CT Ravi Father ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿಗೆ ಪಿತೃ ವಿಯೋಗ

By Suvarna News  |  First Published Jan 29, 2022, 3:22 PM IST

* ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿಗೆ ಪಿತೃ ವಿಯೋಗ 
* ತಿಮ್ಮೇಗೌಡ (92) ವಯೋಸಹಜ ಕಾಯಿಲೆಯಿಂದ ನಿಧನ
* ಭಾನುವಾರ ಸ್ವಗ್ರಾಮ ಚಿಕ್ಕಮಾಗರವಳ್ಳಿಯಲ್ಲಿ ಅಂತ್ಯಕ್ರಿಯೆ


ಚಿಕ್ಕಮಗಳೂರು, (ಜ.29): ಶಾಸಕ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ (CT Ravi) ಅವರ ತಂದೆ ತಿಮ್ಮೇಗೌಡ (92) ನಿಧನರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ತಿಮ್ಮೇಗೌಡ ಅವರು ಇಂದು(ಶನಿವಾರ) ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ,  ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. 

Tap to resize

Latest Videos

ಮಾಜಿ ಸಿಎಂ ಬಿ. ಎಸ್‌. ಯಡಿಯೂರಪ್ಪ ಮೊಮ್ಮಗಳು ಆತ್ಮಹತ್ಯೆ!

ಇಂದು(ಶನಿವಾರ) ಸಾಯಂಕಾಲ ಪಾರ್ಥಿವ ಶರೀರ ಸ್ವಗ್ರಾಮ ಸಿಟಿ ರವಿ ಅವರ ಸ್ವಗ್ರಾಮ ಚಿಕ್ಕಮಾಗರವಳ್ಳಿಗೆ ಆಗಮಿಸಲಿದ್ದು,  ನಾಳೆ (ಭಾನುವಾರ) ಬೆಳಗ್ಗೆ 11 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಇನ್ನು ತಂದೆಯ ಅಗಲಿಕೆ ಬಗ್ಗೆ ಸಿಟಿ ರವಿ ಟ್ವಿಟ್ಟರ್‌ನಲ್ಲಿ ನೋವು ಹಂಚಿಕೊಂಡಿದ್ದಾರೆ. ನನ್ನಾತ್ಮಬಲದ ಭಾಗವೊಂದು ಇಂದು ನನ್ನನ್ನಗಲಿದೆ. ಮೊದಲ ಬಾರಿಗೆ ಅಪ್ಪನಿಲ್ಲದೆ ಲೋಕವನ್ನು ನಾನೆದುರಿಸಬೇಕಾಗಿದೆ.  ಓಂಶಾಂತಿ ಅಣ್ಣ ಎಂದು ಬರೆದುಕೊಂಡಿದ್ದಾರೆ.

 

My father, my biggest strength has left us today. A life without Him is unimaginable.

Om Shanti Anna 🙏 pic.twitter.com/0BmoawKRJk

— C T Ravi 🇮🇳 ಸಿ ಟಿ ರವಿ (@CTRavi_BJP)

ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತೆ ನಿಗೂಢ ಸಾವು
ಚಿಕ್ಕಮಗಳೂರು: ಇತ್ತೀಚಿಗೆ ಮದುವೆಯಾಗಿದ್ದ ನವ ವಿವಾಹಿತೆ ಜಡಗನಹಳ್ಳಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾಳೆ.

ಸುಮಾ, ಶಂಕಾಸ್ಪದವಾಗಿ ಸಾವನ್ನಪ್ಪಿರುವ ವಿವಾಹಿತ ಮಹಿಳೆ. ಯುವತಿ ಪತಿ ಅಭಿಷೇಕ್​ ಜೊತೆಯಲ್ಲಿ ನಿನ್ನೆ ದಿನ ಇಡೀ ರಾತ್ರಿ ಅರಣ್ಯ ಪ್ರದೇಶದಲ್ಲೇ ಇದ್ದಳು ಎನ್ನಲಾಗಿದೆ.

ಆದರೆ ಬೆಳಗ್ಗೆ ವೇಳೆಗೆ ನವ ವಿವಾಹಿತೆ ಶವವಾಗಿ ಪತ್ತೆಯಾಗಿದ್ದಾಳೆ ಅನ್ನೋ ಆರೋಪ ಕೇಳಿಬಂದಿದೆ.

ಇನ್ನು ಮೃತ ಯುವತಿ ಒಂದು ವರ್ಷದ ಹಿಂದೆ ಅಭೀಷೇಕ್​ನನ್ನು ಪ್ರೀತಿಸಿ ಮದುವೆಯಾಗಿದ್ದಳು. ಘಟನೆ ಕುರಿತು ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

click me!