
ನವೆದೆಹಲಿ (ಆ.11) : ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರನ್ನು ನವದೆಹಲಿಯ ಅವರ ನಿವಾಸದಲ್ಲಿ ಮಂಗಳವಾರ ಭೇಟಿ ಮಾಡಿ ಮಾತುಕತೆ ನಡೆಸಿದರು.
ಈ ಬಗ್ಗೆ ಟ್ವೀಟ್ ಮಾಡಿರುವ ಸಿ.ಟಿ.ರವಿ, ತಮ್ಮ ಪಿ.ಎಚ್.ಡಿ ಅಧ್ಯಯನದ ಸಲುವಾಗಿ ಭೇಟಿ ಮಾಡಿರುವುದಾಗಿ ತಿಳಿಸಿದ್ದಾರೆ. 88ರ ಹರೆಯದಲ್ಲೂ ದೇವೇಗೌಡರ ಉತ್ಸಾಹ ಮತ್ತು ಲವಲವಿಕೆ ಬಗ್ಗೆ ಪ್ರಶಂಸಿರುವ ಅವರು, ಭಾರತೀಯ ರಾಜಕೀಯ ವಿಚಾರವಾಗಿ ಅವರ ಜ್ಞಾನ ಮತ್ತು ಅನುಭವ ಅಗಾಧವಾದದ್ದು ಎಂದು ಅಭಿಪ್ರಾಯಪಟ್ಟಿದ್ದಾರೆ.
ಸಿಎಂ ಆಗಬೇಕೆಂದು ಗಡ್ಡ ಬಿಟ್ಟಿದ್ದಲ್ಲ: ಸಿ.ಟಿ.ರವಿ
ಕರ್ನಾಟಕ ಮುಕ್ತ ವಿಶ್ವ ವಿದ್ಯಾಲಯ(ಕರಾಮುವಿ)ದಲ್ಲಿ ರಾಜ್ಯಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಸಿ.ಟಿ.ರವಿ ಅವರು ಇದೀಗ ಅಲ್ಲೇ ಪಿಎಚ್‌ಡಿ ಸಂಶೋಧನೆ ನಡೆಸುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ