ಬಡವರಿಗೆ ಸಿಗಬೇಕಾದ ಸೈಟ್‌ ಸಿದ್ದರಾಮಯ್ಯ ಕಸಿದುಕೊಂಡಿದ್ದಾರೆ: ಸಿಎಂ ರಾಜೀನಾಮೆಗೆ ಬಿ.ಪಿ.ಹರೀಶ್ ಆಗ್ರಹ

By Girish Goudar  |  First Published Jul 12, 2024, 12:18 PM IST

ಬಡವರಿಗೆ ಸಿಗಬೇಕಾದ ನಿವೇಶನಗಳನ್ನ ಸಿಎಂ ಸಿದ್ದರಾಮಯ್ಯ ಅವರು ಕಸಿದುಕೊಂಡಿದ್ದಾರೆ. ಕೂಡಲೇ ಸಿಎಂ ರಾಜೀನಾಮೆ ಕೂಡಬೇಕು: ಬಿಜೆಪಿ ಶಾಸಕ ಬಿ.ಪಿ.ಹರೀಶ್ 


ದಾವಣಗೆರೆ(ಜು.12):  ಬಡವರಿಗೆ ಸಿಗಬೇಕಾದ ನಿವೇಶನಗಳನ್ನ ಸಿಎಂ ಸಿದ್ದರಾಮಯ್ಯ ಅವರು ಕಸಿದುಕೊಂಡಿದ್ದಾರೆ. ಕೂಡಲೇ ಸಿಎಂ ರಾಜೀನಾಮೆ ಕೂಡಬೇಕು. ಪ್ರತಿಭಟನೆ ಮಾಡಲು ಹೋದ ನಮ್ಮ ನಾಯಕರನ್ನು ಬಂಧಿಸಿದ್ದಾರೆ ಎಂದು ರಾಜ್ಯ ಸರ್ಕಾರದ  ವಿರುದ್ಧ ಬಿಜೆಪಿ ಶಾಸಕ ಬಿ.ಪಿ.ಹರೀಶ್ ಹರಿಹಾಯ್ದಿದ್ದಾರೆ. 

ಇಂದು(ಶುಕ್ರವಾರ) ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬಿ.ಪಿ.ಹರೀಶ್ ಅವರು, ನಾನು ಹಿಂದುಳಿದ ವರ್ಗಕ್ಕೆ ಸೇರಿದ್ದು ಹಾಗಾಗಿ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಜಾತಿಯ ಅಸ್ತ್ರ ಬೆಳೆಸಿದ್ದು ಅವರ ಶಕ್ತಿ ಕುಂದಿದೆ ಎಂಬುದು ತೋರಿಸುತ್ತದೆ ಎಂದು ವ್ಯಂಗ್ಯವಾಡಿದ್ದಾರೆ. 

Latest Videos

undefined

ಬೆನ್ನು ಬೆನ್ನಿಗೆ ಎರಡು ಕಂಟಕ.. ! ಅವಳಿ ಕಂಟಕದ ಸುಳಿಯಲ್ಲಿ ಸಿಲುಕಿದರಾ ಸಿಎಂ ಸಿದ್ದರಾಮಯ್ಯ?

ಎಸ್ಟಿ‌ ನಿಗಮದ ಹಣ ವೈಯಕ್ತಿಕ ಖಾತೆಗೆ ಹೋಗುತ್ತದೆ ಎಂದರೆ ಸಿಎಂ ಆರ್ಥಿಕ ಇಲಾಖೆಯ ಜವಾಬ್ದಾರಿ ಹೊಂದಿದ್ದಾರೆ. ಹೀಗಾಗಿ ಈ ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಮಾಜಿ ಸಚಿವ ನಾಗೇಂದ್ರ ಹಾಗೂ ಶಾಸಕ ಬಸನನಗೌಡ ದದ್ದಲ್ ಅವರನ್ನು ಏಕೆ ಬಂಧಿಸಿಲ್ಲಾ? ಎಂದು ಪ್ರಶ್ನಿಸಿದ್ದಾರೆ. 

2009 ರಲ್ಲಿ ಜೆ.ಎಚ್.ಪಟೇಲ್ ಬಡಾವಣೆಯಲ್ಲಿ ನಡೆದ ಅಕ್ರಮ ಪ್ರಕರಣವೂ ತನಿಖೆಯಾಗಲಿ. ಕಳೆದ ಸರ್ಕಾರದ ಅವಧಿಯಲ್ಲಿ ಬೋವಿ ಅಭಿವೃದ್ಧಿ ನಿಗಮದ ಬಗ್ಗೆ ತನಿಖೆಗೆ ಸರ್ಕಾರ ಮುಂದಾಗಿದೆ. ಎರಡು ದಿನಗಳಿಂದ ತನಿಖೆಗೆ ಸರ್ಕಾರ ಮುಂದಾಗಿದೆ. ಅದರ ಬಗ್ಗೆಯೂ ತನಿಖೆಯಾಗಲಿ ಎಂದ ಶಾಸಕ ಬಿ.ಪಿ. ಹರೀಶ್ ಆಗ್ರಹಿಸಿದ್ದಾರೆ. 

click me!