PFI Ban: ಇಷ್ಟು ಸಾಕಾಗುವುದಿಲ್ಲ, ಸಮಾಜವು ಈ ನಿಟ್ಟಿನಲ್ಲಿ ಚಿಂತನೆ ನಡೆಸಬೆಕು: ಸಿ.ಟಿ.ರವಿ

By Govindaraj SFirst Published Sep 28, 2022, 9:48 AM IST
Highlights

ದೇಶಾದ್ಯಂತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆ ಮೇಲೆ ದಾಳಿ ಹಾಗೂ ಹಲವಾರು ಮಂದಿ ಮುಖಂಡರು, ಕಾರ್ಯಕರ್ತರ ಬಂಧನದ ನಂತರ ಇದೀಗ ಪಿಎಫ್ಐ ಸಂಘಟನೆಯನ್ನು ಕೇಂದ್ರ ಸರಕಾರ 5 ವರ್ಷಗಳ ಕಾಲ ನಿಷೇಧಿಸಿ ಮಹತ್ವದ ಆದೇಶ ಹೊರಡಿಸಿರುವುದಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸಂಘಟನೆಗಳನ್ನು ನಿಷೇಧಿಸಿದ ಕೇಂದ್ರ ಸರಕಾರದ ನಿರ್ಧಾರವನ್ನು ಸ್ವಾಗತಿಸುತ್ತೇನೆ ಹಾಗೂ ಸರಕಾರವನ್ನು ಅಭಿನಂದಿಸುತ್ತೇನೆ ಎಂದು ತಿಳಿಸಿದ್ದಾರೆ.

ಬೆಂಗಳೂರು (ಸೆ.28): ದೇಶಾದ್ಯಂತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆ ಮೇಲೆ ದಾಳಿ ಹಾಗೂ ಹಲವಾರು ಮಂದಿ ಮುಖಂಡರು, ಕಾರ್ಯಕರ್ತರ ಬಂಧನದ ನಂತರ ಇದೀಗ ಪಿಎಫ್ಐ ಸಂಘಟನೆಯನ್ನು ಕೇಂದ್ರ ಸರಕಾರ 5 ವರ್ಷಗಳ ಕಾಲ ನಿಷೇಧಿಸಿ ಮಹತ್ವದ ಆದೇಶ ಹೊರಡಿಸಿರುವುದಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸಂಘಟನೆಗಳನ್ನು ನಿಷೇಧಿಸಿದ ಕೇಂದ್ರ ಸರಕಾರದ ನಿರ್ಧಾರವನ್ನು ಸ್ವಾಗತಿಸುತ್ತೇನೆ ಹಾಗೂ ಸರಕಾರವನ್ನು ಅಭಿನಂದಿಸುತ್ತೇನೆ ಎಂದು ತಿಳಿಸಿದ್ದಾರೆ.

ದೇಶ ವಿಭಜಕ ಶಕ್ತಿಗಳನ್ನು ಸರಕಾರ ಬ್ಯಾನ್ ಮಾಡಿದೆ , ಇನ್ನು ಸಮಾಜದ ಸರದಿ. ಐಸಿಸ್ ಮಾದರಿಯ ಉಗ್ರಗಾಮಿಗಳನ್ನ ಬೆಂಬಲಿಸಿದ, ದೇಶದ ಒಳಗೆ ಅಭದ್ರತೆ, ಅಂತರ್ಯುದ್ಧದ, ದೇಶದ್ರೋಹದ ಸಂಚನ್ನು ಮಾಡುತ್ತಿದ್ದ ಪಿಎಫ್‌ಐ ಹಾಗೂ ಅದರ ಸಹ ಸಂಘಟನೆಗಳನ್ನು ನಿಷೇಧಿಸಿದ ಕೇಂದ್ರ ಸರಕಾರದ ನಿರ್ಧಾರವನ್ನು  ಸ್ವಾಗತಿಸುತ್ತೇನೆ ಹಾಗೂ ಸರಕಾರವನ್ನು ಅಭಿನಂದಿಸುತ್ತೇನೆ. ಸರಕಾರ ಈ ಸಂಘಟನೆಗಳನ್ನು ಬ್ಯಾನ್ ಮಾಡಿದೆ, ಇಷ್ಟು ಸಾಕಾಗುವುದಿಲ್ಲ. ಸಮಾಜವು ಈ ನಿಟ್ಟಿನಲ್ಲಿ ಚಿಂತನೆ ನಡೆಸಬೇಕಾಗಿದೆ. ವಿದ್ರೋಹಿ ಹಾಗು ವಿಚ್ಛಿದ್ರಕಾರಿ ಮನಸ್ಥಿತಿಯ ಸಂಘಟನೆಗಳು ಸಮಾಜ ಒಳಗಡೆ ರೂಪುಗೊಳ್ಳದಂತೆ ಎಚ್ಚರಿಕೆ ವಹಿಸಬೇಕಾಗಿದೆ ಎಂದರು.

ಐದು ವರ್ಷ ಪಿಎಫ್​ಐ ಬ್ಯಾನ್: ನಿಷೇಧ ಕ್ರಮವನ್ನು ಸ್ವಾಗತಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ

ನಿಷೇಧದ ಸುತ್ತ ಯಾವ ರಾಜಕೀಯ ಪಕ್ಷವೂ ತುಷ್ಟಿಕರಣದ ಮತ್ತು ತಕ್ಷಣದ ರಾಜಕೀಯ ಲಾಭ ಪಡೆದುಕೊಳ್ಳುವ ದೃಷ್ಟಿಯ ರಾಜಕಾರಣ ಮಾಡಬಾರದು. ರಾಜಕೀಯವಾಗಿ ನಿಮಗೆ ಲಾಭ ಕೊಟ್ಟರು, ದೇಶದ ಭವಿಷ್ಯದ ದೃಷ್ಟಿಯಿಂದ, ಸಮಾಜವನ್ನು ಈ ದುಷ್ಟ ಶಕ್ತಿಗಳ ಕೈಯಿಂದ ಬಿಡಿಸುವ ಕಾರ್ಯದಲ್ಲಿ ತೊಡಕಾಗಲಿದೆ.  ದೇಶದ ಭದ್ರತೆಯ, ಸಮಾಜದ ಗೌರವ ಕಾಪಾಡುವ ನಿಟ್ಟಿನಲ್ಲಿ, ದೇಶಪ್ರೇಮಿ ಮುಸ್ಲಿಮರು ಯೋಚನೆ ಮಾಡಬೇಕಾದ ಅಗತ್ಯ ಮತ್ತು ರಾಷ್ಟ್ರ ವಿರೋಧಿ ಹಾಗು ಮತಾಂಧತೆಯ ವಿರುದ್ಧ ಅರಿವು  ಮೂಡಿಸಬೇಕಾಗಿದೆ ಎಂದು ತಿಳಿಸಿದರು.

ನಿಷೇಧದ ನಂತರ ಪಿಎಫ್‌ಐ ಸಂಘಟನೆಗೆ ಸೇರಿದ ದುಷ್ಟ ಶಕ್ತಿಗಳು ಭೂಗತರಾಗಿ ಕಾರ್ಯನಿರ್ವಹಿಸುವ, ಸಮಾಜವನ್ನು. ಪ್ರಚೋದಿಸುವ, ದೇಶ ವಿರೋಧಿ ಚಟುವಟಿಕೆಗಳಲ್ಲಿ ಭಾಗವಹಿಸುವ ಸಾಧ್ಯತೆ ಇದ್ದು, ಇಂತಹ ಯಾವುದೇ ಘಟನೆಗಳು ಗಮನಕ್ಕೆ ಬಂದರೆ  ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿ ಮುಂದಾಗುವ ಸಮಸ್ಯೆಗಳನ್ನು ತಪ್ಪಿಸಲು ಕಾನೂನಿನ ಜೊತೆ ಕೈ ಜೋಡಿಸಲು ಮನವಿ ಮಾಡುತ್ತೇನೆ ಎಂದರು.

PFI Ban: 5 ವರ್ಷಗಳ ಕಾಲ ನಿಷೇಧ; ಕೇಂದ್ರ ಸರ್ಕಾರದ ಮಾಸ್ಟರ್‌ ಸ್ಟ್ರೋಕ್‌

ಮೋದಿ ,ಅಮಿತ್ ಶಾ ನೇತೃತ್ವದಲ್ಲಿ ಇದಕ್ಕೆ ಉತ್ತರ ಸಿಕ್ಕಿದೆ: ಪಿಎಫ್ ಬ್ಯಾನ್ ನಿರಿಕ್ಷತವಾದದ್ದು, ಪಿಎಫ್‌ಐ ತನ್ನ ಚಟುವಟೆಕೆಯನ್ನ ಮೇಲಿಂದ ಮೇಲೆ ವಿದ್ವಾಂಸಕ ಕೃತೆಗಳನ್ನ ದೇಶಾದ್ಯಂತ ಮಾಡಿದೆ. ಕೆಎಫ್‌ಡಿ, ಸಿಮಿ ಎಲ್ಲಾ ರೂಪಾಂತರದ ಫಲಶೃತಿ ಪಿಎಫ್‌ಐ. ಅವರಿಗೆ ಈ ದೇಶದ ಕಾನೂನು ಮೇಲೆ ಗೌರವವಿಲ್ಲ. ಹಲವಾರು ಕೇಸ್‌ಗಳಲ್ಲಿ ಅವರು ಭಾಗಿಯಾಗಿದ್ದಾರೆ. ಈ ಸಂಘಟನೆ ಬ್ಯಾನ್ ಆಗಬೇಕು ಎಂದು ಎಲ್ಲರೂ ಆಗ್ರಹ ಮಾಡುತ್ತಿದ್ದೇವು ಅದಕ್ಕೆ ಉತ್ತರ ಸಿಕ್ಕಿದೆ. ವಿಪಕ್ಷಗಳು ಸಹ ಯಾವಾಗ ಬ್ಯಾನ್ ಮಾಡ್ತೀರಾ ಅಂತ ಕೇಳುತ್ತಿದ್ದರು. ಮೋದಿ, ಅಮಿತ್ ಶಾ ನೇತೃತ್ವದಲ್ಲಿ ಇದಕ್ಕೆ ಉತ್ತರ ಸಿಕ್ಕಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

click me!