
ಬೆಂಗಳೂರು(ನ.23): ಜಾತಿಗಣತಿ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಗುವನ್ನು ಜಿಗುಟಿ ಅಳಿಸಿ, ತೊಟ್ಟಿಲು ತೂಗುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಸಿ.ಟಿ.ರವಿ ಆರೋಪಿಸಿದ್ದಾರೆ.
ಬುಧವಾರ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ನನಗಿರೋ ಮಾಹಿತಿ ಪ್ರಕಾರ ಕಾಂತರಾಜು ವರದಿಯಲ್ಲಿ ಒಂದೂವರೆ ಕೋಟಿ ಜನರ ವಿವರ ದಾಖಲಾಗಿಲ್ಲ. ಮುಖ್ಯಮಂತ್ರಿ ವರದಿ ಪರ ಇದ್ದು, ಉಪಮುಖ್ಯಮಂತ್ರಿ ವರದಿಗೆ ಸಹಮತ ಇಲ್ಲ. ಮುಖ್ಯಮಂತ್ರಿಗಳ ತೀರ್ಮಾನ ಇಷ್ಟವಿಲ್ಲ ಎಂದಾದರೆ ರಾಜೀನಾಮೆ ಕೊಟ್ಟು ಹೊರಗೆ ಬರಬೇಕು ಎಂದು ಒತ್ತಾಯಿಸಿದರು.
ಜಾತಿಗಣತಿ ವರದಿಯಲ್ಲಿ ಏನಿದೆ ಯಾರಿಗೂ ಗೊತ್ತಿಲ್ಲ: ಇದಕ್ಕೆ ವಿರೋಧವೇಕೆ ಎಂದ ಸಿದ್ದರಾಮಯ್ಯ?
ಸಿದ್ದರಾಮಯ್ಯಗೆ ಬದ್ಧತೆ ಇದ್ದರೆ ಹಿಂದಿನ ಅಧಿಕಾರಾವಧಿಯಲ್ಲೇ ವರದಿ ಬಿಡುಗಡೆ ಮಾಡಬೇಕಿತ್ತು. ಆದರೆ ಆ ಕೆಲಸವನ್ನು ಮಾಡಲಿಲ್ಲ. ಈಗಾಗಲೇ ವೀರಶೈವ ಸಮಾಜ, ಒಕ್ಕಲಿಗ ಸಮಾಜದವರು ವರದಿ ವೈಜ್ಞಾನಿಕವಾಗಿಲ್ಲ ಎಂದಿದ್ದಾರೆ. ಜಾತಿ ಗಣತಿ ಮಾಡುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಇದೆಯೇ ಹೊರತು ರಾಜ್ಯ ಸರ್ಕಾರಕ್ಕೆ ಇಲ್ಲ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ