
ಕನ್ನಡಪ್ರಭ ವಾರ್ತೆ ಬೆಂಗಳೂರು (ಸೆ.23): ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಸಬ್ ಇನ್‌ಸ್ಪೆಕ್ಟರ್‌ಗೆ ಕಪಾಳಮೋಕ್ಷ ಮಾಡಿದ ಪ್ರಕರಣದಲ್ಲಿ ತುಮಕೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಶಾಸಕ ಬಿ. ಸುರೇಶ್‌ಗೌಡ ಅವರ ಪುತ್ರಿ ಐಶ್ವರ್ಯಾಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಿದೆ.
ಜಾಮೀನು ಕೋರಿ ಐಶ್ವರ್ಯಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರ ಪೀಠ ಈ ಆದೇಶ ಮಾಡಿತು. ನ್ಯಾಯಾಲಯದ ಹಿಂದಿನ ಸೂಚನೆಯಂತೆ ಐಶ್ವರ್ಯಾ ಅವರು ಮಹಿಳಾ ಪಿಎಸ್‌ಐ ಸವಿತಾ ಬಿ. ಪಾಟೀಲ್ ಅವರಲ್ಲಿ ವಿಡಿಯೊ ಮೂಲಕ ಬಹಿರಂಗವಾಗಿ ಕ್ಷ ಮೆ ಯಾಚಿಸಿದ್ದಾರೆ. ಈ ಕ್ಷ ಮೆಯಾಚನೆಯು ಸುದ್ದಿ ವಾಹಿನಿಗಳಲ್ಲೂ ಪ್ರಸಾರವಾಗಿದೆ. ಅಲ್ಲದೆ, ಅವರ ತಂದೆ ಶಾಸಕ ಸುರೇಶ್‌ಗೌಡ ಕೂಡ ಈ ಹಿಂದೆಯೇ ಸಾರ್ವಜನಿಕವಾಗಿ ಕ್ಷ ಮೆ ಯಾಚಿಸಿದ್ದಾರೆ. ಅರ್ಜಿದಾರರ ವಿರುದ್ಧದ ಅಪರಾಧಗಳಿಗೆ ಗರಿಷ್ಠ 2 ವರ್ಷಗಳವರೆಗೆ ಮಾತ್ರ ಶಿಕ್ಷೆ ವಿಧಿಸಲು ಅವಕಾಶವಿದೆ. ಅವರನ್ನು ಬಂಧಿಸುವ ಅಗತ್ಯತೆ ಕಂಡು ಬರುವುದಿಲ್ಲ ಎಂಬ ಐಶ್ವರ್ಯಾ ಪರ ವಕೀಲರ ವಾದ ಪರಿಗಣಿಸಿದ ಪೀಠ ಈ ಆದೇಶ ಮಾಡಿದೆ.
ಸೋಮವಾರದ ವಿಚಾರಣೆಯ ವೇಳೆ, ಐಶ್ವರ್ಯಾ ವರ್ತನೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದ ನ್ಯಾಯಮೂರ್ತಿಗಳು, ಪಿಎಸ್‌ಐ ಬಳಿ ಐಶ್ವರ್ಯಾ ಕ್ಷಮೆಯಾಚಿಸಿದರೆ ಮಾತ್ರ ನಿರೀಕ್ಷಣಾ ಜಾಮೀನು ಅರ್ಜಿ ಪರಿಗಣಿಸುವುದಾಗಿ ತಿಳಿಸಿತ್ತು. ಆ.12ರಂದು ಶ್ರೀರಂಗಪಟ್ಟಣ ತಾಲೂಕಿನ ಆರತಿ ಉಕ್ಕಡದ ಅಹಲ್ಯಾದೇವಿ ದೇವಸ್ಥಾನಕ್ಕೆ ಐಶ್ವರ್ಯಾ ತಮ್ಮ ಮಕ್ಕಳೊಂದಿಗೆ ತೆರಳಿದ್ದರು. ಭಕ್ತರ ದಟ್ಟಣೆ ಹೆಚ್ಚಿದ್ದ ಕಾರಣ ಗರ್ಭಗುಡಿಗೆ ನೇರ ಪ್ರವೇಶ ನೀಡುವ ವಿಚಾರವಾಗಿ ಐಶ್ವರ್ಯಾ ಮತ್ತು ಭದ್ರತಾ ಕರ್ತವ್ಯದಲ್ಲಿದ್ದ ಪಿಎಸ್‌ಐ ಸವಿತಾ ಬಿ. ಪಾಟೀಲ್ ನಡುವೆ ವಾಗ್ವಾದ ನಡೆದಿತ್ತು. ಆ ವೇಳೆ ಐಶ್ವರ್ಯಾ ಪಿಎಸ್‌ಐಗೆ ಕಪಾಳಮೋಕ್ಷ ಮಾಡಿದ್ದರು. ಈ ಸಂಬಂಧ ಕೇಸ್ ದಾಖಲಾದಕ್ಕೆ ಬಂಧನದ ಭೀತಿಯಿಂದ ಐಶ್ವರ್ಯಾ ನಿರೀಕ್ಷಣಾ ಜಾಮೀನು ಕೋರಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ