Basangouda Patil Yatnal: ನನಗೆ ಗೃಹ ಖಾತೆ ಕೊಟ್ಟು ನೋಡಿ, ಮತ್ತೆ ಅಬ್ಬರಿಸಿದ ಯತ್ನಾಳ್

Published : Dec 18, 2021, 05:33 PM IST
Basangouda Patil Yatnal: ನನಗೆ ಗೃಹ ಖಾತೆ ಕೊಟ್ಟು ನೋಡಿ, ಮತ್ತೆ ಅಬ್ಬರಿಸಿದ  ಯತ್ನಾಳ್

ಸಾರಾಂಶ

* ಪರೋಕ್ಷವಾಗಿ ಗೃಹ ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟ ಬಿಜೆಪಿ ಶಾಸಕ * ನನಗೆ ಗೃಹ ಖಾತೆ ಕೊಟ್ಟು ನೋಡಿ ಎಂದು ಬಸನಗೌಡ ಪಾಟೀಲ್ ಯತ್ನಾಳ್ * ಪೊಲೀಸರ ಮೇಲೆ ದಾಳಿ ಮಾಡಿದರೆ ಸುಮ್ಮನಿರಬೇಕಾ ಎಂದು ಪ್ರಶ್ನೆ

ವಿಜಯಪುರ, (ಡಿ.18): ನನಗೆ ಗೃಹ ಸಚಿವ ಸ್ಥಾನ ನೀಡಿ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್(Basangouda Patil Yatnal) ಪರೋಕ್ಷವಾಗಿ ಬೇಡಿಕೆಯಿಟ್ಟಿದ್ದಾರೆ.

ಇಂದು(ಶನಿವಾರ) ವಿಜಯಪುರದ(Vijayapura) ರಂಗಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಯತ್ನಾಳ್, ಈಗ ಇರುವ ಗೃಹ ಸಚಿವರು ಒಳ್ಳೆಯವರಿದ್ದಾರೆ, ಆದ್ರೆ ಸಂಭಾಯಿತರಿದ್ದಾರೆ. ನನಗೆ ಗೃಹ ಸಚಿವ ಸ್ಥಾನ(Home Minister Post) ಕೊಟ್ಟು ನೋಡಿ, ಎಲ್ಲರಿಗೂ ಹೇಗೆ ಉತ್ತರ ಕೊಡ್ತೀನಿ ನೋಡಿ ಎಂದು ಪರೋಕ್ಷವಾಗಿ ಗೃಹ ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದಾರೆ.

Sangolli Rayanna Statue Row: ಬೆಳಗಾವಿಯಲ್ಲಿ ರಾಯಣ್ಣ ಪ್ರತಿಮೆ ಧ್ವಂಸ, 27 ಆರೋಪಿಗಳ ಬಂಧನ

ಈಗಿನ ಗೃಹ ಸಚಿವರಿಗೆ ಫಾರೆಸ್ಟ್ ಅಥವಾ ರೆವಿನ್ಯೂ ಖಾತೆ ಕೊಡಿ. ನನಗೆ ಗೃಹ ಖಾತೆ ಕೊಟ್ಟು ನೋಡಿ ಮಂಗಳೂರಿನಲ್ಲಿ ಗಲಾಟೆ ಮಾಡಿದವರಿಗೆ ಪಾಠ ಕಲಿಸುತ್ತೇನೆ ಎಂದ ಯತ್ನಾಳ್, ಪೊಲೀಸರ ಮೇಲೆ ದಾಳಿ ಮಾಡಿದರೆ ಸುಮ್ಮನಿರಬೇಕಾ ಎಂದು ಪ್ರಶ್ನಿಸಿದರು.

ಇನ್ನು ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆ ಬಗ್ಗೆ ಪ್ರತಿಕ್ರಿಯಿಸಿ, ಎಂಇಎಸ್, ಶಿವಸೇನೆ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಶಿವಸೇನೆ ಭಾಷಾ ವೈಷಮ್ಯಕ್ಕೆ ಬಿದ್ದದ್ದು ದುರ್ದೈವ. ಮಹಾರಾಷ್ಟ್ರ ಸರ್ಕಾರ ಸಲುವಾಗಿ ಶಿವಸೇನೆ ಹೀಗೆ ಮಾಡುತ್ತಿದೆ ಎಂದು ಎಂಇಎಸ್, ಶಿವಸೇನೆ ವಿರುದ್ಧ ಆಕ್ರೋಶ ಹೊರಹಾಕಿದರು.

ಕೊಲ್ಲಾಪುರದಲ್ಲಿ ಧ್ವಜ ಸುಟ್ಟವರ ಮೇಲು ಕ್ರಮಕ್ಕೆ ವಿಧಾನ ಸಭೆಯಲ್ಲಿ ನಿರ್ಣಯ ತೆಗೆದುಕೊಂಡಿದ್ದೇವೆ. ಇವೆಲ್ಲಾ ದೇಶ ವಿರೋಧಿ ಚಟುವಟಿಕೆಗಳು. ಉದ್ದೇಶ ಪೂರ್ವಕವಾಗಿ ಶಿವಾಜಿ ಮೂರ್ತಿ, ಸಂಗೊಳ್ಳಿ ರಾಯಣ್ಣ, ಅಂಬೇಡ್ಕರ್, ಬಸವಣ್ಣನ ಮೂರ್ತಿಗಳಿಗೆ ಅಪಮಾನ ಮಾಡಲಾಗುತ್ತಿದೆ. ಇದೆಲ್ಲದರ ಹಿಂದೆ ದೊಡ್ಡ ಗುಂಪಿದೆ. ಅದು ಯಾರೇ ಇದ್ದರು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಯಾವುದೇ ಮೂರ್ತಿಯ ಮೇಲೆ ಅಪಮಾನವಾದರು ಕ್ರಮವಾಗಬೇಕು. ರಾಷ್ಟ್ರ ಪುರುಷರ ಮೂರ್ತಿಗಳ ಮೇಲೆ ದಾಳಿ ಮಾಡುವವರ ಮೇಲೆ ತಕ್ಷಣವೇ ಕಠಿಣ ಕ್ರಮ ಕೈಗೊಳ್ಳಬೇಕು. ರಾಷ್ಟ್ರ ಪುರುಷರ ಮೂರ್ತಿಗೆ ಅಪಮಾನ ಮಾಡುವವರನ್ನು ಎಂದಿಗೂ ಕ್ಷಮಿಸಬಾರದು. ಇಂಥ ಘಟನೆಗಳು ನಡೆದಾಗ ತಕ್ಷಣವೇ ನಿರ್ಣಯ ತೆಗೆದುಕೊಂಡು ಕ್ರಮ ಕೈಗೊಳ್ಳಬೇಕು ಎಂದು ಗೃಹ ಸಚಿವರಿಗೆ ಮನವಿ ಮಾಡಿದರು

27 ಜನ ಪುಂಡರು ಅರೆಸ್ಟ್
ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಧ್ವಂಸ ಮಾಡಿದ ಆರೋಪದ ಮೇಲೆ ಪೊಲೀಸರು ಒಟ್ಟು 27 ಜನರನ್ನು ಬಂಧಿಸಿದ್ದಾರೆ.

 ಎಂಇಎಸ್(MES) ಪುಂಡರ ಅಟ್ಟಹಾಸ ಮಿತಿಮೀರಿದ ಹಿನ್ನೆಲೆಯಲ್ಲಿ ನಗರದ ಮೂರು ಪೊಲೀಸ್ ಠಾಣೆಯಲ್ಲಿ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲು ಮಾಡಿಕೊಂಡಿದ್ದಾರೆ. ಬೆಳಗಾವಿಯ ಕ್ಯಾಂಪ್ ಪೊಲೀಸ್ ಠಾಣೆ, ಖಡೇಬಜಾರ್ ಪೊಲೀಸ್ ಠಾಣೆ ಮತ್ತು ಮಾರ್ಕೆಟ್ ಠಾಣೆಯಲ್ಲಿ ಮೂರು ಪ್ರತ್ಯೇಕ ದೂರುಗಳು ದಾಖಲಾಗಿವೆ. 

ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದು, ಕಾನೂನು ಸುವ್ಯವಸ್ಥೆ ಹಾಳು ಮಾಡುವುದು, ಭಾಷಾ ವೈಷಮ್ಯ ಮೂಡಿಸುವುದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾರೆ ಎಂದು ನೂರಾರು ಎಂಇಎಸ್ ಪುಂಡರ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

ಏನಿದು ಘಟನೆ: 
ಬೆಳಗಾವಿ ನಗರದ ಅನಗೋಳದ ಕನಕದಾಸ ಕಾಲೋನಿಯಲ್ಲಿ ಇಂದು ನಸುಕಿನ ಜಾವ ಕಿಡಿಗೇಡಿಗಳು ಸಂಗೊಳ್ಳಿ ರಾಯಣ್ಣ ಪುತ್ಥಳಿ ವಿರೂಪಗೊಳಿಸಿರುವ ಘಟನೆ ನಡೆದಿದೆ. ಜನಸಂಚಾರವಿರದ ಹೊತ್ತಿನಲ್ಲಿ ದುಷ್ಕರ್ಮಿಗಳು ಆಗಮಿಸಿ ಪುತ್ಥಳಿ ಬೀಳಿಸಿ ವಿರೂಪಗೊಳಿಸಿ ತಮ್ಮ ಅಟ್ಟಹಾಸ ಮೆರೆದಿದ್ದಾರೆ. ಸಂಗೊಳ್ಳಿ ರಾಯಣ್ಣ ಪುತ್ಥಳಿ ಹಾನಿಗೊಳಿಸಿ ಖಡ್ಗ, ಗುರಾಣಿ ಬೇರೆ ಬೇರೆ ಕಡೆ ಇಟ್ಟು ವಿಕೃತಿ ಮೆರೆದಿದ್ದಾರೆ. ಸ್ಥಳಕ್ಕೆ ಟೀಳಕವಾಡಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ನಂತರ ಸ್ಥಳದಲ್ಲಿ ತೀವ್ರ ಗಲಾಟೆ, ಗದ್ದಲ ನಡೆದಿದೆ. ಕರ್ನಾಟಕ ಸರ್ಕಾರದ, ಪೊಲೀಸ್ ಇಲಾಖೆಯ ವಾಹನಗಳನ್ನು ಗುರಿಯಾಗಿಟ್ಟುಕೊಂಡು ಪುಂಡರು ಕಲ್ಲು ತೂರಾಟ ನಡೆಸಿದ್ದಾರೆ. ದುರ್ಘಟನೆಯಲ್ಲಿ ಅನೇಕ ಕಾರುಗಳು ಪುಡಿಯಾಗಿವೆ. ಈ ಘಟನೆಯ ನಂತರ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್