
ಮದ್ದೂರು (ಸೆ.11): ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಓಲೈಕೆ ರಾಜಕೀಯ ಮಾಡುತ್ತಿದೆ. ಕಾಂಗ್ರೆಸ್‌ನವರಿಗೆ ತಾಕತ್ತಿದ್ದರೆ ಗಣೇಶಮೂರ್ತಿ ಮೆರವಣಿಗೆ ಮೇಲೆ ಕಲ್ಲೆಸೆದವರ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಿ ಎಂದು ಶಾಸಕ ಸಿ.ಎನ್.ಅಶ್ವತ್ಥನಾರಾಯಣ ಸವಾಲು ಹಾಕಿದ್ದಾರೆ.
ಪಟ್ಟಣದಲ್ಲಿ ನಡೆದ ಸಾಮೂಹಿಕ ಗಣೇಶ ವಿಸರ್ಜನಾ ಮೆರವಣಿಗೆ ಕಾರ್ಯಕ್ರಮದಲ್ಲಿ ಮಾತನಾಡಿ, ಕಾಂಗ್ರೆಸ್ ಸರ್ಕಾರ ನಮ್ಮ ತಾಳ್ಮೆಯನ್ನು ಪರೀಕ್ಷೆ ಮಾಡುತ್ತಿದೆ. ಪೊಲೀಸ್ ಠಾಣೆಯನ್ನು ಸುಡಲು ಹೋದ ಮುಸ್ಲಿಮರ ಮೇಲೆ ಕೇಸ್ ದಾಖಲು ಮಾಡಲು ಹಿಂಜರಿಯುತ್ತಾರೆ. ಕೇಸ್ ಹಾಕಿದ ಮೇಲೆ ವಾಪಸ್ ಪಡೆಯುತ್ತಾರೆ. ಇದು ಕಾನೂನು ಸುವ್ಯವಸ್ಥೆ ಕಾಪಾಡುವ ಸರ್ಕಾರ ಅಲ್ಲ. ಇದು ಜನ ವಿರೋಧಿ ಸರ್ಕಾರ ಎಂದು ಕಿಡಿಕಾರಿದರು.
ಕಳೆದ ವರ್ಷ ನಾಗಮಂಗಲದಲ್ಲಿ ಗಣೇಶನ ಮೆರವಣಿಗೆ ವೇಳೆ ಗಲಾಟೆ ಮಾಡಿದರು. ಕೆರಗೋಡಿನಲ್ಲಿ ಹನುಮ ಧ್ವಜ ಹಾರಿಸಲು ಬಿಡಲಿಲ್ಲ. ನಮ್ಮ ಸ್ವಾತಂತ್ರ್ಯಕ್ಕೆ ಅಡಚಣೆ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ, ಕಲ್ಲು ತೂರಿದವರ ಮೇಲೆ ಪ್ರಕರಣ ದಾಖಲಿಸುವ ಬದಲು ನಾಟಕ ಆಡುತ್ತಿದೆ. ಇವರ ವಿರುದ್ಧ ಗೂಂಡಾ ಕಾಯಿದೆ ದಾಖಲಿಸುವುದನ್ನು ಬಿಟ್ಟು ಬಿಜೆಪಿ, ಜೆಡಿಎಸ್ ನಾಯಕರನ್ನು ಟೀಕಿಸುತ್ತಾರೆ. ಕಾಂಗ್ರೆಸ್ ನಾಯಕರು ಅಧಿಕಾರವನ್ನು ಸದ್ಭಳಕೆ ಮಾಡಿಕೊಳ್ಳದೆ ಜನರನ್ನೇ ಅಯ್ಯೋ ಎನ್ನಿಸುತ್ತಿದ್ದಾರೆ ಎಂದು ಕುಟುಕಿದರು.
ಈ ಕಾಂಗ್ರೆಸ್ ಸರ್ಕಾರಕ್ಕೆ ಬುದ್ಧಿ ಕಲಿಸಬೇಕು. ನಿಮ್ಮ ತುಷ್ಟೀಕರಣ ರಾಜಕೀಯ ಹೆಚ್ಚು ದಿನ ನಡೆಯಲ್ಲ. ನಮ್ಮ ಆಚರಣೆಯನ್ನು ಮಾಡಿಯೇ ಮಾಡುತ್ತೇವೆ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ