ಹಿರೇಕೆರೂರು ತಾಲೂಕಿನ ಮಾಸೂರು ಗ್ರಾಮದಲ್ಲಿ ಆಯೋಜಿಸಲಾಗಿರುವ ಜನಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಲು ಆಗಮಿಸಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಅರುಣಸಿಂಗ್‌ ಅವರನ್ನು ತಾಲೂಕಿನ ಚಳಗೇರಿ ಗ್ರಾಮದ ಟೋಲ್‌ ಪ್ಲಾಜ್‌ ಬಳಿ ಶಾಸಕ ಅರುಣಕುಮಾರ ಪೂಜಾರ ಸೇರಿದಂತೆ ಬಿಜೆಪಿ ಪದಾಧಿಕಾರಿಗಳು ಆತ್ಮೀಯವಾಗಿ ಬರಮಾಡಿಕೊಂಡು ಭವ್ಯ ಸ್ವಾಗತ ಕೋರಿದರು.

ಖರ್ಗೆ ಮಾತು ಕಲಬುರಗಿ ಜನಾನೇ ಕೇಳಿಲ್ಲ, ಇನ್ನು ರಾಜಸ್ಥಾನದಲ್ಲಿ ಕೇಳ್ತಾರಾ?: ಅರುಣ ಸಿಂಗ್‌ ವ್ಯಂಗ್ಯ

ನೇಕಾರ ಪ್ರಕೋಷ್ಠದ ರಾಜ್ಯ ಸಂಚಾಲಕ ಡಾ. ಬಸವರಾಜ ಕೇಲಗಾರ, ಜಿಲ್ಲಾಧ್ಯಕ್ಷ ಸಿದ್ದರಾಜ ಕಲಕೋಟೆ, ತಾಲೂಕು ಅಧ್ಯಕ್ಷ ಬಸವರಾಜ ಕೇಲಗಾರ, ನಗರ ಘಟಕ ಅಧ್ಯಕ್ಷ ದೀಪಕ ಹರಪನಹಳ್ಳಿ, ಯುವಮೋರ್ಚಾ ಜಿಲ್ಲಾಧ್ಯಕ್ಷ ಪವನಕುಮಾರ ಮಲ್ಲಾಡದ, ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಶಿವಕುಮಾರ ನರಸಗೊಂಡರ, ಮಂಜುನಾಥ ಒಲೇಕಾರ, ಕೆ. ಶಿವಲಿಂಗಪ್ಪ, ಆನಂದ ಇಟಗಿ, ನಾಗರಾಜ ಪವಾರ, ಮಲ್ಲಿಕಾರ್ಜುನ ಅಂಗಡಿ, ಪರಮೇಶ ಗೂಳಣ್ಣನವರ, ಪ್ರಕಾಶ ಕರೂರ, ಎ.ಬಿ.ಪಾಟೀಲ, ಶಿವು ಅಸುಂಡಿ, ಮಂಜುನಾಥ ಹುಲ್ಲತ್ತಿ, ರವಿ ತಳವಾರ, ಮಂಜುನಾಥ ಕಾಟಿ ಮತ್ತಿತರರಿದ್ದರು.

click me!