2028ಕ್ಕೆ ಬಿಜೆಪಿ- ಜೆಡಿಎಸ್ ಮೈತ್ರಿ ಸರ್ಕಾರ : ಜಿ.ಡಿ.ಹರೀಶ್ ಗೌಡ ಆರೋಪ

Published : Jun 27, 2025, 05:27 AM IST
GT Deve Gowda - Harish Gowda

ಸಾರಾಂಶ

ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಎಂದು ಹುಣಸೂರು ಜೆಡಿಎಸ್ ಶಾಸಕ ಜಿ.ಡಿ. ಹರೀಶ್ ಗೌಡ ಆರೋಪಿಸಿದರು.

ಮೈಸೂರು : ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಎಂದು ಹುಣಸೂರು ಜೆಡಿಎಸ್ ಶಾಸಕ ಜಿ.ಡಿ. ಹರೀಶ್ ಗೌಡ ಆರೋಪಿಸಿದರು.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ನಲ್ಲಿ ಅಸಮಾಧಾನದ ಹೊಗೆಯಾಡುತ್ತಿದೆ. ಕಾಂಗ್ರೆಸ್ ಪಕ್ಷದ ಶಾಸಕರು ಬೀದಿಯಲ್ಲಿ ನಿಂತು ಬೈಯ್ಯುವ ಪರಿಸ್ಥಿತಿ ಬಂದಿದೆ. ಐದಾರು ಬಾರಿ ಗೆದ್ದಿರುವ ಹಿರಿಯ ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದು ರಾಜ್ಯ ಸರ್ಕಾರದ ಆಡಳಿತ ವೈಖರಿ ಹೇಗಿದೆ ಎಂಬುದನ್ನು ತೋರಿಸಿದೆ ಎಂದರು.

ಕಾಂಗ್ರೆಸ್ ಹಿರಿಯ ಶಾಸಕರ‌ ಹೇಳಿಕೆ ಗಮನಿಸಿದರೆ ಸರ್ಕಾರ ಎಲ್ಲೋ ಒಂದು ಕಡೆ ಎಡವಿದಂತಿದೆ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಆಡಳಿತ ಪಕ್ಷದ ಶಾಸಕರಿಗೇ ಸೂಕ್ತ ಸ್ಪಂದನೆ ಸಿಗುತ್ತಿಲ್ಲ. ಇನ್ನೂ ವಿರೋಧ ಪಕ್ಷದ ಶಾಸಕರಿಗೆ ಸ್ಪಂದನೆ ಸಿಗುತ್ತಾ? ಎಂಬುದನ್ನು ರಾಜ್ಯದ ಜನರು ಗಮನಿಸುತ್ತಿದ್ದಾರೆ. ಜನರು ದಡ್ಡರಲ್ಲ, ಎಲ್ಲವನ್ನೂ ಗಮನಿಸುತ್ತಿದ್ದಾರೆ ಎಂದು ಅವರು ಹೇಳಿದರು.

ಅಸಮಾಧಾನಿತ ಶಾಸಕರನ್ನು ಸಿಎಂ ಕರೆದು ಮಾತನಾಡಿದ್ದಾರೆ. ಕಾಂಗ್ರೆಸ್ ಶಾಸಕರ ಸಂಖ್ಯೆ ದೊಡ್ಡದಿದೆ. ಹಾಗಾಗಿ ಐದಾರು ಶಾಸಕರು ಅಸಮಾಧಾನ ವ್ಯಕ್ತಪಡಿಸಿದರೆ ಯಾವುದೇ ರಾಜಕೀಯ ಬದಲಾವಣೆ ಆಗೋದಿಲ್ಲ. ಅಧಿಕಾರ ಹಂಚಿಕೆ ಕಾಂಗ್ರೆಸ್ ಪಾರ್ಟಿಯ ಆಂತರೀಕ ವಿಚಾರ ಎಂದರು.

ಆಶ್ರಯ ಮನೆಗಳ ಹಂಚಿಕೆಯಲ್ಲಿ ನಡೆದಿರುವ ಅವ್ಯವಹಾರ ಕುರಿತು ಕಾಂಗ್ರೆಸ್ ಹಿರಿಯ ಶಾಸಕ ಬಿ.ಆರ್. ಪಾಟೀಲ್ ಧ್ವನಿ ಎತ್ತಿದ್ದಾರೆ. ಈ ಬಗ್ಗೆ ತನಿಖೆಯಾಗಲಿ, ಸತ್ಯಾಂಶ ಹೊರಬರಲಿ. ನಮ್ಮ ಕ್ಷೇತ್ರಕ್ಕೆ 500 ಆಶ್ರಯ ಮನೆಗಳ ಹಂಚಿಕೆಯಾಗಿದೆ. ಗ್ರಾಮಸಭೆ ನಡೆದ ಬಳಿಕ ಆಶ್ರಯ ಮನೆಗಳನ್ನು ಹಂಚಿಕೆ ಮಾಡುತ್ತೇವೆ ಎಂದು ಅವರು ತಿಳಿಸಿದರು.

2028ಕ್ಕೆ ಬಿಜೆಪಿ- ಜೆಡಿಎಸ್ ಮೈತ್ರಿ ಸರ್ಕಾರ

2028ಕ್ಕೆ ಬಿಜೆಪಿ- ಜೆಡಿಎಸ್ ಮೈತ್ರಿ ಸರ್ಕಾರ ಬರಲಿದೆ ಎಂದು ಹುಣಸೂರು ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಡಿ. ಹರೀಶ್ ಗೌಡ ತಿಳಿಸಿದರು.

ನಿಖಿಲ್ ಸಾಮಾನ್ಯ ಕಾರ್ಯಕರ್ತನಾಗಿ ಜೆಡಿಎಸ್ ಪಕ್ಷ ಸಂಘಟಿಸುತ್ತಿದ್ದಾರೆ. ರಾಜ್ಯ ಪ್ರವಾಸದ ವೇಳೆ ನಿಖಿಲ್ ಅವರನ್ನು ಕಾರ್ಯಕರ್ತರು ಆತ್ಮೀಯವಾಗಿ, ಮುಕ್ತ ಮನಸ್ಸಿನಿಂದ ಸ್ವಾಗತಿಸುತ್ತಿದ್ದಾರೆ. ಮುಂದೆ ನಾನು ಸಹ ಅವರ ಜೊತೆ ಹೋಗುತ್ತೇನೆ, ಅವರಿಗೆ ಬೆಂಬಲವಾಗಿ ನಿಲ್ಲುತ್ತೇನೆ ಎಂದರು.

ಎಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾದ ಬಳಿಕ ರಾಜ್ಯಕ್ಕೆ ಹೆಚ್ಚಾಗಿ ಬರಲು ಆಗ್ತಿಲ್ಲ. ಹೀಗಾಗಿ, ನಿಖಿಲ್ ಜೆಡಿಎಸ್ ಪಕ್ಷ ಸಂಘಟನೆಯ ನೇತೃತ್ವ ವಹಿಸಿಕೊಳ್ಳುವಂತೆ ನಾವೆಲ್ಲರೂ ಒತ್ತಡ ಹಾಕ್ತಿದ್ದೇವೆ. 2028ಕ್ಕೆ ಬಿಜೆಪಿ- ಜೆಡಿಎಸ್ ಮೈತ್ರಿ ಸರ್ಕಾರ ತರಲಿದ್ದೇವೆ ಎಂದು ಅವರು ಹೇಳಿದರು.ಕಾಂಗ್ರೆಸ್ ಶಾಸಕರಿಗೆ ಹೆಚ್ಚು ಅನುದಾನ ಸಿಗುತ್ತಿದೆ. ವಿಪಕ್ಷ ಶಾಸಕರಿಗೆ ಕಡಿಮೆ ಅನುದಾನ ನೀಡಲಾಗಿದ್ದು, ತಾರತಮ್ಯ ಆಗಿದೆ. ಎಲ್ಲಾ ಶಾಸಕರಿಗೂ ಸಮಾನವಾಗಿ ಅನುದಾನ ಹಂಚಿಕೆ ಮಾಡಬೇಕು. ಎಲ್ಲರನ್ನೂ ಸಮಾನವಾಗಿ ಕಾಣಬೇಕು.

- ಜಿ.ಡಿ. ಹರೀಶ್ ಗೌಡ, ಶಾಸಕ, ಹುಣಸೂರು ಕ್ಷೇತ್ರ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

'ಉಪಲೋಕಾಯುಕ್ತರಿಗೆ ಒಂದ್ ನಮಸ್ಕಾರ': ಭ್ರಷ್ಟಾಚಾರದ ಬಗ್ಗೆ ಹೇಳಿಕೆ ನೀಡಲು ಮಾತ್ರ ಅಧಿಕಾರವಿದೆಯೇ? – ಹೆಚ್‌ಡಿಕೆ ವ್ಯಂಗ್ಯ
ವರುಣಾ ಜನತೆಯ ಋಣ ತೀರಿಸಲು ಸಾಧ್ಯವಿಲ್ಲ, ಆದರೂ ಶ್ರಮಿಸುವೆ: ಯತೀಂದ್ರ ಸಿದ್ದರಾಮಯ್ಯ